ಯಾದಗಿರಿ | ಬಾಲಕಿಯ ಅತ್ಯಾಚಾರ: ದೂರು ದಾಖಲಿಸಿದ್ದಕ್ಕೆ ಸವರ್ಣೀಯರಿಂದ ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ

Date:

Advertisements

14 ವರ್ಷದ ದಲಿತ ಸಮುದಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಂಧಾನಕ್ಕೆ ಒಪ್ಪದ ಕುಟುಂಬ ಮತ್ತು ದಲಿತ ಕುಟುಂಬಗಳಿಗೆ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ‌ಗ್ರಾಮದಲ್ಲಿ ನಡೆದಿದೆ.

ತಮ್ಮ ಮಾತಿನಂತೆ ಸಂಧಾನಕ್ಕೆ ಒಪ್ಪದೆ ದೂರು ನೀಡಿದರು ಎಂಬ ಕಾರಣಕ್ಕೆ ದಲಿತ ಕುಟುಂಬವನ್ನು ಬಹಿಷ್ಕರಿಸಿರುವ ಸವರ್ಣೀಯರು, ಗ್ರಾಮದ ಅಂಗಡಿಗಳಲ್ಲಿ ದಿನಸಿ ಸಾಮಗ್ರಿ ನೀಡದಂತೆ ಷರತ್ತು ವಿಧಿಸಿದ್ದಾರೆ.

ಈ ಸಾಮಾಜಿಕ ಬಹಿಷ್ಕಾರದಿಂದಾಗಿ ಗ್ರಾಮದ ದಲಿತ ಸಮುದಾಯದ ಮಕ್ಕಳಿಗೆ ಅಗತ್ಯವಿರುವ ಪೆನ್ನು, ನೋಟುಬುಕ್ ಮತ್ತು ದೈನಂದಿನ ದಿನಸಿ ಸಾಮಗ್ರಿ ಸಿಗದೆ ಹಲವು ಕುಟುಂಬಗಳು ಪರದಾಡುತ್ತಿವೆ. ಗ್ರಾಮದಲ್ಲಿ ಕಡಿಮೆ ಸಂಖ್ಯೆಯಲ್ಲಿರುವ ದಲಿತರು, ಇದೀಗ ಸಾಮಾಜಿಕ ಬಹಿಷ್ಕಾರದಿಂದಾಗಿ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

Advertisements

ಬಹಿಷ್ಕಾರಕ್ಕೆ ಕಾರಣವೇನು?

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭಿಣಿ ಆಗಲು ಕಾರಣನಾಗಿದ್ದ ಯುವಕನ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಕ್ಕೆ ಸಂಬಂಧಿಸಿ ಸಂತ್ರಸ್ತೆ ಕುಟುಂಬಸ್ಥರು ಸಂಧಾನಕ್ಕೆ ಒಪ್ಪದೆ, ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿದ್ದರಿಂದ ಕೋಪಗೊಂಡ ಗ್ರಾಮದ ಸವರ್ಣೀಯರು, ಇಡೀ ಗ್ರಾಮದ ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.

ದಲಿತ 9

ಗ್ರಾಮದಲ್ಲಿ ದಲಿತರಿಗ್ಯಾರಿಗೂ ದಿನಸಿ ಹಾಗೂ ಮತ್ತಿತರೆ ದೈನಂದಿನ ಬಳಕೆ ವಸ್ತುಗಳನ್ನು ಮಾರಾಟ ಮಾಡದಂತೆ ಕಟ್ಟಪ್ಪಣೆ ಹೊರಡಿಸಲಾಗಿದೆ ಎನ್ನಲಾಗಿದೆ. ಉಪ್ಪು ಖರೀದಿಸಲು ಅಂಗಡಿಯೊಂದಕ್ಕೆ ತೆರಳಿದ್ದ ದಲಿತ ಮಹಿಳೆ ಮತ್ತು ಪೆನ್ನು ಖರೀದಿಸಲು ತೆರಳಿದ್ದ ಶಾಲಾ ಮಕ್ಕಳಿಗೆ ಅಂಗಡಿ ಮಾಲೀಕರು ಬಹಿಷ್ಕಾರ ಹಾಕಿರುವ ವಿಚಾರವನ್ನು ಹೇಳಿದ್ದಾರೆ ಎನ್ನಲಾಗಿದೆ.

ಇಂಥ ಬಹಿಷ್ಕಾರ ಕುರಿತ ಧ್ವನಿಮುದ್ರಿಕೆ (ಆಡಿಯೋ ವಾಯ್ಸ್) ಇದೀಗ ವೈರಲ್‌ ಆಗಿದ್ದು, ಅದರಲ್ಲಿ ಯಾವುದೇ ತರಹದ ವಸ್ತುಗಳು ನೀಡಬಾರದು ಎಂದು ತಮಗೆ ಗ್ರಾಮದ ಪ್ರಮುಖರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆಂದು ಅಂಗಡಿಯವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಶಾಲೆಗೆ ಹೊರಟಿರುವ ಮಕ್ಕಳಿಗಾದರೂ ಪೆನ್ನು ಪೆನ್ಸಿಲ್‌ ಆದರೂ ನೀಡಿ ಎಂದು ಯುವಕರು ಕೇಳಿಕೊಂಡರೂ ಕೊಡಲೊಪ್ಪದ ಅಂಗಡಿ ಮಾಲೀಕರು, ಪೆನ್ನು, ಪುಸಕ್ತವಷ್ಟೇ ಅಲ್ಲ, ನಿಮ್ಮ ಮಂದಿಗೆ (ದಲಿತರು) ಯಾವುದನ್ನೂ ಕೊಡಬಾರದು ಎಂದು ಆಜ್ಞೆಯಾಗಿದೆ ಎಂದು ತಿಳಿಸಿದ್ದಾರೆ. ಈ ಸಾಮಾಜಿಕ ಕ್ರೌರ್ಯದಿಂದಾಗಿ ಬೆರಳಣಿಕೆಯಷ್ಟಿರುವ ಬಪ್ಪರಗಾ ಗ್ರಾಮದ ದಲಿತ ವರ್ಗದಲ್ಲಿ ಆತಂಕ ಮನೆ ಮಾಡಿದೆ.

ಘಟನೆಯ ಹಿನ್ನೆಲೆ:

ಬಪ್ಪರಗಾ ಗ್ರಾಮದ 15 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿದ್ದ ಪ್ರಬಲ ಜಾತಿ ಯುವಕನೊಬ್ಬ ಆಕೆಯ ಜತೆಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ. ಆಕೆ 5 ತಿಂಗಳ ಗರ್ಭಿಣಿಯಾಗಿದ್ದು, ಮದುವೆಗೆ ನಿರಾಕರಿಸಿದ್ದ.

ಈ ಸಂಬಂಧ ಒಂದು ತಿಂಗಳ ಹಿಂದೆ ನಾರಾಯಣಪುರ ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಬಾಲಕಿ ತಾಯಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ತಮ್ಮೆದುರು ಸಂಧಾನಕ್ಕೆ ಬರುವ ಬದಲು ನೇರವಾಗಿ ಠಾಣೆಗೆ ತೆರಳಿ ದೂರು ದಾಖಲಿಸಿದ್ದಕ್ಕೆ ಆಕ್ರೋಶಗೊಂಡ ಸವರ್ಣೀಯರು, ಇಡೀ ದಲಿತ ಸಮುದಾಯಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎನ್ನಲಾಗಿದೆ.

ಪರಿಶಿಷ್ಟ ಸಮುದಾಯದ ಜನರ ಜೊತೆಗೆ ಯಾವುದೇ ರೀತಿಯ ವ್ಯವಹಾರ ಮಾಡದಂತೆ ಎಲ್ಲ ಅಂಗಡಿಗಳಿಗೆ ತಾಕೀತು ಮಾಡಿ, ನಮಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ದಿನಸಿ ಪದಾರ್ಥವಷ್ಟೇ ಅಲ್ಲ, ಶಾಲಾ ಮಕ್ಕಳಿಗೆ ಪೆನ್ನು, ನೋಟ್‌ಬುಕ್ ಸೇರಿದಂತೆ ಯಾವುದೇ ಸಾಮಗ್ರಿಗಳನ್ನೂ ಮಾರಾಟ ಮಾಡುತ್ತಿಲ್ಲ ಎಂದು ಬಪ್ಪರಗಿ ಗ್ರಾಮದ ದಲಿತರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X