ಕೇಂದ್ರ ಸರ್ಕಾರ ತಿದ್ದುಪಡಿ ತರಲು ವಕ್ಫ್ ಮಸೂದೆ -2024 ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲಾ ಸಮಿತಿಯಿಂದ ಆಝಾದ್ ಪಾರ್ಕ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.
ಈ ವೇಳೆ ಜಿಲ್ಲಾಧ್ಯಕ್ಷ ಗೌಸ್ ಮುನೀರ್ ಮಾತನಾಡಿ, “ಒಕ್ಕೂಟ ಬಿಜೆಪಿ ಸರ್ಕಾರವು ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ ತರಲು ಹೊರಟಿದ್ದು, ಇದು ಸಂವಿಧಾನ ವಿರೋಧಿಯಾಗಿದೆ. ಈ ಹಿಂದೆ ಮುಸಲ್ಮಾನರು ಸಮುದಾಯದ ಧಾರ್ಮಿಕ ಚಟುವಟಿಕೆಗಳಿಗೆ ಬಳುಸುವ ಸಲುವಾಗಿ ತಮ್ಮ ಆಸ್ತಿಗಳನ್ನು ವಕ್ಫ್ ಬೋರ್ಡ್‌ಗೆ ಹಸ್ತಾಂತರಿಸಿ ದಾನ ಮಾಡಿರುವುದಾಗಿದೆ. ಇದು ಮುಸ್ಲಿಮರ ಖಾಸಗಿ ಸ್ವತ್ತಾಗಿದ್ದು, ಇದೀಗ ಕೇಂದ್ರ ಸರ್ಕಾರವು ದುರುದ್ದೇಶದಿಂದ ವಕ್ಫ್ ಆಸ್ತಿಗಳನ್ನು ಕಬಳಿಸುವ ಸಲುವಾಗಿ ವಕ್ಫ್ ಬೋರ್ಡ್‌ನ ಕಾನೂನುಗಳನ್ನು ತಿದ್ದುಪಡಿ ಮಾಡಲು ಹೊರಟಿದೆ. ಇದು ಜಾತ್ಯತೀತ ಮೌಲ್ಯಗಳ ವಿರುದ್ಧವಾಗಿರುವ ಈ ಮಸೂದೆ ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಸವರ್ಣೀಯರಿಂದ ದಲಿತರಿಗೆ ಬಹಿಷ್ಕಾರ: ಜಿಲ್ಲಾಡಳಿತದಿಂದ ಶಾಂತಿ ಸಭೆ
ಎಸ್‌ಡಿಪಿಐ ಮೂಡಿಗೆರೆ ವಿಧಾನಸಭಾ ಅಧ್ಯಕ್ಷ ಅಂಗಡಿ ಚಂದ್ರು, ಎಸ್‌ಡಿಪಿಐ ಜಿಲ್ಲಾ ಮುಖಂಡರಾದ ಅಝ್ಮತ್ ಪಾಷ, ಅತೀಖ್, ಎಐಎಂಡಿಎಫ್‌ನ ರಾಜ್ಯಾಧ್ಯಕ್ಷ ನಾಸೀರ್ ಅಹಮದ್, ಧರ್ಮ ಗುರು ಮೌಲಾನ ಯೂನುಸ್ ಅವರು ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ರಿಜ್ವಾನ್ ಹುಸೇನ್, ಜಿಲ್ಲಾ ಕೋಶಾಧಿಕಾರಿ ಕೆ ಪಿ ಖಾಲಿದ್, ಜಿಲ್ಲಾ ಸಮಿತಿ ಸದಸ್ಯ ಮುಸ್ತಫಾ ಆಲ್ದೂರು, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಆರೀಫ್, ಅಜ್ಞಾನ್ ಆಲ್ದೂರು, ಗ್ರಾಮ ಸಮಿತಿ ಅಧ್ಯಕ್ಷ ಮನ್ಸೂರ್, ಮುಸ್ಲಿಂ ಧರ್ಮ ಗುರುಗಳು ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ಇದ್ದರು.