ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ತೊಟ್ನಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಅರೆಬೆತ್ತಲೆಯಾಗಿ ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಹಿಡಿದು ಓಡಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಗ್ರಾಮದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಗ್ರಾಮದ ಯುವಕರ ಮಧ್ಯೆ ಜಗಳವಾಗಿತ್ತು ಎಂದು ಹೇಳಲಾಗುತ್ತಿದೆ. ಈ ಸಂಬಂಧ ಮಳಖೇಡ ಠಾಣೆಯ ಪೊಲೀಸರು ಗ್ರಾಮಸ್ಥರೊಂದಿಗೆ ಶಾಂತಿ ಸಂಧಾನ ಮಾಡಿದ್ದರು.

ಈ ನಡುವೆ ಕಳೆದ ಶನಿವಾರ ಯುವಕ ಕೈಯಲ್ಲಿ ತಲ್ವಾರ್ ಹಿಡಿದು ಓಡಾಡಿರುವುದಾಗಿ ವರದಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ತಲ್ವಾರ್ ಹಿಡಿದ ಯುವಕನ 25 ಸೆಕೆಂಡ್‌ಗಳ ವಿಡಿಯೋ ಹರಿದಾಡುತ್ತಿದೆ. ವಿಡಿಯೋ ವೈರಲಾದ ಹಿನ್ನೆಲೆಯಲ್ಲಿ ಮಳಖೇಡ ಪೊಲೀಸರು ಯುವಕನನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ. ಯುವಕನ ವಿವರ ಲಭ್ಯವಾಗಿಲ್ಲ.
