ಬಿಜೆಪಿ ಶಾಸಕ ಮುನಿರತ್ನ ಜಾತಿ ನಿಂದನೆ ಮಾಡಿದ್ದು, ಕೂಡಲೇ ಎಸ್ ಸಿ-ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ದೂರು ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕದ ವತಿಯಿಂದ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು ಅವರಿಗೆ ಮನವಿ ಸಲ್ಲಿಸಿದರು.
ಬಿಬಿಎಂಪಿ ಗುತ್ತಿಗೆದಾರನಿಂದ ಜೀವ ಬೆದರಿಕೆ ,ಜಾತಿ ನಿಂದನೆ ಮಾತನಾಡಿದ್ದು ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಈ ಸಂಬಂಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಸೋಮಶೇಖರ್ ಬಣ್ಣದಮನೆ ಮಾತನಾಡಿ, ದಲಿತ ಸಮುದಾಯ ಹಾಗೂ ಒಕ್ಕಲಿಗ ಸಮುದಾಯವನ್ನು ಬಿಜೆಪಿ ಶಾಸಕ ಮುನಿರತ್ನ ಕೀಳಾಗಿ ಮಾತನಾಡಿದ್ದು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನು ಸೂಕ್ತ ತನಿಖೆ ನಡೆಸಿ ಸರಕಾರ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಜರುಗಿಸಬೇಕು ಎಂದರು.
ಈ ಸುದ್ದಿ ಓದಿದ್ದೀರಾ ? ಲಂಚ, ಜೀವ ಬೆದರಿಕೆ ಆರೋಪ | ಬಿಜೆಪಿ ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್
ಶಾಸಕ ಮುನಿರತ್ನ ಕೀಳು ಮನಸ್ಥಿತಿಯಿಂದ ಕೀಳಾಗಿ ಇಂತಹ ಪದಗಳನ್ನು ಬಳಸಿದ್ದಾರೆ. ಎರಡು ಸಮುದಾಯಕ್ಕೆ ಜಾತಿಗಳನ್ನು ಎತ್ತಿಕಟ್ಟುವ ಹುನ್ನಾರ ನಡೆಸಿದ್ದಾರೆ. ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕು ಎಂದು ಹೇಳಿದರು.
ಈ ವೇಳೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾದ ನಿಮಗಲ್ ರಾಮಕೃಷ್ಣ, ವಿಜಯನಗರ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷರಾದ ಮಹೇಶ್ ವಕೀಲ, ಬಳ್ಳಾರಿ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಪೀರ್ ಭಾಷಾ, ವಿಜಯನಗರ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್, ಯುವ ಬರಹಗಾರ ವಿಶಾಲ್ ಮಾಸರ್, ಚಲವಾದಿಕೇರಿ ಪ್ರಕಾಶ್, ಸುನಿಲ್ ಕುಮಾರ್, ಜಯಣ್ಣ ಪಟ್ಟಿ, ದಮಾಣಿ ಅಂಬರೀಶ್, ಇಮ್ತಿಯಾಜ, ಮೋಹನ್ ಕುಮಾರ್, ರಮೇಶ್ ಕುಮಾರ್, ಯೋಹನ್, ಸುನಿಲ್ ಕುಮಾರ್ ಚಿತ್ತವಾಡಗಿ, ಅಲ್ಲಾಭಕ್ಷಿ ಕಲಬುರ್ಗಿ ಸೇರಿದಂತೆ ಇನ್ನಿತರರು ಹಾಜರಿದ್ದರು.
