ಶಿರಾ ಗೇಟ್ ರಸ್ತೆ ಸಂಚಾರಕ್ಕೆ ಮುಕ್ತ : ಸಚಿವ ಪರಮೇಶ್ವರ

Date:

Advertisements

ಕಳೆದೈದು ತಿಂಗಳಿಂದ ಬಂದ್ ಮಾಡಲಾಗಿದ್ದ ನಗರದ ಶಿರಾ ಗೇಟ್ ರಸ್ತೆಯನ್ನು ಇಂದಿನಿಂದ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.

ತುಮಕೂರು ನಗರದ ಎಸ್.ಮಾಲ್ ಬಳಿ ಲೋಕೋಪಯೋಗಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸುಮಾರು 6.65 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪುನರ್ ನಿರ್ಮಿಸಿರುವ ಸೇತುವೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಅಮಾನಿಕೆರೆ ಕೋಡಿ ನೀರು ಹರಿಯುವ ರಾಷ್ಟ್ರೀಯ ಹೆದ್ದಾರಿ 4ರ ಸೇತುವೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿ ಸಾವುಗಳು ಸಂಭವಿಸುತ್ತಲೇ ಇದ್ದವು. ಕಿರಿದಾಗಿದ್ದ ಈ ಸೇತುವೆಯನ್ನು ಅಗಲೀಕರಣಗೊಳಿಸಿ, ಹೊಸ ಸೇತುವೆಯನ್ನು ನಿರ್ಮಿಸಬೇಕೆಂದು ಈ ಭಾಗದ ಜನರು, ಜನಪ್ರತಿನಿಧಿಗಳಿಂದ ಬಹು ದಿನಗಳ ಬೇಡಿಕೆಯಿತ್ತು. ರಾಜ್ಯದ 15 ಜಿಲ್ಲೆ ಸೇರಿ ಜಿಲ್ಲೆಯ ಪಾವಗಡ, ಕೊರಟಗೆರೆ, ಶಿರಾ, ಮಧುಗಿರಿ ಭಾಗಕ್ಕೆ ಇದೇ ರಸ್ತೆಯಿಂದ ತೆರಳಬೇಕಿತ್ತು. ರಸ್ತೆ ಕಾಮಗಾರಿ ಕೈಗೊಂಡ ನಂತರ ವಾಹನಗಳು ಬಳಸಿಕೊಂಡು ಹನುಮಂತಪುರ ಮೂಲಕ ಸಾಗಬೇಕಿತ್ತು. ಈಗ ಸೇತುವೆ ಅಗಲೀಕರಣ ಕಾಮಗಾರಿ ಪೂರ್ಣಗೊಂಡಿರುವುದರಿಂದ ವಾಹನಗಳು ಮುಕ್ತವಾಗಿ ಸಂಚರಿಸಬಹುದಾಗಿದೆ ಎಂದು ಹೇಳಿದರು.

ಗುಬ್ಬಿ ರಸ್ತೆಯಲ್ಲಿರುವ ಭೀಮಸಂದ್ರದ ಸೇತುವೆಯನ್ನೂ ಸಹ ಅಗಲೀಕರಣಗೊಳಿಸುವ ಕಾಮಗಾರಿಯನ್ನು ಸದ್ಯದಲ್ಲೆ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.

Advertisements

ಬಡವರ ಏಳಿಗೆಗಾಗಿ ಗ್ಯಾರಂಟಿ ಯೋಜನೆ :
ಬಡವರು ಬಡವರಾಗಿಯೇ ಉಳಿಯಬಾರದೆಂಬ ಉದ್ದೇಶದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಲ್ಲಿ ಯಾವುದೇ ರಾಜಕಾರಣವಿಲ್ಲ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಿಂತಿವೆ ಎಂಬ ಟೀಕೆಗಳು ಬರುತ್ತಲೇ ಇವೆ. ಇತ್ತೀಚೆಗಷ್ಟೇ ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಚಾಲನೆ ನೀಡಿದ ಎತ್ತಿನಹೊಳೆ ಮೊದಲ ಹಂತದ ಯೋಜನೆಯು ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಹಿಡಿದ ಕೈಗನ್ನಡಿಯಾಗಿದೆ. ಯಾವುದೇ ಕಾರಣಕ್ಕು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ತುಮಕೂರಿಗೆ ಮೆಟ್ರೋ ರೈಲು ಸಂಚಾರ ಸೌಲಭ್ಯವನ್ನು ತರುವ ನಿಟ್ಟಿನಲ್ಲಿ ವಿಸ್ತೃತ ವರದಿಯನ್ನು ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲೇ ಅನುಮೋದನೆ ನೀಡಲಾಗುವುದೆಂದರು.

ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ ವಸಂತನರಸಾಪುರದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದ ನಂತರ ಎಸ್ ಮಾಲ್ ಬಳಿಯಿರುವ ಈ ಸೇತುವೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಈ ಸೇತುವೆ ಪುನರ್ ನಿರ್ಮಾಣದಿಂದ ಸಂಚಾರ ದಟ್ಟಣೆ ಕಡಿಮೆಯಾಗಿ ಸುಗಮ ಸಂಚಾರಕ್ಕೆ ಅನುವಾಲಿದೆ ಎಂದರಲ್ಲದೆ ನಿಗಧಿತ ಅವಧಿಯೊಳಗೆ ಗುಣಮಟ್ಟದ ಸೇತುವೆ ನಿರ್ಮಾಣ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರ ನಾರಾಯಣಪ್ಪ ಅವರನ್ನು ಅಭಿನಂದಿಸಿದರು.


ಶಾಸಕ ಬಿ. ಸುರೇಶ್‌ಗೌಡ ಮಾತನಾಡಿ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ನಾನೆಂದಿಗೂ ರಾಜಕಾರಣ ಮಾಡುವುದಿಲ್ಲ. ವೇಗವಾಗಿ ಬೆಳೆಯುತ್ತಿರುವ ತುಮಕೂರು ನಗರವನ್ನು ಎಕನಾಮಿಕ್ ಹಬ್ ಆಗಿ ಅಭಿವೃದ್ಧಿಗೊಳಿಸಬೇಕು. ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಹೊಸ-ಹೊಸ ಕೈಗಾರಿಕೆಗಳನ್ನು ಸೆಳೆಯಬೇಕು. ನೂತನ ವಿಶ್ವವಿದ್ಯಾಲಯವನ್ನು ಶೀಘ್ರವಾಗಿ ಉದ್ಘಾಟಿಸಬೇಕು. ವಾಯುವಿಹಾರ ಮಾಡುವವರಿಗೆ ಅಮಾನಿಕೆರೆ ಉಚಿತ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕೆಂದು ಸಚಿವರಿಗೆ ಮನವಿ ಮಾಡಿದರಲ್ಲದೆ ಮುಂದಿನ 3.5 ವರ್ಷದೊಳಗೆ ಮೆಟ್ರೋ ರೈಲು ನಗರಕ್ಕೆ ಬರಬೇಕೆಂಬ ಆಶಯ ವ್ಯಕ್ತಪಡಿಸಿದರು.

ಅಧ್ಯಕ್ಷತೆವಹಿಸಿ ಮಾತನಾಡಿದ ಜಿ.ಬಿ. ಜ್ಯೋತಿಗಣೇಶ್ ಸೇತುವೆ ಪುನರ್ ನಿರ್ಮಾಣ ಕೈಗೊಂಡ ನಂತರ ಸ್ಥಳೀಯರಿಂದ ಪ್ರತೀದಿನ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕೆಂದು ಒತ್ತಡಗಳು ಬರುತ್ತಲೇ ಇದ್ದವು. ಇಂದಿನಿಂದ ಸೇತುವೆಯು ವಾಹನ ಸಂಚಾರಕ್ಕೆ ಲೋಕಾರ್ಪಣೆಗೊಂಡಿರುವುದು ಸಂತಸ ತಂದಿದೆ. ನಗರದ ಕುಡಿಯವ ನೀರು ಹಾಗೂ ಒಳಚರಂಡಿ ವ್ಯವಸ್ಥೆಗಾಗಿ 100 ಕೋಟಿ ರೂ.ಗಳಿಗಿಂತ ಹೆಚ್ಚಿನ ಅನುದಾನದ ಅಗತ್ಯವಿದ್ದು, ಅಗತ್ಯ ಅನುದಾನ ಒದಗಿಸುವಲ್ಲಿ ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ನ ಮಾಜಿ ಸದಸ್ಯ ಹುಲಿ ನಾಯ್ಕರ್, ಮಾಜಿ ಸಚಿವ ರೇವಣ್ಣ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜಾ, ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಮಂಜಪ್ಪ, ಅಧೀಕ್ಷಕ ಇಂಜಿನಿಯರ್ ಜಿ.ಸಿ. ಜಗಧೀಶ್, ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್, ಅಪರ ಜಿಲ್ಲಾಧಿಕಾರಿ ಡಾ: ತಿಪ್ಪೇಸ್ವಾಮಿ, ಹಿರಿಯ ಪತ್ರಕರ್ತ ಎಸ್.ನಾಗಣ್ಣ, ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X