ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಅಗರಖೇಡ ರಸ್ತೆಯ ಇಂಡಿ ಬ್ರಾಂಚ್ ಕಾಲುವೆಯ ಹತ್ತಿರ ಯುವಕನೋರ್ವನನ್ನು ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಕೊಲೆಗೀಡಾದ ಯುವಕನನ್ನು ಸಂಕೇತ ದಾಮು ಜಾದವ್ (17) ಎಂದು ಗುರುತಿಸಲಾಗಿದೆ. ಈತ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.
ಹಳೆ ವೈಷಮ್ಯದ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಇಂಡಿ ಶಹರ ಸಿಪಿಐ ರತನಸಿಂಗ ಜೀರಗ್ಯಾಳ ಸೇರಿದಂತೆ ಪೊಲೀಸ್ ಇಲಾಖೆಯ ಹಲವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಇಂಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
