ತುಮಕೂರಿಗೆ ರೂ. 70 ಕೋಟಿ ರೂ. ವೆಚ್ಚದ ಕಾರ್ಡಿಯಾಲಜಿ ಕೇಂದ್ರ : ಗೃಹ ಸಚಿವ ಪರಮೇಶ್ವರ್

Date:

Advertisements

ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಭಾಗವಾಗಿ ತುಮಕೂರು ಜಿಲ್ಲೆಯಲ್ಲಿ 70 ಕೋಟಿ ರೂ. ವೆಚ್ಚದಲ್ಲಿ ಕಾರ್ಡಿಯಾಲಜಿ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

ತುಮಕೂರು ನಗರದ ಎಸ್.ಮಾಲ್ ಬಳಿ ಲೋಕೋಪಯೋಗಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸುಮಾರು 6.65 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪುನರ್ ನಿರ್ಮಿಸಿರುವ ಸೇತುವೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಹೃದ್ರೋಗ ಸಮಸ್ಯೆಯಿದ್ದವರು ತುಮಕೂರು ಜಿಲ್ಲೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತಲುಪಲು ಕನಿಷ್ಟ 2 ತಾಸು ಬೇಕಾಗುತ್ತದೆ. ಇದರಿಂದ ತುರ್ತು ಸಂದರ್ಭಗಳಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ರೋಗಿಗಳು ಸಾವನ್ನಪ್ಪುವ ಸಾಧ್ಯತೆಯಿರುತ್ತದೆ. ಜಿಲ್ಲೆಯಲ್ಲಿ ಕಾರ್ಡಿಯಾಲಜಿ ಕೇಂದ್ರ ನಿರ್ಮಿಸುವುದರಿಂದ ಜಿಲ್ಲೆಯ ಜನರಿಗೆ ಮಾತ್ರವಲ್ಲದೇ ಶಿವಮೊಗ್ಗ, ಹಾಸನ, ಚಿತ್ರದುರ್ಗ ಮುಂತಾದ ಜಿಲ್ಲೆಗಳ ಜನರಿಗೂ ಅನುಕೂಲವಾಗಲಿದೆ ಎಂದರು.

ಆಧುನಿಕ ಜಿಲ್ಲಾಸ್ಪತ್ರೆಗೆ 130 ಕೋಟಿ ರೂ. :
ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಸ್ಪತ್ರೆಯು ಕಲ್ಲಿನ ಕಟ್ಟಡವಾಗಿದ್ದು, ತುಂಬಾ ಹಳೆಯದಾಗಿದೆ. ಜಿಲ್ಲಾಸ್ಪತ್ರೆಗೆ ಆಧುನಿಕ ರೂಪ ನೀಡಿ ಸುಸಜ್ಜಿತಗೊಳಿಸಲು 130 ಕೋಟಿ ರೂ. ವೆಚ್ಚದ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ ಎಂದರಲ್ಲದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಉದ್ಯೋಗಸ್ಥ ಮಹಿಳೆಯರಿಗಾಗಿ ವಸತಿ ನಿಲಯ ನಿರ್ಮಿಸಲು 50 ಕೋಟಿ ರೂ. ಗಳ ಅನುದಾನವನ್ನು ಒದಗಿಸಲು ಒಪ್ಪಿದ್ದಾರೆ. ಇದಕ್ಕಾಗಿ ತುಮಕೂರು ವಿಶ್ವವಿದ್ಯಾನಿಲಯದ ಆವರಣದೊಳಗೆ ಸ್ಥಳವನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

Advertisements

50 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿನಿಲಯ : ಶೈಕ್ಷಿಣಿಕ ನಗರವೆನಿಸಿಕೊಂಡಿರುವ ತುಮಕೂರಿನಲ್ಲಿ ಬಹುತೇಕ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪೂರಕವಾದ ಹಾಸ್ಟೆಲ್ ವ್ಯವಸ್ಥೆಗಳಿಲ್ಲ. ಈಗಿರುವ ಹಾಸ್ಟೆಲ್‌ಗಳು ಸಾಲುತ್ತಿಲ್ಲ. ಜಿಲ್ಲೆಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ 12 ನೂತನ ಹಾಸ್ಟೆಲ್‌ಗಳನ್ನು ನಿರ್ಮಿಸಲು ಶೀಘ್ರದಲ್ಲಿ ಅಡಿಗಲ್ಲು ಹಾಕಲಾಗುವುದು ಎಂದು ಹೇಳಿದರು.

ವಸಂತ ನರಸಾಪುರದಲ್ಲಿ 3000ಕ್ಕೂ ಹೆಚ್ಚು ಉದ್ಯೋಗ :
ಮುಂದಿನ ದಿನಗಳಲ್ಲಿ ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ 3000 ಹಾಗೂ ಗುಬ್ಬಿ ತಾಲೂಕಿನ ಎಚ್‌ಎಎಲ್ ಘಟಕದಲ್ಲಿ 6500ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ತಿಳಿಸಿದರಲ್ಲದೆ ಬೆಂಗಳೂರಿನ ಒಂದು ಭಾಗವಾಗಿ ಬೆಳೆಯುತ್ತಿರುವ ತುಮಕೂರು ಜಿಲ್ಲೆಗೆ ಸವಲತ್ತು ನೀಡುವ ಅವಶ್ಯಕತೆ ಇದ್ದು, ನಮ್ಮ ಸರ್ಕಾರವು ಜಿಲ್ಲೆಯ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಹೇಳಿದರು.

ಪಾಲಿಕೆಯ ಇತರೆ ವಾರ್ಡುಗಳ ಅಭಿವೃದ್ಧಿಗೆ 100 ಕೋಟಿ ರೂ. ವಿನಿಯೋಗ :
ಮಹಾನಗರ ಪಾಲಿಕೆ ವ್ಯಾಪ್ತಿಯ ಕೇವಲ 6 ವಾರ್ಡ್ಗಳನ್ನು ಮಾತ್ರ ಸ್ಮಾರ್ಟ್ ಸಿಟಿ ಯೋಜನೆಗೊಳಪಡಿಸಿ ಅಭಿವೃದ್ಧಿಪಡಿಸಲಾಗಿದೆ. ಉಳಿದ ವಾರ್ಡುಗಳಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 100 ಕೋಟಿ ರೂ.ಗಳನ್ನು ವಿನಿಯೋಗಿಸಲು ತೀರ್ಮಾನಿಸಲಾಗಿದೆ ಎಂದು ನುಡಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X