ತಾಜ್ ಮಹಲ್ ಆವರಣದಲ್ಲಿ ಪ್ರವಾಸಿಗರಿಂದ ಮೂತ್ರ ವಿಸರ್ಜನೆ: ತನಿಖೆಗೆ ಆದೇಶ

Date:

Advertisements

ಉತ್ತರ ಪ್ರದೇಶದ ಆಗ್ರಾದಲ್ಲಿ ಸತತ 3 ದಿನಗಳಿಂದ ಭಾರೀ ಮಳೆಯಾಗಿರುವ ಹಿನ್ನೆಲೆಯಲ್ಲಿ ತಾಜ್‌ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆಯಾಗಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಇದೀಗ ತಾಜ್ ಮಹಲ್ ಆವರಣದಲ್ಲಿನ ಮತ್ತೊಂದು ವಿಡಿಯೋ ಹರಿದಾಡಿದೆ. ಇಬ್ಬರು ಪ್ರವಾಸಿಗರು ತಾಜ್ ಮಹಲ್ ಆವರಣದಲ್ಲೇ ಮೂತ್ರ ವಿಸರ್ಜನೆ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ಘಟನೆ ತಾಜ್ ಮಹಲ್ ಭದ್ರತಾ ಕ್ರಮಗಳ ಬಗ್ಗೆ ಪ್ರಶ್ನೆ ಹುಟ್ಟುವಂತೆ ಮಾಡಿದ್ದು, ವೈರಲ್ ವಿಡಿಯೋ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಆಶಯವೋ, ಅಣಕವೋ?

Advertisements

ಹೆಚ್ಚುವರಿಯಾಗಿ, ಉದ್ಯಾನಗಳಲ್ಲಿ ಭದ್ರತಾ ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಿಸಲು ಅಧಿಕಾರಿಗಳು ಯೋಜಿಸುತ್ತಿದ್ದಾರೆ ಎನ್ನಲಾಗಿದೆ. ಈ ವಿಷಯದ ಬಗ್ಗೆ ತಾಜ್ ಮಹಲ್ ಉಸ್ತುವಾರಿ ಮತ್ತು ಭದ್ರತಾ ಸಿಬ್ಬಂದಿ, ಉದ್ಯಾನಗಳಲ್ಲಿ ಮುಂದೆ ಇಂತಹ ಘಟನೆಗಳು ಸಂಭವಿಸದಂತೆ ಎಚ್ಚರಿಕೆಯನ್ನು ವಹಿಸಬೇಕೆಂದು ಆಗ್ರಾ ಎಎಸ್ಐ ಮುಖ್ಯಸ್ಥ ಆರ್ಕೆ ಪಟೇಲ್ ಹೇಳಿದ್ದಾರೆ.

‘‘ತಾಜ್ ಮಹಲ್ ಕಾಂಪ್ಲೆಕ್ಸ್‌ನಲ್ಲಿ ಎರಡು ಶೌಚಾಲಯಗಳನ್ನು ನಿರ್ಮಿಸಿದ್ದರೂ ಪ್ರವಾಸಿಗರು ಮೂತ್ರ ವಿಸರ್ಜನೆ ಮಾಡುತ್ತಿರುವುದು ಯಾವ ಇಲಾಖೆಗೂ ಕಂಡಿಲ್ಲವೇ ಎಂದು ಮಾರ್ಗದರ್ಶಿ ಸಂಘದ ಅಧ್ಯಕ್ಷ ದೀಪಕ್ ದಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ. ಈ ನಡುವೆ ಮೂತ್ರ ವಿಸರ್ಜನೆ ಘಟನೆ ಬಳಿಕ ತಾಜ್ ಮಹಲ್ ಅಪವಿತ್ರಗೊಂಡಿದೆ ಎಂದು ಗಂಗಾಜಲದೊಂದಿಗೆ ಆಗಮಿಸಿದ ಹಿಂದೂ ಕಾರ್ಯಕರ್ತರೊಬ್ಬರನ್ನು ಪೊಲೀಸರು ತಡೆ ಹಿಡಿದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X