ಬೀದರ್‌ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Date:

Advertisements

ʼಸ್ವಾತಂತ್ರ್ಯ, ಸಮಾನತೆ ಮತ್ತು ಭಾತೃತ್ವ ಸಂವಿಧಾನ ಜೀವಾಳʼ ಎಂಬ ಸಂಕಲ್ಪದೊಂದಿಗೆ ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಆಚರಿಸಲಾದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಚಾಲನೆ ನೀಡಿದರು.‌

ಈ ವಿಶೇಷ ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವದ ಮೂಲಭೂತ ತತ್ವಗಳನ್ನು ಪ್ರತಿನಿಧಿಸಲು, ಬೀದರ್‌ನಿಂದ ಚಾಮರಾಜನಗರದವರೆಗೆ 2,500 ಕಿಮೀಗಳ ಐತಿಹಾಸಿಕ ಮಾನವ ಸರಪಳಿಯನ್ನು ನಿರ್ಮಿಸಲಾಯಿತು. ಜನಸಾಮಾನ್ಯರು, ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು ಸೇರಿದಂತೆ ಅನೇಕರು ಈ ಸರಪಳಿಯಲ್ಲಿ ಭಾಗವಹಿಸಿ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.

ಇದರ ಜತೆಗೆ, ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಅರಣ್ಯ ಇಲಾಖೆಯ ಸಹಕಾರದೊಂದಿಗೆ ರಾಜ್ಯಾದ್ಯಂತ ಸುಮಾರು 10 ಲಕ್ಷ ಸಸಿಗಳನ್ನು ನೆಡುವ ಅಭಿಯಾನವು ಯಶಸ್ವಿಯಾಗಿ ನಡೆಯಿತು.

Advertisements

ಪ್ರಜಾಪ್ರಭುತ್ವದ ಮೌಲ್ಯಗಳ ಮಹತ್ವವನ್ನು ಸಾರಲು ಮತ್ತು ಸಮಾಜದಲ್ಲಿ ಬದಲಾವಣೆಯನ್ನು ತರಲು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಕೈಜೋಡಿಸಿದ ಉತ್ಸಾಹದ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಈ ಸುದ್ದಿ ಓದಿದ್ದೀರಾ? ಹಾಸನ | ಎತ್ತಿನಹೊಳೆ ಯೋಜನೆಯಿಂದ ರೈತರ ಜಮೀನಿಗೆ ಹಾನಿ

ಪೌರಾಡಳಿತ ಸಚಿವ ರಹೀಂ ಖಾನ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿ.ಪಂ. ಸಿಇಒ ಡಾ.ಗಿರೀಶ ಬದೋಲೆ, ಎಸ್‌ಪಿ ಪ್ರದೀಪ ಗುಂಟಿ, ಡಿಎಫ್‌ಓ ಎಂ.ವಾನತಿ, ವಿಧಾನ ಪರಿಷತ್ ಸದಸ್ಯ ಎಂ ಜಿ ಮುಳೆ, ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು, ಭಾಲ್ಕಿ ಹಿರೇಮಠದ ಗುರುಬಸವ ಪಟ್ಟದ್ದೇವರು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಶಾಲೆ-ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು , ಶಿಕ್ಷಕರು, ಸಂಘ ಸಂಸ್ಥೆಗಳು, ಸಾಮಾಜಿಕ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X