ಕೋಲಾರ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆ ನಮ್ಮೆಲ್ಲರ ಹೊಣೆ : ಶಾಸಕ ಕೆ.ವೈ ನಂಜೇಗೌಡ

Date:

Advertisements

ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದ್ದು, ಬಡವರ ಅಭಿವೃದ್ಧಿಗಾಗಿ ರಚನೆಯಾದ ಸಂವಿಧಾನಕ್ಕೂ ಕೂಡ ಕುತ್ತು ಬಂದಿದೆ. ಅದನ್ನು ರಕ್ಷಣೆ ಮಾಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾಲೂರು ಶಾಸಕ‌ ಕೆ.ವೈ ನಂಜೇಗೌಡ ಹೇಳಿದರು.

ಕೋಲಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ, ವಿವಿಧ ಸಂಘ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ವಿಧ್ಯಾರ್ಥಿಗಳ ಸಹಯೋಗದಲ್ಲಿ ಭಾನುವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರ ರಸ್ತೆಯ ಚೊಕ್ಕಂಡಹಳ್ಳಿಯಿಂದ ಕೋಲಾರ ನಗರ ಮಾರ್ಗವಾಗಿ ರಾಮಸಂದ್ರ ಗಡಿಯವರಗೆ ನಿರ್ಮಿಸಿದ್ದ 55 ಕಿ.ಮೀ ಉದ್ದದ ಮಾನವ ಸರಪಳಿಯಲ್ಲಿ ಭಾಗವಹಿಸಿ, ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೋಲಾರ 8

ಎಲ್ಲಾ ಜಾತಿ, ಧರ್ಮ, ಪಕ್ಷ ಬಿಟ್ಟು ಸಂವಿಧಾನದ ಆಶಯದ ಒಳಗಡೆ ನಾವಿದ್ದೇವೆ. ಸಂವಿಧಾನ ಇದ್ದರೆ ಅಷ್ಟೇ ನಮ್ಮ ಉಳಿಗಾಲ. ಕಾಂಗ್ರೆಸ್‌ ಸರಕಾರದ ಸದಾಶಯದಂತೆ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಜಿಲ್ಲೆಯ ಸಾವಿರಾರು ಜನರು ಭಾಗಿಯಾಗುವ ಮೂಲಕ ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಮತ್ತು ಶ್ರೇಷ್ಠ ಎಂಬುದನ್ನು ಸಾಬೀತು ಮಾಡಿದ್ದಾರೆ ಎಂದರು.

Advertisements

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತಂತ್ರ್ಯ ಪಡೆದ ನಂತರ ಎಲ್ಲರೂ ಸಮಾನರು ಎಂಬ ಸಂದೇಶಕ್ಕೆ ಅಂಬೇಡ್ಕರ್ ಕೊಟ್ಟ ಸಂವಿಧಾನವೇ ಸಾಕ್ಷಿಯಾಗಿದೆ. ಸಂವಿಧಾನದ ಅಡಿಯಲ್ಲಿಯೇ ಅವಕಾಶಗಳನ್ನು ಪಡೆಯಬೇಕು. ಅವರ ದಾರಿಯಲ್ಲಿ ನಾವು ಎಲ್ಲರೂ ನಡೆಯಬೇಕು ಎಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಪ್ರಜಾಪ್ರಭುತ್ವದಿಂದ ಸ್ವಾತಂತ್ರ್ಯ, ಸಮಾನತೆ, ನ್ಯಾಯಪರತೆ ಮತ್ತು ಎಲ್ಲಾ ಮಾನವನ ಘನತೆಯನ್ನು ಕಾಪಾಡುವುದಾಗಿದೆ. ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲ, ಧ್ವನಿ ಇಲ್ಲದವರಿಗೆ ಧ್ವನಿಯಾಗುವ, ಸಾಮಾಜಿಕ ನ್ಯಾಯವನ್ನು ಕಾಪಾಡುವ ಬಲಿಷ್ಠ ವ್ಯವಸ್ಥೆ. ಇದರ ರಕ್ಷಣೆ ನಮ್ಮ ಹೊಣೆಯಾಗಿದೆ ಎಂದರು‌.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಆಶಯವೋ, ಅಣಕವೋ?

ಈ ಸಂದರ್ಭದಲ್ಲಿ ಸಂಸದ ಮಲ್ಲೇಶ್ ಬಾಬು, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಎಸ್ಪಿ ಬಿ.ನಿಖಿಲ್, ಕೆಜಿಎಫ್ ಎಸ್ಪಿ ಶಾಂತಕುಮಾರ್, ಡಿಎಫ್ಓ ಏಡುಕೊಂಡಲು, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಕುಡಾ ಅಧ್ಯಕ್ಷ ಮಹಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್, ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಅಪರ ಜಿಲ್ಲಾಧಿಕಾರಿ ಮಂಗಳಾ, ತಹಶಿಲ್ದಾರ್ ನಯನಾ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಚಂಜಿಮಲೆ ರಮೇಶ್, ಮೈಲಾಂಡಹಳ್ಳಿ ಮುರಳಿ,ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X