ರಾಜಸ್ಥಾನದ ಸಿರೋಹಿ ಜಿಲ್ಲೆಯ ಪಿಂಡ್ವಾರಾ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ.
ಟ್ರಕ್‌ಗೆ ಜೀಪ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಜೀಪ್ ರಾಂಗ್ ಸೈಡ್‌ನಲ್ಲಿ ಬಂದಿದೆ. ಜೀಪ್ ತುಂಬಾ ಜನರಿದ್ದರು ಎಂದು ಸಿರೋಹಿ ಎಸ್‌ಪಿ ಅನಿಲ್ ಕುಮಾರ್ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಆಂಧ್ರಪ್ರದೇಶ | ಭೀಕರ ಅಪಘಾತ: ಕಾರಿನ ಮೇಲೆ ಬಿದ್ದ ಲಾರಿ; ಚಿಕ್ಕಬಳ್ಳಾಪುರದ ಮೂವರು ಸಾವು
ಕಿಕ್ಕಿರಿದು ತುಂಬಿದ್ದ ಜೀಪ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ ಎಂದು ಪಿಂಡ್ವಾಡ ಪೊಲೀಸ್ ಠಾಣೆ ಎಸ್‌ಎಚ್‌ಒ ಹಮೀರ್ ಸಿಂಗ್ ಹೇಳಿದ್ದಾರೆ.
ಇನ್ನು ಭಾನುವಾರ ಮುಂಜಾನೆ ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ವೇಗವಾಗಿ ಬಂದ ಟ್ರಕ್ ವ್ಯಾನ್‌ಗೆ ಡಿಕ್ಕಿ ಹೊಡೆದು ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.
STORY | Jeep on wrong side collides with truck in Rajasthan's Sirohi, 8 dead
— Press Trust of India (@PTI_News) September 15, 2024
READ: https://t.co/yzJ0wrE0el pic.twitter.com/oTrqzLlRLr
