ಸಿದ್ದರಾಮಯ್ಯ ಅವರ ಪ್ರಜಾಪ್ರಭುತ್ವ ಕಾಳಜಿ ಜಾಹೀರಾತಿಗಷ್ಟೇ ಸೀಮಿತ: ಹೆಚ್‌ ಡಿ ಕುಮಾರಸ್ವಾಮಿ

Date:

Advertisements

ರಾಜ್ಯ ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಮಾನವ ಸರಪಳಿ ನೆಪದಲ್ಲಿ ಕಾಂಗ್ರೆಸ್ ಸರ್ಕಾರ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡಿದೆ” ಎಂದು ಟೀಕಿಸಿದ್ದಾರೆ.

“ಅಧಿಕಾರಕ್ಕೇ ಬಂದಾಗಿಂದಲು ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ ಯಾಕೆ? ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?” ಎಂದು ವ್ಯಂಗ್ಯವಾಡಿದ್ದಾರೆ.

Advertisements

“ಸಿದ್ದರಾಮಯ್ಯನವರೇ, ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ ನಾಲ್ಕು ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಜಗಮಗಿಸುತ್ತಿದೆ! ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ?: ಆರ್‌ ಅಶೋಕ್‌ ಆರೋಪ

“ವಿಚ್ಚಿದ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ” ಎಂದು ಪ್ರಶ್ನಿಸಿದ್ದಾರೆ.

“ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ” ಎಂದು ಕುಮಾರಸ್ವಾಮಿ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X