ಕಲಬುರಗಿ | ನಾಳೆ (ಸೆ.17) ಸಿಎಂ ನೇತೃತ್ವದಲ್ಲಿ‌ ಸಚಿವ ಸಂಪುಟ ಸಭೆ, ಅಭಿವೃದ್ಧಿ ಬಗ್ಗೆ ಚರ್ಚೆ: ಪ್ರಿಯಾಂಕ್ ಖರ್ಗೆ

Date:

Advertisements

ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ಸರ್ದಾರ ವಲಭಭಾಯಿ ಪಟೇಲ್ ಅವರ ಪ್ರತಿಮೆ‌ ಮಾಲಾರ್ಪಣೆ ಮಾಡಿ ನಂತರ ಡಿಎಆರ್ ಮೈದಾನದಲ್ಲಿ‌ ಧ್ವಜಾರೋಹಣ ನೆರವೇರಿಸಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಕಲಬುರಗಿಯ ನಗರಾಭಿವೃದ್ಧಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, “ಕಲ್ಯಾಣ ಕರ್ನಾಟಕ‌ ಭಾಗದ ಜನರ ಬಹು ನಿರೀಕ್ಷೆಯ‌ಂತೆ ಸಿಎಂ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಕಲಬುರಗಿಯಲ್ಲಿ ಸೆ.17ರಂದು ಸಚಿವ ಸಂಪುಟ ಸಭೆ ನಡೆಯಲಿದೆ” ಎಂದರು.

“ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ಧಿ ಕುರಿತು ಚರ್ಚಿಸಿ ನೀಲಿ ನಕ್ಷೆ ತಯಾರಿಸುವ ಬಗ್ಗೆ ಕೂಡಾ ನಿರ್ಧರಿಸಲಾಗುವುದು. ನಮ್ಮ ಭಾಗದ ಎಲ್ಲ ಶಾಸಕರ ಬೇಡಿಕೆಯ ಪಟ್ಟಿ ನೋಡಿದರೆ ರಾಜ್ಯದ ಬಜೆಟ್ ಗಾತ್ರದಷ್ಟಾಗುತ್ತದೆ. ಆದರೆ ಮ್ಯಾಕ್ರೋ ಯೋಜನೆಯಡಿಯಲ್ಲಿ ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಕೊನೆ ಪಕ್ಷ ಈ ಸಲ ಯೋಜನೆಗಳ ಬಗ್ಗೆ ಚರ್ಚಿಸಿದರೆ ಮುಂದಿನ ವರ್ಷವಾದರೂ ಯೋಜನೆ ಬರುತ್ತವೆ” ಎಂದು ಹೇಳಿದರು.

Advertisements

“ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು. ಈ ಬಗ್ಗೆ ತಮ್ಮ ಸರ್ಕಾರ ಬಂದ ಮೇಲೆ ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ನಮ್ಮ ಇಲಾಖೆಯಲ್ಲಿಯೇ 800 ಇಂಜಿನಿಯರ್ ಗಳ ಹುದ್ದೆ ಭರ್ತಿ ಮಾಡಲಾಗಿದೆ” ಎಂದರು.

“ಮುಂದಿನ ಎರಡು ವರ್ಷದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ನಮ್ಮ ಭಾಗದ ರಸ್ತೆಗಳ ರಿಪೇರಿ ಹಾಗೂ ಉನ್ನತಿಕರಣ ಮಾಡಲಾಗುವುದು ಎಂದು ಹೇಳಿದ ಖರ್ಗೆ, ಕಲಬುರಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಬಗ್ಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ನಮ್ಮ ಭಾಗದ ಅಭಿವೃದ್ದಿ ವಿಚಾರದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ” ಎಂದು ಭರವಸೆ ನೀಡಿದರು.

“ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಹಂತಹಂತವಾಗಿ ತುಂಬಲಾಗುವುದು” ಎಂದು ಇದೇ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ಹೇಳಿದರು.

ಮುನಿರತ್ನ ವಿರುದ್ಧ ಪ್ರತಿಭಟನೆ ಮಾಡಲಿ

“ಪ್ರತಿಭಟನೆ ಮಾಡುವುದಿದ್ದರೆ ಶಾಸಕ ಮುನಿರತ್ನ ವಿರುದ್ದ ಮಾಡಲಿ ಅದಕ್ಕೂ ಮೊದಲು ಶಿಕ್ಷಣ ಸಂಸ್ಥೆಗಾಗಿ ಪಡೆದ ಜಾಗದಲ್ಲಿ ಬಿರಿಯಾನಿ ಹೊಟೇಲ್ ನಡೆಸುತ್ತಿರುವುದರ ಬಗ್ಗೆ ಸ್ಪಷ್ಟನೆ ನೀಡಲಿ. ಅದು ಬಿಟ್ಟು ಇಲ್ಲಿ ಬಂದು ಡ್ರಾಮಾ ಮಾಡಬಾರದು” ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ‌ ನಾರಾಯಣಸ್ವಾಮಿ‌ ಅವರಿಗೆ ಟಾಂಗ್ ನೀಡಿದರು.

“ನಾಗಮಂಗಲ ಗಲಭೆ ವಿಚಾರ, ಸಮಗ್ರ ತನಿಖೆ ನಡೆಸಲಾಗುತ್ತಿದೆ. ಅದರ ಹಿಂದೆ ಯಾರೇ ಇದ್ದರೂ ಕಾನೂನು ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಈಗಾಗಲೇ ಹೇಳಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿ ಕೆ ಶಿವಕುಮಾರ್ ಬಳಿಕ ಕಾಂಗ್ರೆಸ್ ಶಾಸಕ ರಂಗನಾಥ್‌ರಿಂದ ಆರ್‌ಎಸ್‌ಎಸ್ ಗೀತೆ ಗುಣಗಾನ!

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಳಿಕ ಇದೀಗ ಕಾಂಗ್ರೆಸ್ ಶಾಸಕ...

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X