ಸಕಲೇಶಪುರ | ಕಾಡಾನೆ ಸಮಸ್ಯೆಗೆ ಬಿಜೆಪಿ ಸರ್ಕಾರವೇ ಕಾರಣ: ಯಾದ್‌ಗಾರ್‌ ಇಬ್ರಾಹಿಂ

Date:

Advertisements

ಕಾಡಾನೆ ಸಮಸ್ಯೆಗೆ ಬಿಜೆಪಿ ಸರ್ಕಾರ ಕಾರಣವೇ ಹೊರತು, ಇಲ್ಲಿಯ ಶಾಸಕರಲ್ಲ ಎಂದು ಜೆಡಿಎಸ್ ಮುಖಂಡ ಯಾದ್‌ಗಾರ್‌ ಇಬ್ರಾಹಿಂ ಆರೋಪಿಸಿದರು.

ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಡಾನೆ ಹಾಗೂ ಹಲವು ಗಂಭೀರ ಸಮಸ್ಯೆಗಳ ಬಗ್ಗೆ ಪ್ರತಿ ವಿಧಾನಸಭಾ ಅಧಿವೇಶನದಲ್ಲಿಯೂ ಸರ್ಕಾರದ ಗಮನಕ್ಕೆ ತರಲಾಗಿದೆ. ಆದರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಧೋರಣೆಯಿಂದಾಗಿ ಕಾಡಾನೆ ಸಮಸ್ಯೆ ಹಾಗೂ ಇತರೆ ಸಮಸ್ಯೆಗಳಿಗೆ ಈವರೆಗೆ ಶಾಶ್ವತ ಪರಿಹಾರ ದೊರಕಿಲ್ಲ” ಎಂದು ಹೇಳಿದರು.

‘ಸಕಲೇಶಪುರ–ಆಲೂರು–ಕಟ್ಟಾಯ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಎಚ್‌.ಕೆ. ಕುಮಾರಸ್ವಾಮಿ ಅವಧಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗಿಲ್ಲ. ಕುಮಾರಸ್ವಾಮಿ ಬೇಲೂರು ಹಾಗೂ ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ತಲಾ ಮೂರು ಬಾರಿ ಗೆದ್ದಿರುವುದೇ ಸಜ್ಜನ ರಾಜಕಾರಣಿ ಎಂಬುದಕ್ಕೆ ಸಾಕ್ಷಿ. ಕ್ಷೇತ್ರದಲ್ಲಿ ಯಾವುದೇ ಕೆಲಸ ಆಗಿಲ್ಲವೆಂದು ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ” ಎಂದರು.

Advertisements

“ಸಕಲೇಶಪುರ ಕ್ಷೇತ್ರ ಎರಡು ತಾಲೂಕು, ಒಂದು ಹೋಬಳಿ ಕೇಂದ್ರವನ್ನು ಒಳಗೊಂಡು ಭೌಗೋಳಿಕವಾಗಿ ಸುಮಾರು 120 ಕಿ.ಮೀ. ವಿಸ್ತೀರ್ಣ ಹೊಂದಿದೆ. ಎಲ್ಲ ಗ್ರಾಮಗಳಲ್ಲಿಯೂ ಒಂದಲ್ಲಾ ಒಂದು ಅಭಿವೃದ್ಧಿ ಕೆಲಸಗಳು ಆಗಿವೆ. ಪಕ್ಕದ ಮೂಡಿಗೆರೆ, ಬೇಲೂರು, ಕೊಡಗು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವಂತಹ ಎಲ್ಲ ರಾಜ್ಯ ಹೆದ್ದಾರಿಗಳು ಅಭಿವೃದ್ಧಿಯಾಗಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಬಿಜೆಪಿ ಸಮಾವೇಶದಲ್ಲಿ ನಷ್ಟ ಅನುಭವಿಸಿದ್ದ ವ್ಯಾಪಾರಿಗೆ ₹35,000 ಪರಿಹಾರ

“ಹಲವು ಗ್ರಾಮಗಳಿಗೆ ಸೇತುವೆಗಳು, ರಸ್ತೆಗಳು, ಶಾಲಾ ಕಾಲೇಜುಗಳ ಕಟ್ಟಡಗಳು, ಮಿನಿ ಬಸ್ ನಿಲ್ದಾಣಗಳು, ತಡೆಗೋಡೆಗಳು, ಸಮುದಾಯ ಭವನಗಳು, ಹೈಮಾಸ್ಟ್ ವಿದ್ಯುತ್‌ ದೀಪಗಳೂ ಸೇರಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ” ಎಂದು ಯಾದ್‌ಗಾರ್‌ ಇಬ್ರಾಹಿಂ ತಿಳಿಸಿದರು.

ಪುರಸಭಾ ಸದಸ್ಯ ಸಮೀರ್ ಖಾನ್‌, ಇಸ್ರಾರ್‌, ವಕೀಲ ಅಕ್ರಂ, ಮಿಲಾಫ್‌ ಖಲೀಲ್, ಆನೇಮಹಲ್‌ ಹಸೈನಾರ್, ಅಬ್ಬು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X