ಎಚ್‌ಡಿಕೆ, ಬಿಎಸ್‌ವೈ ನನ್ನನ್ನು ಮುಗಿಸ್ತೀನಿ ಅಂದುಕೊಂಡಿದ್ದರೆ ಅದು ಅವರ ಮೂರ್ಖತನ: ಸಿದ್ದರಾಮಯ್ಯ

Date:

Advertisements

ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್ ಯಡಿಯೂರಪ್ಪ ನನ್ನನ್ನು ಮುಗಿಸ್ತೀನಿ ಅಂದುಕೊಂಡಿದ್ದರೆ ಅದು ಅವರ ಮೂರ್ಖತನ. ನನ್ನನ್ನು ಅಷ್ಟು ಸುಲಭ ಅಂದುಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಸವಾಲೆಸೆದರು.

ಕಲಬುರಗಿ ತಾಲ್ಲೂಕಿನ‌ ಕವಲಗಿ (ಕೆ) ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ ಉದ್ಘಾಟಿಸಿ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

“ಬ್ರಿಟಿಷರ ಜೊತೆ ನಮ್ಮವರು ಕೈಜೋಡಿಸಿದ್ದರಿಂದಲೇ 200 ವರ್ಷ ಗುಲಾಮಗಿರಿ ಅನುಭವಿಸಿದೆವು. ಸಂಗೊಳ್ಳಿ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟವರು ನಮ್ಮವರೇ ಆದ ಮನೆ ಮುರುಕರು. ನಮ್ಮ ಸಮಾಜದಲ್ಲೇ ಇಂಥಹ ಮನೆ ಮುರುಕರು ಹಿಂದೆಯೂ ಇದ್ದರು. ಮುಂದೆಯೂ ಇರುತ್ತಾರೆ. ಇಂಥವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು” ಎಂದರು.

Advertisements

“ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಬಡವರ, ಮದ್ಯಮ ವರ್ಗದವರ ಕಲ್ಯಾಣಕ್ಕೆ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದಕ್ಕೆ ಪಟ್ಟಭದ್ರರು ಷಡ್ಯಂತ್ರ ನಡೆಸುತ್ತಿದ್ದಾರೆ. 40 ವರ್ಷದಿಂದ ಸಣ್ಣ ತಪ್ಪು ಮಾಡದವನು ಈಗ ಮಾಡ್ತೀನಾ? ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡಲ್ಲ” ಎಂದು ಹೇಳಿದರು.

“ಮುಡಾ ಪ್ರಕರಣದಲ್ಲಿ ಏನೇನೂ ಇಲ್ಲ. ಆದರೂ ಬಿಜೆಪಿ, ಜೆಡಿಎಸ್ ನಾಯಕರು ಡೆಲ್ಲಿಯಿಂದ ರಾಜಭವನದವರೆಗೂ ಪಿತೂರಿ ಹೆಣೆಯುತ್ತಿದ್ದಾರೆ. ಇದರಲ್ಲಿ ಅವರು ಯಶಸ್ವಿ ಆಗಲು ಬಿಡಬಾರದು. ಸಂಗೊಳ್ಳಿ ರಾಯಣ್ಣನ ಹೋರಾಟದ ಕಿಚ್ಚು ನಮ್ಮೊಳಗಿದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ?  ದಿನ ಸಂಪಾದಕೀಯ | ಮಮತಾ ರಾಜೀನಾಮೆ – ಭಾವನಾತ್ಮಕ ರಾಜಕೀಯವೇಕೆ?

“ಡಾ.ಬಾಬಾ ಸಾಹೇಬರು ಕೊಟ್ಟ ಸಂವಿಧಾನದಿಂದಾಗಿ ನಾನು ಮುಖ್ಯಮಂತ್ರಿ‌ ಆಗಿದ್ದೇನೆ. ಬಾಬಾ ಸಾಹೇಬರ ಆಶಯದಂತೆ ನಾನು ಎಲ್ಲಾ ಜಾತಿ, ಜನ ವರ್ಗಗಳಿಗೆ, ಮಹಿಳೆಯರಿಗೆ ಆರ್ಥಿಕ‌ ಶಕ್ತಿ ನೀಡುತ್ತಿದ್ದೇನೆ.‌ ದೇಶದಲ್ಲಿ ಆಹಾರ ಭದ್ರತೆ ಕಾಯ್ದೆ ಜಾರಿಗೆ ಬಂದಿದ್ದು ಕಾಂಗ್ರೆಸ್ ಅವಧಿಯಲ್ಲಿ. ನಾವು ನಮ್ಮ ಜನರಿಗೆ 5 ಕೆಜಿ ಹೆಚ್ಚುವರಿ ಅಕ್ಕಿ ಕೊಡಬೇಕು ಎಂದು ತೀರ್ಮಾನಿಸಿದರೆ ನರೇಂದ್ರ ಮೋದಿಯವರು ಅಕ್ಕಿ ಕೊಡಲು ಬಿಡಲಿಲ್ಲ. ಅದಕ್ಕಾಗಿ ನಾವು ಅಕ್ಕಿ ಬದಲಿಗೆ 5 ಕೆಜಿ ಅಕ್ಕಿಯ ಹಣ ಕೊಡುತ್ತಿದ್ದೇವೆ” ಎಂದರು.

“ಪಟ್ಟಭದ್ರ ಹಿತಾಸಕ್ತಿಗಳೇ ರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟರು, ಬಸವಣ್ಣನವರನ್ನು ಆಸ್ಥಾನದಿಂದ ಓಡಿಸಿಬಿಟ್ಟರು. ಹೀಗಾಗಿ ಈ ಬಿಜೆಪಿ ಮತ್ತು ಜೆಡಿಎಸ್‌ ನವರ ಬಗ್ಗೆ ಎಚ್ಚರದಿಂದ ಇರಿ” ಎಂದು ಕರೆ ನೀಡಿದರು.

“ನಾನು ಹಿಂದುಳಿದ ಸಮಾಜದಲ್ಲಿ ಜನಿಸಿ ಬಡತನ ಅಂದರೆ ಏನು, ಗ್ರಾಮಗಳ ಸ್ಥಿತಿ ಹೇಗಿದೆ ಎಂದು ಅರ್ಥಮಾಡಿಕೊಂಡಿದ್ದೇನೆ. ಬಡತನ ಹೋಗಲಾಡಿಸಲು ಕಾರ್ಯಕ್ರಮ ರೂಪಿಸುತ್ತಿದ್ದೇನೆ. ಕಲಬುರಗಿಯ ಕವಲಗಿಯ 14 ಹಳ್ಳಿಗಳಿಗೆ ಅನುಕೂಲ ಆಗುವ ಏತ ನೀರಾವರಿ ಯೋಜನೆಯನ್ನು ಜಾರಿಗೊಳಿಸಲಾಗುವುದು” ಎಂದು ಭರವಸೆ ನೀಡಿದರು.

ತಿಂಥಣಿ ಕಾಗಿನೆಲೆ ಪೀಠದ ಸಿದ್ದರಾಮಾನಂದಪುರಿ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಶಾಸಕರಾದ ಎಂ.ವೈ.ಪಾಟೀಲರು ಅಧ್ಯಕ್ಷತೆ ವಹಿಸಿದ್ದರು. ಸಚಿವರಾದ ಬೈರತಿ ಸುರೇಶ್, ಶರಣ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಮಾಲೀಕಯ್ಯ ಗುತ್ತೇದಾರ್ ಸೇರಿದಂತೆ ಜಿಲ್ಲೆಯ ಶಾಸಕರು, ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X