ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುವ ವೇಳೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರು ಸಮೀಪ ಭಾನುವಾರ ನಡೆದಿದೆ.
ಹೆಜ್ಜೇನು ಏಕಾಏಕಿ ದಾಳಿ ಮಾಡಿದ್ದರಿಂದ ಗಲಿಬಿಲಿಗೊಂಡ ವಿದ್ಯಾರ್ಥಿಗಳು, ಶಿಕ್ಷಕರು ದಿಕ್ಕಾಪಾಲಾಗಿ ಓಡಿದ್ದರು. ಘಟನೆಯಲ್ಲಿ 15ರಿಂದ 20 ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಹೆಜ್ಜೇನು ಕಡಿದಿದ್ದು, ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಶಿಕ್ಷಕಿ ಸರಸ್ವತಿ ಗುಡಿಸಾಗರ ಮತ್ತು ಸರೋಜಾ ದಿಂಡೂರು ಅವರಿಗೆ ಹೆಚ್ಚಿನ ಗಾಯಗಳಾಗಿವೆ.
ಇದನ್ನು ಓದಿದ್ದೀರಾ? ಕರಾವಳಿ | ಸಂಘಪರಿವಾರದ ವಿವಾದದ ನಡುವೆಯೂ ಮುಸ್ಲಿಮರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆದ ಹಿಂದೂಗಳು
ಸ್ವತಃ ವೈದ್ಯರಾದ ಶಿರಹಟ್ಟಿ ಮೀಸಲು ಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಶಿಕ್ಷಕಿಯರನ್ನು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿದ್ದಾರೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
