ಕೋಲಾರ | ಪತ್ರಕರ್ತರಿಗೆ ‘ಕಲ್ಯಾಣ ಯೋಜನೆ’ ರೂಪಿಸಲು ಆಗ್ರಹ

Date:

Advertisements
  • ವಾರ್ತಾ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾತ್ರ ಸೌಕರ್ಯ
  • ಬಹುಸಂಖ್ಯಾತ ಪತ್ರಕರ್ತರು ಯಾವುದೇ ಸೌಲಭ್ಯಗಳಿಲ್ಲದೆ ವಂಚಿತರಾಗಿದ್ದಾರೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಸರ್ಕಾರ ಕಾರ್ಮಿಕ ಇಲಾಖೆ ವತಿಯಿಂದ ಕಲ್ಯಾಣ ಯೋಜನೆಗಳನ್ನು ರೂಪಿಸಬೇಕು ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ ಗೋಪಿನಾಥ್ ಒತ್ತಾಯಿಸಿದರು.

ಸೋಮವಾರ ಕೋಲಾರದ ಪತ್ರಕರ್ತರ ಭವನದಲ್ಲಿ ಸಂಘವು ಆಯೋಜಿಸಿದ್ದ ಕಾರ್ಮಿಕ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. “ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘವು ಕಾರ್ಮಿಕ ಕಾಯ್ದೆಯಡಿ ನೋಂದಾಯಿಸಲಾಗಿದೆ. ಇದು ಮೂಲತಃ ಕಾರ್ಮಿಕ ಸಂಘಟನೆಯಾಗಿದ್ದರೂ ಇದುವರೆಗೂ ಕಾರ್ಮಿಕ ಇಲಾಖೆಯಿಂದ ಯಾವುದೇ ಸೌಕರ್ಯಗಳನ್ನು ಪತ್ರಕರ್ತರಿಗೆ ಒದಗಿಸದೇ ಇರುವುದು ವಿಷಾಧಕರ” ಎಂದು ಹೇಳಿದರು.

“ಪತ್ರಕರ್ತರ ಕಲ್ಯಾಣ ಕಾರ್ಯಕ್ರಮಗಳ ಕುರಿತು ಪ್ರಶ್ನಿಸಿದರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯತ್ತ ಬೊಟ್ಟು ಮಾಡಿ ತೋರಿಸಲಾಗುತ್ತದೆ. ಆದರೆ, ವಾರ್ತಾ ಇಲಾಖೆಯು ಕೇವಲ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾತ್ರ ಸೀಮಿತ ಸೌಕರ್ಯಗಳನ್ನು ಒದಗಿಸುತ್ತಿದೆ. ಇದರಿಂದ ಬಹುಸಂಖ್ಯಾತ ಕಾರ್ಯನಿರತ ಪತ್ರಕರ್ತರು ಯಾವುದೇ ಸೌಲಭ್ಯಗಳಿಲ್ಲದೆ ವಂಚಿತರಾಗುತ್ತಿದ್ದಾರೆ” ಎಂದು ಆರೋಪಿಸಿದರು.

Advertisements

“ಆದ ಕಾರಣ ಕಾರ್ಮಿಕ ಕಾಯ್ದೆಯಡಿ ನೋಂದಾಯಿಸಿ ಕಾರ್ಯನಿರ್ವಹಿಸುತ್ತಿರುವ ಕೆಯುಡಬ್ಲ್ಯೂಜೆ ಸದಸ್ಯರನ್ನು ಕಾರ್ಮಿಕರೆಂದೇ ಪರಿಗಣಿಸಿ ಕಾರ್ಮಿಕ ಇಲಾಖೆ ಅಥವಾ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಸೌಕರ್ಯಗಳನ್ನು ದೊರಕಿಸಿಕೊಡಬೇಕು” ಎಂದು ಆಗ್ರಹಿಸಿದರು.

ವಿಶೇಷ ಉಪನ್ಯಾಸ ನೀಡಿದ ಪತ್ರಕರ್ತ ಸಿ ವಿ ನಾಗರಾಜ್, “ಪತ್ರಕರ್ತರು ಕಾರ್ಮಿಕರೇ ಎಂಬ ಪ್ರಶ್ನೆ ಇದೆ. ನಾವೆಲ್ಲಾ ಪತ್ರಿಕಾ ಮನೆಯಲ್ಲಿ ಕೆಲಸ ಮಾಡುವ  ಕಾರ್ಯನಿರತ ಪತ್ರಕರ್ತರು. 1947ರ ಕಾಯ್ದೆ, 1955ರ ಕಾಯ್ದೆ ಪ್ರಕಾರ ಪತ್ರಿಕಾ ಕಚೇರಿಯ ಸಹಾಯಕರು, ತಂತ್ರಜ್ಞರು ಕೂಡ ಕಾರ್ಯನಿರತ ಪತ್ರಕರ್ತರು. ಪತ್ರಕರ್ತರಿಂದ ದಿನಕ್ಕೆ 5 ರಿಂದ 6 ಗಂಟೆ ಕೆಲಸ ಮಾಡಿಸಬೇಕು ಎಂಬುದಿದೆ” ಎಂದರು.

“2020ರ ಕಾಯ್ದೆಗೆ ತಿದ್ದುಪಡಿ ಮಾಡಿದ್ದು, ಉದ್ಯೋಗ ಭದ್ರತೆ ಕಿತ್ತುಕೊಂಡಿದೆ. ನಿರುದ್ಯೋಗ ಸಮಸ್ಯೆ ಹುಟ್ಟು ಹಾಕಿ ಪತ್ರಕರ್ತರ ಉತ್ಸಾಹ ಕುಗ್ಗಿಸಿದೆ. ನಿಷ್ಪಕ್ಷಪಾತ ಕೆಲಸಕ್ಕೆ ಅಡ್ಡಿಪಡಿಸಿದೆ. ಬಹಳಷ್ಟು ಮಂದಿ ಕೆಲಸ ಬಿಡುತ್ತಿದ್ದಾರೆ. ಸ್ವಾತಂತ್ರ‍್ಯವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಸಂಸ್ಥೆಯನ್ನು ಪ್ರಶ್ನೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಹೊಂದಾಣಿಕೆ ಮಾಡಿಕೊಂಡು ಹೋಗಬೇಕಾದ ಅನಿವಾರ್ಯ ಬಂದೊದಗಿದೆ” ಎಂದು ವಿವರಿಸಿದರು.

“ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕರಿಗೆ ತಮ್ಮದೇ ಆದ ಮಂಡಳಿ ಹೊಂದಿದ್ದು, ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ, ಪತ್ರಕರ್ತರಿಗೆ ಮಂಡಳಿ ಇದ್ದರೂ ಏನೂ ಕೆಲಸ ನಡೆದಿಲ್ಲ. ನಮ್ಮ ನಿರ್ಲಕ್ಷ್ಯಕ್ಕೆ ನಾವೂ ಕಾರಣ. ನಾವೂ ಪೂರ್ಣಕಾಲಿಕ ಕಾರ್ಮಿಕರು ಎಂಬುದನ್ನು ಸಾಬೀತುಪಡಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ಭಜರಂಗದಳ ನಿಷೇಧಕ್ಕೆ ಕ್ರಮ

ರಾಜ್ಯ ಕಾರ್ಯಕಾರಿಣಿ ಸದಸ್ಯ ವಿ ಮುನಿರಾಜು ಮಾತನಾಡಿ, “ಕಾರ್ಮಿಕ ದಿನಾಚರಣೆ ಸಂತಸ ತರುವ ಹಬ್ಬ. 1923ರಲ್ಲಿ ಮೊದಲ ಬಾರಿ ಆಚರಿಸಲಾಯಿತು. ಎಲ್ಲ ಕಾರ್ಮಿಕರು ಬಹಳ ಸಂಕಷ್ಟದಲ್ಲಿ ಇದ್ದಾರೆ. ಎಲ್ಲರೂ ಒಂದೊಂದು ವಿಧದ ಕಾರ್ಮಿಕರು. ಎಲ್ಲರೂ ಒಂದೆ” ಎಂದರು.

ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ ಎಸ್ ಗಣೇಶ್ ಮಾತನಾಡಿ, ಪತ್ರಕರ್ತರು ಪರಿಪೂರ್ಣ ಕಾರ್ಮಿಕರೇ ಅಥವಾ ಅಸಂಘಟಿತ ಕಾರ್ಮಿಕರೇ ಎಂಬುದು ಗೊತ್ತಿಲ್ಲ. ಪತ್ರಕರ್ತರಿಗೆ ಎಲ್ಲ ಸೌಲಭ್ಯಗಳು ಸಿಗಬೇಕು. ಸಂಘಟಿತ ಹೋರಾಟ ನಡೆಸಿದರೆ ಸರ್ಕಾರದ ಗಮನ ಸೆಳೆಯಬಹುದು. ಕಾರ್ಮಿಕರ ಹಕ್ಕು ಮತ್ತು ರಕ್ಷಣೆ ಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಕೆ ಬಿ ಜಗದೀಶ್, ಬಿ ಸುರೇಶ್, ಅಬ್ಬಣಿಶಂಕರ್, ಓಂಕಾರಮೂರ್ತಿ, ವೆಂಕಟೇಶ ಬಾಬಾ, ಎಸ್ ಸೋಮಶೇಖರ್, ಕಾರ್ಯಕಾರಿ ಸಮಿತಿ ಸದಸ್ಯರಾದ ನಾ ಮಂಜುನಾಥ್, ಆಸೀಫ್‌ಪಾಷ, ಎನ್ ಗಂಗಾಧರ, ಗೋಪಿ, ಎಲ್ ಕಿರಣ್, ಸರ್ವಜ್ಞಮೂರ್ತಿ, ಸಿ ಅಮರೇಶ್ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X