ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣಕ್ಕೆ ತೆರಳುತ್ತಿದ್ದ ವೇಳೆ ಪಿಡಿಒ ಅಡಿವೆಪ್ಪ ಯಡಿಯಾಪುರ ಎಂಬುವವರು ಮೃತಪಟ್ಟಿರುವ ಘಟನೆ ನಡೆದಿದೆ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದ ಪಿಡಿಒ ಅಡಿವೆಪ್ಪ ಯಡಿಯಾಪುರ(32) ಎಂಬುವವರು ಕುಕನೂರು ಸಮೀಪದ ಇಟಗಿ ಗ್ರಾಮದ ಬಳಿ ಜರುಗಿದ ಅಪಘಾತದಲ್ಲಿ ಮೃತಪಟ್ಡಿದ್ದಾರೆ.
ಅಡಿವೆಪ್ಪ ಕೂಕನೂರು ತಾಲೂಕಿನ ಬೆಣಕಲ್ ಗ್ರಾಮದವರಾಗಿದ್ದು, ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿತ್ತು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ; ಕೃಷ್ಣಾನದಿಯಲ್ಲಿ ಶವ ಪತ್ತೆ
ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣದ ನಿಮಿತ್ತ ಬೆಳಗಿನ ಜಾವವೇ ಅವರು ಬೈಕ್‌ನಲ್ಲಿ ಕಚೇರಿಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಹಾಲಿನ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಕನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಪ್ರಥಮ ಚಿಕಿತ್ಸೆ ನೀಡಿ ಬಳಿಕ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.