ಕೊಪ್ಪಳ | ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ‘ಸಂಗನಹಾಲ ಚಲೋ’ ಕಾಲ್ನಡಿಗೆ ಜಾಥಾ

Date:

Advertisements

ಕ್ಷೌರ ಮಾಡಲು ನಿರಾಕರಿಸಿ ದಲಿತ ಯುವಕನ ಕೊಲೆ ಹಾಗೂ ಅಂತರ್ಜಾತಿ ಯುವತಿಯ ವಿಷವುಣಿಸಿ ಹತ್ಯೆ ಮತ್ತು ಇತ್ತೀಚಿಗೆ ಕೊಪ್ಪಳದಲ್ಲಿ ದಲಿತ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ‘ಸಂಗನಹಾಲ ಚಲೋ’ ಮೊದಲನೆ ದಿನದ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ಕೊಪ್ಪಳ ಜಿಲ್ಲಾಡಳಿತ ಭವನದಿಂದ ಸಮಾನ ಬದುಕಿನತ್ತ ಅರಿವಿನ ಜಾಥಾ ಪ್ರಾರಂಭಗೊಂಡು ಅಶೋಕ ಸರ್ಕಲ್ , ಬಸ್ ಸ್ಟ್ಯಾಂಡ್ , ದದಗಲ್ ಮೂಲಕ ಮೆರವಣಿಗೆ ಬಾಣಾವರ ಗ್ರಾಮದಲ್ಲಿ ಮೊದಲನೇ ದಿನ ಅಂತಿಮಗೊಂಡಿತು.

ದಲಿತರ ಮೇಲೆ ದೌರ್ಜನ್ಯ ಖಂಡಿಸಿ ಮಾತನಾಡಿದ ಹೋರಾಟಗಾರ ಅಂಬಣ್ಣ ಅರೋಲಿಕರ್, “ಈ ಹಿಂದೆ ಸಹ ಇಡೀ ರಾಜ್ಯಾದ್ಯಂತ ವಿವಿಧ ಕಡೆ ದಲಿತರ ಮೇಲೆ ದೌರ್ಜನಗಳು ನಡೆಯುತ್ತಿದ್ದವು. ಆ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಆಯಾ ಗ್ರಾಮಕ್ಕೆ ಭೇಟಿ ನೀಡಿ, ಇದರ ವಿರುದ್ಧ ಕಟ್ಟುನಿಟ್ಟಾದ ಕ್ರಮವನ್ನು ಕೈಗೊಳ್ಳುತ್ತಿದ್ದರು. ಘಟನೆಗಳಿಗೆ ಕಾರಣಕರ್ತರಾದವರ ವಿರುದ್ಧ ಸಾಕಷ್ಟು ಕಾನೂನು ಕ್ರಮ ಜರುಗಿಸಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಈ ರೀತಿ ಕಟ್ಟುನಿಟ್ಟಾಗಿ ಕಾನೂನು ಕ್ರಮ ಜರಗಿಸುವ ಮತ್ತು ಕಾನೂನಿನ ಕುರಿತು ಭಯ ಇರುವಂತೆ ನೋಡಿಕೊಳ್ಳುವ ಅಧಿಕಾರಿಗಳ ಸಂಖ್ಯೆ ಕಡಿಮೆಯಾಗಿದೆ” ಎಂದರು.

Advertisements

ಈ ಕಾರಣಕ್ಕಾಗಿಯೇ ಈಗಲೂ ಸಹ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ದಲಿತರ ಮೇಲೆ ದೌರ್ಜನ್ಯಗಳು ಈ ಹಿಂದಿಗಿಂತ ಈ ಕಾಲದಲ್ಲಿ ಹೆಚ್ಚಾಗಿವೆ. ಇದನ್ನು ಕಾನೂನಿನ ಮೂಲಕವೇ ಕಟ್ಟುನಿಟ್ಟಾಗಿ ತಡೆಗಟ್ಟಬೇಕಿದೆ. ಕಾನೂನನ್ನು ಸಮರ್ಪಕವಾಗಿ ಜಾರಿಗೊಳಿಸುವ ಕಟ್ಟುನಿಟ್ಟಾದ ಅಧಿಕಾರಿಗಳ ಅವಶ್ಯಕತೆ ಇದೆ. ಯಾವುದೇ ರೀತಿಯ ಒತ್ತಡಗಳಿಗೆ ಮಣಿಯದೆ, ಕಾನೂನು ಕ್ರಮ ಕೈಗೊಂಡರೆ ಖಂಡಿತವಾಗಿಯೂ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ಅಭಿಪ್ರಾಯಪಟ್ಟರು.

ಸಂಗನಹಾಲ ಚಲೋ

ಹಿರಿಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರು ಮಾತನಾಡಿ, “ಈ ರೀತಿಯ ಘಟನೆಗಳು ಸಂಭವಿಸಿದಾಗ ಜಿಲ್ಲಾಮಟ್ಟದ ಅಧಿಕಾರಿಗಳು ಆ ಗ್ರಾಮಕ್ಕೆ ತೆರಳಿ ಕೂಲಂಕುಷವಾಗಿ ಪರಿಶೀಲನೆ ನಡೆಸಬೇಕು ಹಾಗೂ ಅದಕ್ಕೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಾದ ಕ್ರಮವನ್ನು ಜರುಗಿಸಬೇಕು. ಮತ್ತೊಮ್ಮೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. ಹೀಗಾದಲ್ಲಿ ಮಾತ್ರ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗುತ್ತವೆ. ಇಲ್ಲವಾದಲ್ಲಿ ಇದು ನಿರಂತರವಾಗಿ ನಡೆಯುತ್ತಲೇ ಇರುತ್ತವೆ ಎಂದು ಹೇಳಿದರು.

ಮೊದಲ ದಿನದ ಕಾಲ್ನಡಿಗೆ ಜಾಥಾವು ಜಿಲ್ಲಾಧಿಕಾರಿಗಳ ಕಚೇರಿಯಿಂದ ತೆರಳಿ ಭಾನಾಪುರವನ್ನು ತಲುಪಿತು. ಬುಧವಾರ ಬೆಳಗ್ಗೆಯಿಂದ ಸಂಗನಹಾಲ ಗ್ರಾಮದವರೆಗೆ ಕಾಲ್ನಡಿಗೆ ಜಾಥಾ ನಡೆಯಲಿದೆ.

ಇದನ್ನು ಓದಿದ್ದೀರಾ? ಅನುಮತಿ ಇಲ್ಲದೆ ಬುಲ್ದೋಝರ್ ಕಾರ್ಯಾಚರಣೆಗೆ ಅವಕಾಶವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಜಾಥಾದಲ್ಲಿ ಸಂಗನಹಾಲ ಚಲೋ ಸಂಚಾಲಕ ಬಸವರಾಜ್ ಸೂಳಿಬಾವಿ, ಹಿರಿಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರು, ಶ್ರೀಪಾದ ಭಟ್, ಶುಕ್ರರಾಜ್, ಟಿ ರತ್ನಾಕರ, ಧರ್ಮರಾಜ ಗೋನಾಳ, ಕರಿಯಪ್ಪ ಗುಡಿಮನಿ, ಕೆವಿಎಸ್ ದುರುಗೇಶ್, ಮುತ್ತು ಬಿಳಿಯಲಿ, ಶಶಿಕಲಾ ಮಠ, ಸಲೀಮಾ ಜಾನ, ಜನಾರ್ದನ, ಗೌರಿ ಗೋನಾಳ, ಮರಿಯಮ್ಮ, ಆನಂದ ಶಿಂಗಾಡಿ, ಖಾಸೀಮ್ ಸರ್ದಾರ, ನಿಂಗೂ ಬೇನೇಕಲ್, ಇಮಾಮ ಸಾಬ್, ನಜೀರ್ ಸಾಬ್ ಮೂಲಿಮನಿ ಇನ್ನಿತರರು ಹಾಜರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X