ಎನ್‌ಸಿಪಿ ಅಧ್ಯಕ್ಷ ಸ್ಥಾನ ತೊರೆಯುವ ನಿರ್ಧಾರ ಪ್ರಕಟಿಸಿದ ಶರದ್‌ ಪವಾರ್‌

Date:

Advertisements
  • ರಾಜಕೀಯದಲ್ಲಿ ಮುಂದುವರಿಯುವುದಾಗಿ ಪವಾರ್‌ ಸ್ಪಷ್ಟನೆ
  • ಮಹಾರಾಷ್ಟ್ರ ಒಕ್ಕೂಟ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ

ಶರದ್‌ ಪವಾರ್‌ ಅವರು ತಾವು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಸ್ಥಾನ ತೊರೆಯುತ್ತಿರುವುದಾಗಿ ಮಂಗಳವಾರ (ಮೇ 2) ಘೋಷಿಸಿದ್ದಾರೆ.

ಮಹಾರಾಷ್ಟ್ರದ ಮುಂಬೈನಲ್ಲಿ ತಮ್ಮ ಆತ್ಮಚರಿತ್ರೆಯ ಎರಡನೇ ಆವೃತ್ತಿ ‘ಲೋಕ್‌ ಮಾಜೆ ಸಂಗಟಿ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಪವಾರ್‌ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ.

“ನನಗೆ ರಾಜ್ಯಸಭೆಯಲ್ಲಿ ಇನ್ನೂ ಮೂರು ವರ್ಷ ಅಧಿಕಾರವಿದೆ. ಇನ್ನು ಮುಂದೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ” ಎಂದು ಪವಾರ್‌ ಹೇಳಿದ್ದಾರೆ.

Advertisements

ಇನ್ನು 15 ದಿನಗಳಲ್ಲಿ ಮಹಾರಾಷ್ಟ್ರ ರಾಜಕೀಯದಲ್ಲಿ 2 ಪ್ರಮುಖ ಅಚ್ಚರಿಗಳು ನಡೆಯಲಿವೆ ಎಂದು ಶರದ್‌ ಪವಾರ್ ಪುತ್ರಿ ಸುಪ್ರಿಯಾ ಸುಳೆ ಅವರು ಹೇಳಿದ್ದರು. ಅದಾದ ಕೆಲ ದಿನಗಳಲ್ಲೇ ಪವಾರ್ ಎನ್‌ಸಿಪಿ ಮುಖ್ಯಸ್ಥ ಸ್ಥಾನವನ್ನು ತೊರೆಯುತ್ತಿರುವುದಾಗಿ ಹೇಳಿದ್ದಾರೆ.

ತಾವು ರಾಜಕೀಯದಲ್ಲಿ ಮುಂದುವರಿಯುತ್ತೇನೆ. ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸುತ್ತೇನೆ ಎಂದು ಪವಾರ್‌ ಸ್ಪಷ್ಟಪಡಿಸಿದ್ದಾರೆ.

ಪಕ್ಷದ ಸಮಿತಿಯು ಮುಂದಿನ ಅಧ್ಯಕ್ಷನನ್ನು ಆಯ್ಕೆ ಮಾಡಲಿದೆ ಎಂದು ಪವಾರ್‌ ಹೇಳಿದ್ದಾರೆ.

ಮುಂದಿನ ಕ್ರಮವನ್ನು ನಿರ್ಧರಿಸಲು ಹಿರಿಯ ಎನ್‌ಸಿಪಿ ನಾಯಕರನ್ನು ಒಳಗೊಂಡ ಸಮಿತಿಯನ್ನು ರಚಿಸುವಂತೆ ಪವಾರ್ ಶಿಫಾರಸು ಮಾಡಿದ್ದಾರೆ.

ಸಮಿತಿಯಲ್ಲಿ ಪ್ರಫುಲ್ ಪಟೇಲ್, ಸುನಿಲ್ ತಟ್ಕರೆ, ಪಿ ಸಿ ಚಾಕೋ, ನರಹರಿ ಜಿರ್ವಾಲ್, ಅಜಿತ್ ಪವಾರ್, ಸುಪ್ರಿಯಾ ಸುಳೆ, ಜಯಂತ್ ಪಾಟೀಲ್, ಛಗನ್ ಭುಜಬಲ್, ದಿಲೀಪ್ ವಾಲ್ಸೆ-ಪಾಟೀಲ್, ಅನಿಲ್ ದೇಶಮುಖ್, ರಾಜೇಶ್ ಟೋಪೆ, ಜಿತೇಂದ್ರ ಅವ್ಹಾದ್, ಹಸನ್ ಮುಶ್ರಿಫ್, ಧನಂಜಯ್ ಮುಂಡೆ, ಜಯದೇವ್ ಗಾಯಕ್ವಾಡ್ ಮತ್ತು ಪಕ್ಷದ ನಾನಾ ಘಟಕಗಳ ಮುಖ್ಯಸ್ಥರು ಇದ್ದಾರೆ.

“ನಾನು ಎನ್‌ಸಿಪಿ ಅಧ್ಯಕ್ಷನಾಗಿ ಕೆಲಸ ಮಾಡುವುದನ್ನು ನಿಲ್ಲಿಸಲು ನಿರ್ಧರಿಸಿದ್ದೇನೆ. ಇನ್ನು ಮುಂದೆ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಜೀವನದಲ್ಲಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ” ಎಂದು ಹೇಳಿದ್ದಾರೆ.

ತಮ್ಮ ಸೋದರಳಿಯ ಅಜಿತ್‌ ಪವಾರ್‌ ಬಿಜೆಪಿಗೆ ಸೇರಲಿದ್ದಾರೆ ಎಂಬ ಊಹಾಪೋಹಗಳ ನಡುವೆ ಪವಾರ್ ಈ ನಿರ್ಧಾರ ತಳೆದಿದ್ದಾರೆ. ಪವಾರ್‌ ಅವರ ನಿರ್ಧಾರಕ್ಕೆ ಎನ್‌ಸಿಪಿಯಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಪಕ್ಷದ ಅನೇಕ ನಾಯಕರು ಪವಾರ್‌ ನಿರ್ಧಾರದ ವಿರುದ್ದ ಘೋಷಣೆ ಕೂಗಿದ್ದಾರೆ. ಪವಾರ್‌ ಅವರ ನಿರ್ಧಾರಕ್ಕೆ ಕೆಲವು ನಾಯಕರು ವೇದಿಕೆಯಲ್ಲೇ ಕಂಬನಿ ಮಿಡಿದರು ಎಂದು ವರದಿಯಾಗಿದೆ.

“ಸಹೋದ್ಯೋಗಿಗಳೇ, ನಾನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಿದ್ದರೂ, ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗುತ್ತಿಲ್ಲ. ನಿರಂತರ ಪ್ರಯಾಣ ನನ್ನ ಜೀವನದ ಅವಿಭಾಜ್ಯ ಅಂಗ. ಸಾರ್ವಜನಿಕ ಕಾರ್ಯಕ್ರಮಗಳು, ಸಭೆಗಳಲ್ಲಿ ಭಾಗವಹಿಸುವುದನ್ನು ಮುಂದುವರಿಸುತ್ತೇನೆ. ನಾನು ಪುಣೆ, ಮುಂಬೈ, ಬಾರಾಮತಿ, ದೆಹಲಿ ಅಥವಾ ಭಾರತದ ಯಾವುದೇ ಭಾಗದಲ್ಲಿದ್ದರೂ, ನಿಮ್ಮ ಸಂಪರ್ಕದಲ್ಲಿರುತ್ತೇನೆ” ಎಂದು ಪವಾರ್ ಎನ್‌ಸಿಪಿ ಕಾರ್ಯಕರ್ತರಿಗೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಾಲಾ ಮಕ್ಕಳ ಪೌಷ್ಟಿಕಾಂಶ ಗುಣಮಟ್ಟ ಪರಿಷ್ಕರಣೆ; ಮೊಟ್ಟೆ ಕಡ್ಡಾಯವಿಲ್ಲ

ಪವಾರ್ ಅವರ ಸೋದರಳಿಯ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬಿಜೆಪಿಯೊಂದಿಗೆ ಹತ್ತಿರವಾಗುತ್ತಿರುವ ನಡುವೆಯೇ ಅವರ ಈ ನಡೆ ಕುತೂಹಲ ಮೂಡಿಸಿದೆ. ಪವಾರ್ ಅವರ ಈ ಹಠಾತ್ ನಡೆ, ಅಜಿತ್ ಪವಾರ್ ನಿಜಕ್ಕೂ ಬಿಜೆಪಿಯೊಂದಿಗೆ ಹೋಗಬಹುದು ಎಂಬ ಊಹಾಪೋಹಗಳಿಗೆ ಮತ್ತಷ್ಟು ಪುಷ್ಠಿ ನೀಡಿದೆ.

ಶರದ್‌ ಪವಾರ್‌ ರಾಷ್ಟ್ರದ ಪ್ರತಿಪಕ್ಷ ನಾಯಕರಲ್ಲಿ ಪ್ರಮುಖರು. ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್‌ ಹಾಗೂ ಎನ್‌ಸಿಪಿ ಒಳಗೊಂಡ ಮಹಾ ವಿಕಾಸ ಅಘಾಡಿ ಸರ್ಕಾರ ರಚನೆಯಲ್ಲಿ ಮುಖ್ಯ ಪಾತ್ರವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X