ಕಾರ್ಕಳ ಪರಶುರಾಮ ಪ್ರತಿಮೆ ವಿವಾದ | ಶಾಸಕ ಸುನಿಲ್ ಪ್ರಚಂಡ ಸುಳ್ಳುಗಾರ: ಕಾಂಗ್ರೆಸ್‌ ಮುಖಂಡ ಉದಯ್ ಶೆಟ್ಟಿ

Date:

Advertisements

ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದ ಮೇಲೆ ಪರಶುರಾಮ ಪ್ರತಿಮೆ ನಿರ್ಮಾಣದ ಹೆಸರಿನಲ್ಲಿ ಭ್ರಷ್ಟಾಚಾರ ಎಸಗಿದ್ದು ಮಾತ್ರವಲ್ಲದೆ ದಿನಕ್ಕೊಂದು ಸುಳ್ಳು ಹೇಳುತ್ತಾ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಧರ್ಮ ವಿರೋಧಿ ಜನಪ್ರತಿನಿಧಿಯನ್ನು ಸಮಾಜ ಬಹಿಷ್ಕರಿಸದಿದ್ದರೆ ಮುಂದಿನ ದಿನಗಳಲ್ಲಿ ಅಪಾಯ ಗ್ಯಾರಂಟಿ ಎಂದು ಕಾರ್ಕಳ ಕಾಂಗ್ರೆಸ್‌ ಮುಖಂಡ ಮುನಿಯಾಲು ಉದಯ ಶೆಟ್ಟಿ ಹೇಳಿದ್ದಾರೆ.

ಬುಧವಾರ ಉಡುಪಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸುನಿಲ್ ಕುಮಾರ್ ನಿರಂತರ ಸುಳ್ಳು ಹೇಳಿ ಜನರನ್ನ ಮರಳು ಮಾಡುವ ಶಾಸಕ. ಈ ರೀತಿಯಲ್ಲಿ ಸುಳ್ಳು ಹೇಳುವ ಶಾಸಕರಿದ್ದರೆ ಅದು ಕಾರ್ಕಳದಲ್ಲಿ ಮಾತ್ರ. ರಾಜ್ಯ ಹಾಗೂ ಕೇಂದ್ರದಲ್ಲಿ ಕೂಡ ಇಂತಹ ಶಾಸಕ ಸಿಗಲಿಕ್ಕಿಲ್ಲ. ಇವರಿಗೆ ಪ್ರಚಂಡ ಸುಳ್ಳುಗಾರ ಎಂದು ಬಿರುದು ನೀಡಿದರೂ ತಪ್ಪಾಗಲಾರದು ಎಂದು ವ್ಯಂಗ್ಯವಾಡಿದರು.

WhatsApp Image 2024 09 18 at 12.50.18 PM 1

ಸಾರ್ವಜನಿಕರ ಹಣ ಲೂಟಿ ಮಾಡಲಾಗಿದೆ ಎಂದು ಹೈಕೋರ್ಟ್‌ ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೆ, ಪರಶುರಾಮ ಮೂರ್ತಿಯ ಮೇಲ್ಭಾಗ ನಕಲಿ ಎಂದು ಗೊತ್ತಿದ್ದರೂ ಮೇಲ್ಬಾಗವನ್ನ ಎಲ್ಲಿಯೂ ಜನರಿಗೆ ಕಾಣಿಸದೆ ರಾತ್ರಿ ಕದ್ದು ಸಾಗಿಸಲಾಗಿದೆ. ನಿರಂತರವಾಗಿ ಜನರಿಗೆ ಸುಳ್ಳು ಹೇಳುತ್ತಾ ತಾನು ಮಾಡಿದೆ ಸರಿ ಎಂದು ಅಪಪ್ರಚಾರ ಮಾಡುತ್ತಿದ್ದ ಕಾರ್ಕಳ ಶಾಸಕರ ನಿಜ ಬಣ್ಣ ಬಯಲಾಗಿದೆ. ಇಷ್ಟಿದ್ದರೂ ಕೂಡ ಅಸಲಿ ಮೂರ್ತಿ ಎಂದು ಕೋರ್ಟಿಗೆ ಮತ್ತೆ ದಾಖಲೆಗಳನ್ನು ತಯಾರು ಮಾಡುತ್ತಿರುವ ಶಾಸಕರ ವರ್ತನೆ ನೋಡಿದರೆ ಅಚ್ಚರಿ ಎನಿಸುತ್ತಿದೆ ಎಂದು ಹೇಳಿದರು.

Advertisements

ಕೇವಲ ರಾಜಕೀಯ ಲಾಭಕ್ಕೋಸ್ಕರ ಪರಶುರಾಮ ಥಿಮ್ ಪಾರ್ಕ್ ಬಳಸಿಕೊಂಡು ಜನರ ಭಾವನೆ ಜೊತೆ ಚೆಲ್ಲಾಟವಾಡಲಾಗಿದೆ. ಕೂಡಲೇ ಸಮಾಜ ಬಹಿಷ್ಕರಿಸಬೇಕು ಮತ್ತು ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆಯಾಗಿ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.

ಪರಶುರಾಮ ಮೂರ್ತಿಯನ್ನು ತಯಾರು ಮಾಡಿರುವ ಕೃಷ್ಣ ನಾಯ್ಕ ಎಂಬವರಿಗೆ ಸರಿಯಾದ ಜ್ಞಾನ ಇಲ್ಲ. ಅವರು ಕೂಡ ದಿನಕೊಂದು ಕಥೆಗಳನ್ನ ಹೇಳುತ್ತಾರೆ. ಮುಂದಿನ ದಿನಗಳಲ್ಲಿ ಗುಣಮಟ್ಟದ ಪ್ರತಿಮೆ ನಿರ್ಮಾಣವಾಗಬೇಕಾದರೆ ಯಾವುದೇ ಕಾರಣಕ್ಕೂ ಮೂರ್ತಿಯ ಮರು ರಚನೆಗೆ ಕೃಷ್ಣ ನಾಯಕ್ ಅವರಿಗೆ ನೀಡದೆ ಬೇರೆ ಪರಿಣಿತ ತಂಡಕ್ಕೆ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ಇದನ್ನು ಓದಿದ್ದೀರಾ? ಗದಗ | ‘ಜಿಮ್ಸ್’ನಿಂದ ಬಡವರ ದರೋಡೆ : ಆಸ್ಪತ್ರೆಯ ವಿರುದ್ಧ ಕ್ರಮಕ್ಕೆ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ

ತಪ್ಪು ಹೇಳಿಕೆಗಳನ್ನು ನೀಡಿ ಜನರನ್ನು ದಾರಿ ತಪ್ಪಿಸುವ ಚಾಳಿ

ಪ್ರವಾಸೋದ್ಯಮ ಅಭಿವೃದ್ಧಿಯಾಗಬೇಕೆಂದು ಜನರನ್ನು ಮರಳು ಮಾಡುತ್ತಾ, ತನ್ನ ಅಭಿವೃದ್ಧಿ ಮಾಡಿಕೊಂಡ ಕಾರ್ಕಳ ಶಾಸಕ ಈಗ ಪರಶುರಾಮ ಥೀಮ್ ಪಾರ್ಕ್ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಗಾಲು ಎಂದು ಸುಳ್ಳು ಆರೋಪ ಮಾಡಿದ್ದಾರೆ. ತನ್ನ ಭ್ರಷ್ಟಾಚಾರವನ್ನು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಇದನ್ನು ಓದಿದ್ದೀರಾ? ಧಾರವಾಡ | ಲಿಂಗಾಯತ ಧರ್ಮ ನಾಶಮಾಡಲು ಸಾಧ್ಯವಿಲ್ಲ, ರಾಷ್ಟ್ರೀಯತೆ ಹುಟ್ಟಿದ್ದೇ ಕನ್ನಡಿಗರಿಂದ: ಡಾ. ವಾಸು ಎಚ್ ವಿ

ಪ್ರವಾಸೋದ್ಯಮಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ. ಕಾಕಳ ಮಸ್ತಕಾಭಿಷೇಕ ಸಂದರ್ಭದಲ್ಲಿ ಲಕ್ಷಾಂತರ ರೂಪಾಯಿ ಪ್ರವಾಸೋದ್ಯಮಕ್ಕೆ ನೀಡಿ, ಕಾರ್ಕಳ ಅಭಿವೃದ್ದಿ ಪಡಿಸಿದ್ದು ಕಾಂಗ್ರೆಸ್. ಆದರೆ, ಕಾರ್ಕಳ ಶಾಸಕ ಎಣ್ಣೆ ಹೊಳೆ, ಕಾರ್ಕಳೋತ್ಸವ ಮೊದಲಾದ ಕಾರ್ಯಕ್ರಮವನ್ನು ಮಾಡಿ ಹಣ ಮಾಡಿದರೆ ವಿನಃ ಪ್ರವಾಸೋದ್ಯಮಕ್ಕೆ ಕೊಡುಗೆ ಏನು ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಉಡುಪಿ ನಗರಸಭಾ ಸದಸ್ಯ ರಮೇಶ್ ಕಾಂಚನ್, ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ, ಕಾರ್ಕಳ ಯೂತ್ ಕಾಂಗ್ರೆಸ್ ಮುಖಂಡ ಯೋಗೇಶ್ ಇನ್ನ ಉಪಸ್ಥಿತರಿದ್ದರು.

ಕಕಕ
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X