ರಾಹುಲ್ ಗಾಂಧಿ ಮುಗಿಸಲು ಬಿಜೆಪಿ ಸಂಚು: ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ

Date:

Advertisements

ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ. ರಾಜಕೀಯವಾಗಿಯೂ ಮುಗಿಸುವ ಜೊತೆಗೆ ಪ್ರಾಣ ಭಯ ಹುಟ್ಟಿಸುವ ಬಿಜೆಪಿ ಷಡ್ಯಂತ್ರ ಆತಂಕ ಹುಟ್ಟಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದುರ.

ರಾಹುಲ್ ಗಾಂಧಿ ಅವರಿಗೆ ಕೊಲೆ ಬೆದರಿಕೆ, ತೇಜೋವಧೆಗೆ ಸುಳ್ಳಿನ ಸರಮಾಲೆ ಸೃಷ್ಟಿಸಿರುವ ಬಿಜೆಪಿ ನಡೆ ವಿರುದ್ಧ ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸಿದ್ದರಾಮಯ್ಯ ಮಾತನಾಡಿದರು.

“ಇಂಧಿರಾ ಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾಗಿದ್ದಾರೆ. ಇಂತಹ ಅಜ್ಜಿ ಇಂದಿರಾಗಾಂಧಿ ಅವರಿಗೆ ಆದ ಗತಿಯೇ ನಿಮಗೂ ಆಗುತ್ತದೆ ಎಂದರೆ ಏನರ್ಥ? ರಾಹುಲ್‌ಗೆ ಬಿಜೆಪಿ‌ ಬೆದರಿಕೆ ಹಾಕಿದೆ. ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವುದಿಲ್ಲ” ಎಂದರು.

“ಜೀವ ಬೆದರಿಕೆಗಳ ಮೂಲಕ ಬಿಜೆಪಿಯ ಕಾರ್ಯಕರ್ತರನ್ನು ಎತ್ತಿಕಟ್ಟುವ ಷಡ್ಯಂತ್ರ ನಡೆಸುತ್ತಿದೆ. ರಾಹುಲ್ ಗಾಂಧಿ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ‌ ಕೊಡುವುದಾಗಿ ಶಿವಸೇನೆಯ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ ವಾಡ್ ಕರೆ ನೀಡಿದ್ದಾರೆ. ಇದೂ ಕೂಡ ಕೊಲೆ ಬೆದರಿಕೆಯೇ ಆಗಿದೆ. ಆದ್ದರಿಂದ ಈ ಕೂಡಲೇ ಸಂಜಯ್ ಗಾಯಕವಾಡ್ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ತಳ್ಳಬೇಕು” ಎಂದು ಸಿಎಂ‌ ಆಗ್ರಹಿಸಿದರು.

Advertisements

“ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ರಾಹುಲ್ ಗಾಂಧಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ಉತ್ತರ ಪ್ರದೇಶದ ಸಚಿವರೊಬ್ಬರು ರಾಹುಲ್ ಗಾಂಧಿ ಈ ದೇಶದ ನಂಬರ್ ಒನ್ ಭಯೋತ್ಪಾದಕ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇವತ್ತಿನವರೆಗೂ ಬಿಜೆಪಿ ಪಕ್ಷವಾಗಲಿ, ಬಿಜೆಪಿ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಕಠಿಣ ಕ್ರಮ ತೆಗೆದುಕೊಂಡಿಲ್ಲ. ಕಾಟಾಚಾರಕ್ಕೆ ಕೇಸು ದಾಖಲಿಸಿ ಕೈ ಚೆಲ್ಲಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಪ್ರಧಾನಿಯಾಗಿ ನೂರು ದಿನ: ಹಿನ್ನಡೆಯೋ, ಮುನ್ನಡೆಯೋ?

“ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಹೂತು ಹಾಕುವುದಾಗಿ ಸಂಜಯ್ ಗಾಯಕವಾಡ್ ಮತ್ತೆ ಬೆದರಿಕೆ ಹಾಕಿದ್ದಾನೆ. ರಾಹುಲ್ ಗಾಂಧಿ ಅವರಿಗೆ ಜೀವ ಬೆದರಿಕೆ ಹಾಕಿರುವ ಎಲ್ಲರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ತಕ್ಷಣ ಬಂಧಿಸಬೇಕು” ಎಂದು ಆಗ್ರಹಿಸಿದರು.

ಮೋದಿ ಐದು ವರ್ಷ ಪೂರೈಸಲ್ಲ: ಸಿಎಂ

“ದೇಶದಲ್ಲಿ‌ ಆಗುತ್ತಿರುವ ರಾಜಕಾರಣದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೋದಿ ಅವರು ಈ ಬಾರಿ ಪೂರ್ಣಾವಧಿ ಮುಗಿಸೋದು ಡೌಟು. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅವರು ಹೆಚ್ಚು ದಿನ ಕೇಂದ್ರ ಸರ್ಕಾರದ ಜೊತೆ ಇರುವುದಿಲ್ಲ ಎನ್ನಿಸುತ್ತಿದೆ” ಎಂದು ಇದೇ ವೇಳೆ ಹೇಳಿದರು.

ಮುನಿರತ್ನಂ ವಿರುದ್ಧ ಕಾನೂನು ಕ್ರಮ

“ಅಸಹ್ಯವಾಗಿ ನಾಲಗೆ ಗರಿಬಿಟ್ಟು, ಮಹಿಳಾ ಸಮುದಾಯವನ್ನು, ದಲಿತ ಜನಾಂಗವನ್ನು, ಒಕ್ಕಲಿಗ ಸಮುದಾಯವನ್ನು ಅತ್ಯಂತ ಕೆಟ್ಟದಾಗಿ ಅವಹೇಳನ ಮಾಡಿರುವ ಶಾಸಕ ಮುನಿರತ್ನಂ ವಿರುದ್ಧ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಎನ್ನುವ ಬೇಡಿಕೆ ಇದೆ. ಸದ್ಯ ಮುನಿರತ್ನಂ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X