ಕಲಬುರಗಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೂಚನೆ ಮೇರೆಗೆ 2024-25ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 19ರಂದು ಚಿತ್ತಾಪುರ ಪಟ್ಟಣದ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕ ಕ್ರೀಡಾಂಗಣ ವ್ಯವಸ್ಥಾಪಕ ಮರಿಯಪ್ಪ ಬೊಮ್ಮನಳ್ಳಿಕರ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಖೋ-ಖೋ, ಕಬ್ಬಡಿ, ವಾಲಿಬಾಲ್, ಥ್ರೋಬಾಲ್, ಫುಟ್ಬಾಲ್, ಯೋಗ ಸ್ಪರ್ಧೆಗಳನ್ನು ಮಾತ್ರ ಏರ್ಪಡಿಸಲಾಗುವುದು. ವಯಕ್ತಿಕ ಕ್ರೀಡೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ ಆಯ್ಕೆ ತಂಡವು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಶಾಸಕ ಮುನಿರತ್ನ ವಿರುದ್ಧ ಸೂಕ್ತ ಕ್ರಮ ಜರುಗಿಸಿ: ದಸಂಸ ಸಂಚಾಲಕ ಶರಣು ಶಿಂಧೆ ದೂರು
“ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ನಿಗದಿಪಡಿಸಿದ ದಿನಾಂಕದಂದು ಬೆಳಗ್ಗೆ 9 ಗಂಟೆ ಒಳಗಾಗಿ ಕ್ರೀಡಾಕೂಟ ನಡೆಯುವ ಕ್ರೀಡಾಂಗಣದಲ್ಲಿ ಸಂಬಂಧಪಟ್ಟವರಲ್ಲಿ ವರದಿ ಮಾಡಿಕೊಂಡು ಹೆಸರು ನೋಂದಾಯಿಸಿಕೊಳ್ಳಬೇಕು” ಎಂದು ತಿಳಿದರು.
ಹೆಚ್ಚಿನ ಮಾಹಿತಿಗಾಗಿ ಶರಣಬಸಪ್ಪ ಮಟ್ಟಾಳೆ ಪಿಟಿಒ 7892652212, ಕ್ರೀಡಾಂಗಣ ವ್ಯವಸ್ಥಾಪಕ ಮರಿಯಪ್ಪ ಬೊಮ್ಮನಳ್ಳಿಕರ್ 9945230160 ಸಂಪರ್ಕಿಸಬಹುದು.