ಈಗಾಗಲೇ ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಮಂದಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿದೆ.
ಮುನಿರತ್ನ ವಿರುದ್ಧ ಈಗಾಗಲೇ ಎರಡು ಪ್ರಕರಣ ದಾಖಲಾಗಿದೆ. ಈಗ ಗನ್ ಮ್ಯಾನ್ ವಿಜಯ್ ಕುಮಾರ್, ಸುಧಾಕರ್, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಸೇರಿದಂತೆ 7 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನು ಓದಿದ್ದೀರಾ? ನರಗುಂದ | ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ
ಸಮಾಜ ಸೇವಕಿಯಾಗಿರುವ ಸಂತ್ರಸ್ತೆ ಡಿವೈಎಸ್ ಪಿ ದಿನಕರ ಶೆಟ್ಟಿ ಸಮ್ಮುಖದಲ್ಲಿ ದೂರು ದಾಖಲಿಸಿದ್ದಾರೆ. 2020ರಿಂದ 2022ರವರೆಗೆ ತನ್ನ ಮೇಲೆ ಅತ್ಯಾಚಾರ ನಡೆಸಲಾಗಿದೆ. ಹನಿಟ್ರ್ಯಾಪ್‌ಗೆ ಬಳಸಿಕೊಳ್ಳಲಾಗಿದೆ ಎಂದು ದೂರು ನೀಡಿದ್ದಾರೆ.
ಇನ್ನು ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಆರೋಪದಲ್ಲಿ ಶಾಸಕ ಮುನಿರತ್ನ ನಾಯ್ಡು ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ.
