ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ.
ಪೋಕ್ಸೊ ಪ್ರಕರಣ ರದ್ದತಿ ಮತ್ತು ಅದೇ ಪ್ರಕರಣದಲ್ಲಿ ಜಾಮೀನು ಕೋರಿ ಬಿ ಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಸೆಪ್ಟೆಂಬರ್ 27ಕ್ಕೆ ಮುಂದೂಡಿದೆ.
ಇದನ್ನು ಓದಿದ್ದೀರಾ? ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರಿನ ಮಹಿಳೆಯೊಬ್ಬರು, ತಮ್ಮ ಪುತ್ರಿಯ ಮೇಲೆ ಯಡಿಯೂರಪ್ಪನವರು ಲೈಂಗಿಕ ಕಿರುಕುಳ ಮಾಡಿದ್ದಾರೆ ಎಂದು ಆರೋಪಿಸಿ ಮಾರ್ಚ್ 14ರಂದು ಪ್ರಕರಣ ದಾಖಲಿಸಿದ್ದರು. ಆದರೆ, ಆ ಮಹಿಳೆಯು ಇತ್ತೀಚೆಗೆ (ಮೇ 26) ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಈ ನಡುವೆ ಸರ್ಕಾರವು ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿತ್ತು. ಬಳಿಕ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದು ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿದ್ದರು.
ಅದಾದ ಬಳಿಕ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದಾರೆ.
#KarnatakaHighCourt adjourns hearing on quashing petition filed by former chief minister #BSYediyurappa in the #POCSO case to next Friday, September 27. Interim relief to continue. pic.twitter.com/ROeG34ZApy
— Bar and Bench (@barandbench) September 19, 2024
