ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿದವರಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಲಾಗಿತ್ತು ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಪಡಿಸಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಕ್ಷಮಾಪಣೆ ಪರಿಗಣಿಸಿ ಮದ್ರಾಸ್ ಹೈಕೋರ್ಟ್ ಪ್ರಕ್ರಿಯೆ ರದ್ದುಪಡಿಸಿತ್ತು. ಇದರ ಆಧಾರದಲ್ಲಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಕರಂದ್ಲಾಜೆ ವಿರುದ್ಧದ ಪ್ರಕರಣವನ್ನು ರದ್ದು ಮಾಡಿದೆ.
“ತಮಿಳುನಾಡಿನ ಜನರು ಅಲ್ಲಿ ತರಬೇತಿ ಪಡೆದು ಇಲ್ಲಿ ಬಂದು ಬಾಂಬ್ ಹಾಕುತ್ತಾರೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟಿದ್ದೂ ಕೂಡ ಅಲ್ಲಿಂದ ಬಂದವರು” ಎಂದು ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು ಇದು ವಿವಾದಕ್ಕೆ ಕಾರಣವಾಗಿತ್ತು. ತಮಿಳುನಾಡು ಸಿಎಂ ಸ್ಟ್ಯಾಲಿನ್ ಅವರು ಶೋಭಾ ಕರಂದ್ಲಾಜೆ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ಇದನ್ನು ಓದಿದ್ದೀರಾ? ನಾಗಮಂಗಲ ಗಲಭೆ | ಸುಳ್ಳು ಸುದ್ದಿ ಹರಡಿದ್ದ ಬಿಜೆಪಿಯ ಶೋಭಾ ಕರಂದ್ಲಾಜೆ, ಅಶೋಕ್ ವಿರುದ್ಧ ಎಫ್‌ಐಆರ್
ಇದಾದ ಬೆನ್ನಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಶೋಭಾ “ನನ್ನ ತಮಿಳು ಸಹೋದರರು ಮತ್ತು ಸಹೋದರಿಯರೇ, ನಾನು ಈ ಪ್ರಕರಣದ ಬೆಳಕು ಚೆಲ್ಲುವ ಉದ್ದೇಶದಿಂದ ಹೇಳಿಕೆ ನೀಡಿರುವುದೇ ಹೊರತು ಯಾರ ಮೇಲೆಯೂ ಆರೋಪ ಹೊರಿಸುವ ಉದ್ದೇಶ ಹೊಂದಿರಲಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಆದರೂ ನನ್ನ ಹೇಳಿಕೆ ಕೆಲವರಿಗೆ ನೋವು ತಂದಿದೆ. ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ” ಎಂದು ಹೇಳಿದ್ದರು.
ಆದರೆ ತಮಿಳುನಾಡಿನಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣ ರದ್ದು ಪಡಿಸುವಂತೆ ಕೋರಿ ಕೇಂದ್ರ ಸಚಿವೆ ಕೋರ್ಟ್ ಮೆಟ್ಟಿಲೇರಿದ್ದರು.
#Karnataka High Court has quashed the criminal case registered against #Member of Parliament, #Shobha Karandlaje, after she made a statement linking the suspect in the #Rameshwaram cafe blast with #TamilNadu pic.twitter.com/lFc0h6gqrn
— Live Law (@LiveLawIndia) September 19, 2024
