ಬಿಜೆಪಿ ನಾಯಕರಿಂದ ರಾಹುಲ್ ಗಾಂಧಿಯನ್ನು ಮುಗಿಸುವ ಸಂಚು ನಡೆದಿದೆಯೇ?

Date:

Advertisements
ರಾಹುಲ್ ಅವರ ಪ್ರಾಬಲ್ಯತೆ ಮತ್ತು ಬೆಳವಣಿಗೆ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರಿಗೆ ನುಂಗಲಾರದ ತುತ್ತಾಗಿದೆ. ಹೀಗಾಗಿ, ರಾಹುಲ್ ಅವರನ್ನ ತುಳಿಯಲು, ಅವರನ್ನ ಮುಗಿಸಲು ಬಿಜೆಪಿ ದೊಡ್ಡ ಮಟ್ಟದಲ್ಲಿಯೇ ಸಂಚು ರೂಪಿಸುತ್ತಿದೆ ಎಂಬ ಆರೋಪಗಳೂ ಕೇಳಿಬರುತ್ತಿವೆ.

ಸಾಮಾಜಿಕ ಜಾಲತಾಣವನ್ನ ತನ್ನ ತಂತ್ರಕ್ಕೆ ತಕ್ಕಂತೆ ಬಳಸಿಕೊಂಡಿದ್ದ ಬಿಜೆಪಿ, ರಾಹುಲ್ ಗಾಂಧಿ ಅವರನ್ನು ಪಪ್ಪು ಮಾಡಿತ್ತು. 2014 ಮತ್ತು 2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯನ್ನ ಪಪ್ಪು ಎಂದೇ ಬಿಂಬಿಸಿ, ನಿರಾಯಾಸವಾಗಿ ಚುನಾವಣೆಗಳನ್ನು ಗೆದ್ದಿತ್ತು. ಆದರೆ, ಈಗ ದೇಶದಲ್ಲಿ ರಾಹುಲ್ ಗಾಂಧಿ ಅವರ ಪರ್ವ ಆರಂಭವಾಗಿದೆ. ಗೋಧಿ ಮೀಡಿಯಾಗಳಲ್ಲಿ ರಾಹುಲ್ ಗಾಂಧಿ ಅವರು ಕಾಣಸಿಗದಿದ್ದರೂ, ಇನ್ನಿತರ ಸಾಮಾಜಿಕ ಪ್ಲಾಟ್ ಫಾರಂಗಳಲ್ಲಿ ಅವರು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಹುಲ್‌ಗಿದ್ದ ಪಪ್ಪು ಎಂಬ ಹಣೆಪಟ್ಟಿ ಕಳಚಿಬಿದ್ದಿದೆ. ಅವರು ದೇಶದ ಬಲಿಷ್ಠ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ, ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಹುನ್ನಾರಗಳನ್ನು ಬಯಲು ಮಾಡುತ್ತಿದ್ದಾರೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ರಾಹುಲ್ ಅವರ ಪ್ರಾಬಲ್ಯತೆ ಮತ್ತು ಬೆಳವಣಿಗೆ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರಿಗೆ ನುಂಗಲಾರದ ತುತ್ತಾಗಿದೆ. ಹೀಗಾಗಿ, ರಾಹುಲ್ ಅವರನ್ನ ತುಳಿಯಲು, ಅವರನ್ನ ಮುಗಿಸಲು ಬಿಜೆಪಿ ದೊಡ್ಡ ಮಟ್ಟದಲ್ಲಿಯೇ ಸಂಚು ರೂಪಿಸುತ್ತಿದೆ ಎಂಬ ಆರೋಪಗಳೂ ಕೇಳಿಬರುತ್ತಿವೆ.

ಹಾಗಿದ್ರೆ, ಏನದು ಸಂಚು? ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ನಿವಾಸದ ಎದುರು ದೆಹಲಿ ಬಿಜೆಪಿಯ ಸಿಖ್ ಸೆಲ್ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿದರು. ಈ ವೇಳೆ, ಮಾತನಾಡಿದ್ದ ಬಿಜೆಪಿ ನಾಯಕ ತರ್ವಿಂದರ್ ಸಿಂಗ್ ಮರ್ವಾ, ”ರಾಹುಲ್ ಗಾಂಧಿ ಆಜ್ ನಹೀ ತೋ ಆನೆವಾಲೆ ಟೈಮ್ ಮೇ ತೇರಾ ಭಿ ವೋಹಿ ಹಾಲ್ ಹೋಗಾ ಜೋ ತೇರಿ ದಾದಿ ಕಾ ಹಾಲ್ ಹುವಾ ಥಾ” ಎಂದು ಬೆದರಿಕೆ ಹಾಕಿದ್ದಾರೆ. ಅಂದರೆ, ”ರಾಹುಲ್ ಗಾಂಧಿ – ಈಗ ಅಲ್ಲದಿದ್ದರೂ, ಮುಂಬರುವ ದಿನಗಳಲ್ಲಿ ನಿನ್ನ ದಾದಿಗೆ ಅಂದರೆ ಇಂದಿರಾಗಾಂಧಿಗೆ ಆದ ಸ್ಥಿತಿಯೇ ನಿನಗೂ ಆಗಲಿದೆ” ಎಂದು ಸಾರ್ವಜನಿಕವಾಗಿಯೇ ಬೆದರಿಕೆ ಹಾಕಿದ್ದಾರೆ.

Advertisements

ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾಗಿದ್ದಾರೆ. ಇಂತಹ ತ್ಯಾಗ ಬಲಿದಾನ ಮಾಡಿದ ಧೀಮಂತ ನಾಯಕರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ದೇಶಕ್ಕಾಗಿ ಅವಿರತ ಹೋರಾಟ ನಡೆಸುತ್ತಿದ್ದಾರೆ. ಬಡವರು, ದಲಿತ-ದಮನಿತರು, ರೈತರು, ಕಾರ್ಮಿಕರು, ಅಲ್ಪಸಂಖ್ಯಾತರು ಹಾಗೂ ಮಹಿಳೆಯರ ಪರವಾಗಿ ಧನಿ ಎತ್ತುತ್ತಿದ್ದಾರೆ. ದೇಶ ಕಟ್ಟುವಲ್ಲಿ ತೊಡಗಿರುವ ರಾಹುಲ್‌ಗೆ ಅವರ ಅಜ್ಜಿ ಇಂದಿರಾಗಾಂಧಿಗೆ ಆದ ಗತಿಯೇ ಆಗುತ್ತದೆ ಎಂದು ಸೆಪ್ಟೆಂಬರ್ 11, 2024ರಂದು 3 ಬಾರಿ ಶಾಸಕರಾಗಿದ್ದ ಬಿಜೆಪಿ ನಾಯಕ ತರ್ವಿಂದರ್ ಸಿಂಗ್ ಮರ್ವಾ ಬಹಿರಂಗವಾಗಿಯೇ ಹತ್ಯೆಯ ಬೆದರಿಕೆ ಹಾಕಿದ್ದಾರೆ,

ಇನ್ನು, “ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸಿದವರಿಗೆ ₹11 ಲಕ್ಷ ಬಹುಮಾನ ಕೊಡುತ್ತೇವೆ” ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ಶಿವಸೇನಾ ಬಣದ ಶಾಸಕ ಸಂಜಯ್ ಗಾಯಕ್ವಾಡ್ ಘೋಷಿಸಿದ್ದಾರೆ. ಅಲ್ಲದೇ, ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಹೂತು ಹಾಕುವುದಾಗಿಯೂ ಬೆದರಿಕೆ ಹಾಕಿದ್ದಾರೆ. ಇದೂ ಕೂಡ ಕೊಲೆ ಬೆದರಿಕೆಯೇ ಆಗಿದೆ.

ಅಲ್ಲದೆ, ಪಾಟ್ನಾದ ಭಾಗಲ್ಪುರದಲ್ಲಿ ನಡೆದ ವಂದೇ ಭಾರತ್ ಎಕ್ಸ್‌ಪ್ರೆಸ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು, “ರಾಹುಲ್ ಗಾಂಧಿ ಅವರನ್ನು ಭಯೋತ್ಪಾದಕ” ಎಂದು ಕರೆದಿದ್ದಾರೆ. ”ಭಯೋತ್ಪಾದಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ ಹೆಸರೇ ಮೊದಲಿರಬೇಕು. ನನ್ನ ಪ್ರಕಾರ ರಾಹುಲ್ ಗಾಂಧಿ ಭಾರತೀಯನಲ್ಲ” ಎಂದಿದ್ದಾರೆ.

ಇನ್ನು ಕರ್ನಾಟಕದ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ”ತಾನು ಯಾವ ಜಾತಿಯಲ್ಲಿ ಹುಟ್ಟಿದ್ದೇನೆ ಎಂಬುದು ರಾಹುಲ್ ಗಾಂಧಿಗೆ ತಿಳಿದಿಲ್ಲ. ಮುಸ್ಲಿಮರಿಗೆ ಹುಟ್ಟಿದ್ದಾನೋ, ಕ್ರೈಸ್ತರಿಗೆ ಹುಟ್ಟಿದ್ದಾನೋ ಎಂಬ ಬಗ್ಗೆ ತನಿಖೆ ಆಗಬೇಕು” ಎಂಬ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದರು.

ಬಿಜೆಪಿ ನಾಯಕರುಗಳು ರಾಹುಲ್ ಗಾಂಧಿಯವರ ಮೇಲೆ ಈ ರೀತಿ ಜೀವ ಬೆದರಿಕೆಗಳನ್ನ ಹಾಕುವ ಮೂಲಕ ಬಿಜೆಪಿಯ ಕಾರ್ಯಕರ್ತರನ್ನು, ಹಿಂದುತ್ವವಾದಿಗಳನ್ನು ಪ್ರಚೋದಿಸುವ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಗಾಂಧಿ ಅವರ ರಾಜಕೀಯ ಏಳಿಗೆ ಕಂಡು ಬಿಜೆಪಿಯವರು ತಲ್ಲಣಗೊಂಡಿದ್ದಾರೆ. ಕಳೆದ ಒಂದು ದಶಕದಿಂದ ರಾಹುಲ್ ಗಾಂಧಿಯವರು ಬಡವರ ಹಾಗೂ ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಧ್ವತಿ ಎತ್ತಿದಾಗಲೆಲ್ಲ, ಬಿಜೆಪಿ ರಾಹುಲ್ ಅವರನ್ನ ದೇಶವಿರೋಧಿ ಎಂದು ಬಣ್ಣಿಸುವ ದುಷ್ಕೃತ್ಯ ಎಸಗುತ್ತಿದೆ.

ಇನ್ನು ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ್ದು, ”ರಾಹುಲ್ ಗಾಂಧಿ ಅವರಿಗೆ ಕೊಲೆ ಬೆದರಿಕೆ, ತೇಜೋವಧೆಗೆ ಸುಳ್ಳಿನ ಸರಮಾಲೆ ಸೃಷ್ಟಿ ಮಾಡುತ್ತಿದೆ. ರಾಜಕೀಯವಾಗಿಯೂ ಮುಗಿಸುವ ಜೊತೆಗೆ ಪ್ರಾಣ ಭಯ ಹುಟ್ಟಿಸುವ ಬಿಜೆಪಿ ಷಡ್ಯಂತ್ರ ಆತಂಕಕಾರಿಯಾದದ್ದು, ರಾಹುಲ್ ಗಾಂಧಿ ಅವರಿಗೆ ಜೀವ ಬೆದರಿಕೆ ಹಾಕಿರುವ ಎಲ್ಲರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ತಕ್ಷಣ ಬಂಧಿಸಬೇಕು. ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲ ಹೆದರುವವರಲ್ಲ” ಎಂದು ಹೇಳಿದ್ದಾರೆ.

ಮುಂದುವರೆದು, ”ಬಿಜೆಪಿ ಮತ್ತು ಮಿತ್ರಪಕ್ಷಗಳ ನಾಯಕರ ಹೇಳಿಕೆಗಳಿಂದ ನನಗೇನು ಆಶ್ಚರ್ಯವಾಗಿಲ್ಲ. ಕತ್ತರಿಸುವುದು, ಹೊಡೆಯುವುದು, ಕಡಿಯುವುದು, ಕೆಡವುವುದು….. ಇವೆಲ್ಲವೂ ಮನುವಾದಿಗಳ ಭಾಷೆ. ಇದು ಸಂವಿಧಾನದ ಇಲ್ಲವೇ ಪ್ರಜಾಪ್ರಭುತ್ವವಾದಿಗಳ ಭಾಷೆ ಅಲ್ಲ. ಇವರೆಲ್ಲರೂ ನಂಬಿರುವುದು ಮತ್ತು ಒಪ್ಪಿರುವುದು ಮನುಧರ್ಮ ಶಾಸ್ತ್ರವನ್ನು” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋಶಾ ಪಿತೂರಿ-ಕೇಜ್ರೀವಾಲ್ ಸವಾಲು

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರು, ”ಬಿಜೆಪಿ-ಆರ್‌ಎಸ್‌ಎಸ್‌ ದ್ವೇಷದ ರಾಜಕಾರಣ ಮಾಡುತ್ತಿದೆ. ರಾಹುಲ್ ಗಾಂಧಿ ಪ್ರೀತಿಯ ಸಂದೇಶ ನೀಡಿದವರು. ದೇಶವನ್ನು ಒಗ್ಗೂಡಿಸಲು ಅವರು ಭಾರತ್ ಜೋಡೋ ಯಾತ್ರೆ ಮಾಡಿದರು. ಇದರಿಂದ ಬಿಜೆಪಿ ಅಸಮಾಧಾನಗೊಂಡಿದೆ. ಬಿಜೆಪಿ ನಾಯಕರು ರಾಹುಲ್ ವಿರುದ್ಧ ನಿರಂತರವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ಅಲ್ಲದೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬೆದರಿಕೆ ಹಾಕಿರುವ ಕುರಿತು ಆಘಾತ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ”ರಾಹುಲ್ ಗಾಂಧಿ ಅವರ ಸುರಕ್ಷತೆಯ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಖಚಿತಪಡಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ‘ತನ್ನ ಅಜ್ಜಿಗೆ ಬಂದ ಸ್ಥಿತಿಯೇ ರಾಹುಲ್ ಗಾಂಧಿಗೆ ಬರಲಿದೆ. ಅವರ ನಾಲಿಗೆ ಕತ್ತರಿಸುತ್ತೇನೆ’ ಎಂದು ಶಿವಸೇನಾ ಶಿಂದೆ ಬಣದ ಶಾಸಕರೊಬ್ಬರು ಬೆದರಿಕೆ ಹಾಕಿರುವ ಸಂಬಂಧ ಮಾಧ್ಯಮ ವರದಿಗಳನ್ನು ಕಂಡು ಆಘಾತವಾಗಿದೆ” ಎಂದಿದ್ದಾರೆ.

ಇನ್ನು, ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿಕೊಂಡು ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ನಾಯಕರು ನೀಡುತ್ತಿರುವ ಹೇಳಿಕೆಗಳು ‘ಅತ್ಯಂತ ಆಕ್ಷೇಪಾರ್ಹ’ ಮತ್ತು ಹಿಂಸಾತ್ಮಕವಾಗಿವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದಿರುವ ಖರ್ಗೆ ಅವರು, ”ನಿಮ್ಮ ನಾಯಕರನ್ನು ಶಿಸ್ತುಬದ್ಧಗೊಳಿಸಿ. ಇಂತಹ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇದರಿಂದ ಭಾರತದ ರಾಜಕೀಯ ಅಧೋಗತಿಗೆ ಹೋಗುವುದನ್ನು ತಡೆಯಬಹುದು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು” ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ರಾಹುಲ್ ಗಾಂಧಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ. ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಲು ಕಾಂಗ್ರೆಸ್ ನಾಯಕ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಮಾಕನ್ ಅವರು ಸೆಪ್ಟೆಂಬರ್ 18ರಂದು ದೆಹಲಿ ಪೊಲೀಸರನ್ನು ಸಂಪರ್ಕಿಸಿದ್ದಾರೆ.

ರೈಲ್ವೇ ಖಾತೆಯ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು, ದೆಹಲಿ ಬಿಜೆಪಿ ನಾಯಕ ತರ್ವಿಂದರ್ ಸಿಂಗ್ ಮರ್ವಾ, ಶಿವಸೇನಾ (ಶಿಂದೆ) ಸಂಜಯ್ ಗಾಯಕ್ವಾಡ್ ಮತ್ತು ಯು.ಪಿ. ಸಚಿವ ರಘುರಾಜ್ ಸಿಂಗ್ ವಿರುದ್ಧ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜತೆಗೆ, ರಾಹುಲ್ ಗಾಂಧಿ ಅವರನ್ನು ನಿಂದನೆ ಮಾಡಿದ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ಎಫ್ಐಆರ್ ದಾಖಲಾಗಿದೆ.

ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ವಿರುದ್ಧ ಹಿಂದೂ ಸೇನಾ (ಎಸ್) ಅಧ್ಯಕ್ಷ ಸುರ್ಜಿತ್ ಯಾದವ್ ಅವರು ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ದಾಖಲಿಸಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಸೇರಿ ಇತರ ನಾಯಕರು ನೀಡಿದ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಕಾಂಗ್ರೆಸ್ ರಾಷ್ಟ್ರ ರಾಜಧಾನಿ ದೆಹಲಿ ಸೇರಿ ದೇಶದ ವಿವಿಧೆಡೆ ಸೆ.18ರಂದು ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ಆದರೆ, ಈ ಬಗ್ಗೆ ಇವತ್ತಿನವರೆಗೂ ಬಿಜೆಪಿ ಪಕ್ಷವಾಗಲಿ, ಬಿಜೆಪಿ ಸರಕಾರವಾಗಲಿ, ಕೇಂದ್ರ ಸರಕಾರವಾಗಲಿ ಕಠಿಣ ಕ್ರಮ ತೆಗೆದುಕೊಂಡಿಲ್ಲ. ಕಾಟಾಚಾರಕ್ಕೆ ಕೇಸು ದಾಖಲಿಸಿ ಕೈ ಚೆಲ್ಲಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಎನ್‌ಡಿಎ ಸರ್ಕಾರ ವಿರೋಧ ಪಕ್ಷದ ನಾಯಕನ ವಿರುದ್ಧ ದ್ವೇಷ ಮತ್ತು ಹಿಂಸಾಚಾರವನ್ನು ಪ್ರಚೋದಿಸುತ್ತಿದೆ. ಇದು ಆಡಳಿತ ಪಕ್ಷಕ್ಕೆ ಮಾತ್ರವಲ್ಲ ಭಾರತೀಯ ಪ್ರಜಾಪ್ರಭುತ್ವದ ದುರಂತವಾಗಿದೆ. ಕೊಲೆ, ಹಲ್ಲೆ, ಅತ್ಯಾಚಾರ, ಗಲಭೆ, ಹಿಂಸಾಚಾರದಂತಹ ಪ್ರಚೋದನಾಕಾರಿ ಹೇಳಿಕೆ ನೀಡುವ, ಬೆದರಿಕೆಯೊಡ್ಡುವ ದುಷ್ಕರ್ಮಿಗಳು, ಸಮಾಜಘಾತುಕರ ವಿರುದ್ಧ ಸರ್ಕಾರಗಳು ಕಠಿಣವಾದ ಕ್ರಮ ಕೈಗೊಳ್ಳಬೇಕು. ನಾನಾ ರೀತಿಯಲ್ಲಿ ಬೆದರಿಕೆಗೆ ಗುರಿಯಾಗಿರುವ ರಾಹುಲ್ ಅವರಿಗೆ ಕೇಂದ್ರ ಸರ್ಕಾರ ಹೆಚ್ಚಿನ ಭದ್ರತೆ ನೀಡಬೇಕು. ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಮೋದಿ ಸರ್ಕಾರ ಹೆಚ್ಚಿನ ಒತ್ತು ಕೊಡಬೇಕು. ತಮ್ಮದೇ ಪಕ್ಷದಲ್ಲಿ ಕೊಲೆ ಬೆದರಿಕೆ ಹಾಕುತ್ತಿರುವ ಬಿಜೆಪಿ ಶಾಸಕ, ಸಂಸದರು, ಸಚಿವರು, ನಾಯಕರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು.

e4c01bd9b2970ccfecae47b47af65a36?s=150&d=mp&r=g
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X