ದಾವಣಗೆರೆ | ಮರಳಿನ ವಿಚಾರಕ್ಕೆ ಎರಡು ಗ್ರಾಮಸ್ಥರ ನಡುವೆ ಘರ್ಷಣೆ: ಚಾಕು ಇರಿತಕ್ಕೊಳಗಾಗಿದ್ದ ಓರ್ವ ಮೃತ್ಯು

Date:

Advertisements

ಮರಳಿನ ವಿಚಾರಕ್ಕೆ ಎರಡು ಗ್ರಾಮಗಳ ನಡುವೆ ಘರ್ಷಣೆ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರಿಗೆ ಚಾಕು ಇರಿಯಲಾಗಿದೆ. ಇಬ್ಬರ ಪೈಕಿ ಓರ್ವ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ನದಿ ಪಾತ್ರದಲ್ಲಿ ಮರಳು ತೆಗೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗ್ರಾಮಗಳ ನಡುವೆ ಗಲಾಟೆ ಸಂಭವಿಸಿದ್ದು , ಘಟನೆಯಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದ್ದು ಈ ಘರ್ಷಣೆಯಲ್ಲಿ ಇಬ್ಬರ ಪೈಕಿ ಓರ್ವ ಮೃತಪಟ್ಟ ಘಟನೆ ಹೊನ್ನಾಳಿಯ ನ್ಯಾಮತಿಯಲ್ಲಿ ನಡೆದಿದೆ.

ನ್ಯಾಮತಿ ತಾಲೂಕಿನ ಮರಿಗೊಂಡನಹಳ್ಳಿ ಹಾಗೂ ಕಡದಕಟ್ಟೆ ಗ್ರಾಮಸ್ಥರ ನಡುವೆ ಘರ್ಷಣೆ ನಡೆದಿದೆ. ಮರಿಗೊಂಡನಹಳ್ಳಿ ಹಾಗೂ ಕಡದಕಟ್ಟೆ ಗ್ರಾಮಗಳ ವ್ಯಾಪ್ತಿಯಲ್ಲಿನ ತುಂಗಭದ್ರ ನದಿ‌ಪಾತ್ರದ ಮರಳಿಗಾಗಿ ಘರ್ಷಣೆ ನಡೆದಿದೆ. ಘರ್ಷಣೆಯಲ್ಲಿ ಹಲವು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಈ ಪೈಕಿ ಓರ್ವ ಶಿವರಾಜ್ ಎಂಬುವವರು ಮರಣ ಹೊಂದಿದ್ದು, ಇನ್ನೊಬ್ಬ ಗಾಯಾಳು ಭರತ್ ಎಂಬಾತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿದೆ.

Advertisements
ಹೊನ್ನಾಳಿ

ಎರಡು ಗ್ರಾಮಗಳಲ್ಲಿ ಬಿಗುವಿನ ವಾತಾವರಣ ಪ್ರಕ್ಷಿಪ್ತತೆ ಉಂಟಾಗಿದ್ದು, ನ್ಯಾಮತಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೊಕ್ಕಾಂ ಹೂಡಿದ್ದಾರೆ.

ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣದ ತನಿಖೆ ಬಗ್ಗೆ ತನಿಖಾಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿ ಬಂದೋಬಸ್ತ್ ಮಾಡಲು ಸೂಚಿಸಿದರು. ಪೊಲೀಸ್ ನಿರೀಕ್ಷಕ ಎನ್ ಎಸ್ ರವಿ, ಸುನಿಲ್ ಕುಮಾರ್ ಅವರು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಉಡುಪಿ | ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

ಘಟನೆಯ ಬಗ್ಗೆ ಗ್ರಾಮಸ್ಥರೊಂದಿಗೆ ಚರ್ಚಿಸಿ ಮಾಹಿತಿ ಪಡೆದ ಅವರು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕು. ತಪ್ಪು ಮಾಡಿದವರು ಯಾರೇ ಆದರೂ ಸುಮ್ಮನೆ ಬಿಡುವುದಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ಹದಗೆಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಕೊಲೆ ಪ್ರಕರಣ ಸಂಬಂಧ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು. ಗ್ರಾಮದಲ್ಲಿ ಶಾಂತಿ ಕಾಪಾಡುವಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X