ಜಮಖಂಡಿ ಕ್ಷೇತ್ರ | ನ್ಯಾಮಗೌಡರ ನಾಮಬಲವೇ ಮುಂದೆ, ಬಿಜೆಪಿ ಅದರ ಹಿಂದೆ

Date:

Advertisements
ಕಳೆದ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದ ಬಿಜೆಪಿ ತನ್ನ ಸಂಘಟನಾ ಬಲದಿಂದ ಈ ಬಾರಿ ಕಾಂಗ್ರೆಸ್‌ಗೆ ಪೈಪೋಟಿ ನೀಡಲಿದೆ. ಆನಂದ ನ್ಯಾಮಗೌಡ ಮತ್ತು ಜಗದೀಶ ಗುಡಗುಂಟಿ ನಡುವೆ ನೇರ ಸ್ಪರ್ಧೆ ಇರಲಿದ್ದು, ಜಮಖಂಡಿ ಮತದಾರರು ಯಾರಿಗೆ ಆಶೀರ್ವಾದ ಮಾಡುತ್ತಾರೆ ಎಂಬುದು ಇನ್ನೂ ಗುಟ್ಟಾಗಿಯೇ ಇದೆ.

ಬಾಗಲಕೋಟೆ ಜಿಲ್ಲೆಯ ತಾಲೂಕು ಕೇಂದ್ರವಾದ ಜಮಖಂಡಿ ರಾಜ್ಯ ರಾಜಕಾರಣದಲ್ಲಿ ವಿಶಿಷ್ಟ ಖ್ಯಾತಿ ಪಡೆದ ವಿಧಾನಸಭಾ ಕ್ಷೇತ್ರ. ದೇಶಕ್ಕೆ ರಾಷ್ಟ್ರಪತಿ, ರಾಜ್ಯಕ್ಕೆ ಮುಖ್ಯಮಂತ್ರಿ ಕೊಟ್ಟ ಜಮಖಂಡಿಯಲ್ಲಿ ಈ ಬಾರಿಯ ಚುನಾವಣೆ ಕಾವು ಜೋರಾಗಿದೆ.

ಜಮಖಂಡಿಯ ಪಟವರ್ಧನ ಸಂಸ್ಥಾನ ಭಾರತದಲ್ಲಿ ವಿಲೀನಗೊಂಡ ನಂತರ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಇಲ್ಲಿ ಸದಾ ಮೇಲುಗೈ ಸಾಧಿಸುತ್ತ ಬಂದಿದೆ. ಜಮಖಂಡಿ ಎಂದ ತಕ್ಷಣ ನೆನಪಾಗುವುದು ಬಿ ಡಿ ಜತ್ತಿ. ಇವರು ನಾಲ್ಕು ಬಾರಿ ಕ್ಷೇತ್ರ ಪ್ರತಿನಿಧಿಸಿದ್ದು, ಹಂಗಾಮಿ ರಾಷ್ಟ್ರಪತಿ, ಉಪರಾಷ್ಟ್ರಪತಿಯಾಗಿ ಹಾಗೂ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿರುವುದು ಇವರ ಹೆಗ್ಗಳಿಕೆ.

ಕಾಂಗ್ರೆಸ್ ನಾಯಕ ದಿವಂಗತ ಸಿದ್ದು ನ್ಯಾಮಗೌಡ ಅವರು ಜಮಖಂಡಿ ಕ್ಷೇತ್ರದ ಶಾಸಕರಾಗಿ, ಮಾಜಿ ಕೇಂದ್ರ ಸಚಿವರಾಗಿ, ‘ಬ್ಯಾರೇಜ ಸಿದ್ದು’ ಎಂದೇ ಪ್ರಖ್ಯಾತಿ ಪಡೆದವರು. ಏಷ್ಯಾ ಖಂಡದಲ್ಲೇ ರೈತರಿಂದ ಹಣ ಸಂಗ್ರಹಿಸಿ ರೈತರಿಂದ ನಿರ್ಮಾಣಗೊಂಡ ಚಿಕ್ಕಪಡಸಲಗಿ ಬ್ಯಾರೇಜ್ ನಿರ್ಮಿಸಿದ ಖ್ಯಾತಿ ಸಿದ್ದು ನ್ಯಾಮಗೌಡರಿಗಿದೆ.

Advertisements

ಸಿದ್ದು ನ್ಯಾಮಗೌಡ ಅವರ ಪುತ್ರ ಆನಂದ ನ್ಯಾಮಗೌಡ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ. 2018ರಲ್ಲಿ ನಡೆದ ಉಪಚುನಾವಣೆಯಲ್ಲಿ ತಂದೆಯ ಸಾವಿನ ಅನುಕಂಪದ ಅಲೆಯಲ್ಲಿ ಆನಂದ ನ್ಯಾಮಗೌಡ ಗೆಲವು ಸಾಧಿಸಿದ್ದರು. ಈ ಬಾರಿಯೂ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದುಕೊಂಡು ಕಾಂಗ್ರೆಸ್‌ನಿಂದ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಜಮಖಂಡಿಯಲ್ಲಿ ಬಿಜೆಪಿ ಹೊಸ ಮುಖಕ್ಕೆ ಮಣೆ ಹಾಕಿದ್ದು, ಕಾಂಗ್ರೆಸ್ ಗೆಲುವಿಗೆ ತಡೆಯೊಡ್ಡಲು ಜಗದೀಶ ಗುಡಗುಂಟಿ ಎಂಬುವರನ್ನು ಕಣಕ್ಕೆ ಇಳಿಸಿದೆ. ಜೆಡಿಎಸ್‌ನಿಂದ ಯಾಕೂಬ್ ಕಪಡೆವಾಲೆ ಸ್ಪರ್ಧೆಯಲ್ಲಿದ್ದಾರೆ.

ಸಿದ್ದು ನ್ಯಾಮಗೌಡ ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಬ್ಯಾರೇಜ್ ನಿರ್ಮಾಣದ ವರ್ಚಸ್ಸು ಆನಂದ ನ್ಯಾಮಗೌಡ ಬೆನ್ನ ಹಿಂದಿದೆ. ಅದು ಅವರ ಗೆಲುವಿಗೆ ನಗೆ ಬೀರುವ ಅಂಶವಾಗಿದೆ. ಜೊತೆಗೆ ಅವರು ಪ್ರಬಲ ಲಿಂಗಾಯತ ಸಮುದಾಯದ ಮುಖಂಡರು.

ಈ ಸುದ್ದಿ ಓದಿದ್ದೀರಾ? ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

2018ರ ಚುನಾವಣೆಯಲ್ಲಿ ಸಿದ್ದು ನ್ಯಾಮಗೌಡ ಅವರಿಗೆ ಬಿಜೆಪಿಗಿಂತ ದೊಡ್ಡ ಸ್ಪರ್ಧೆ ಕೊಟ್ಟವರು ಪಕ್ಷೇತರ ಅಭ್ಯರ್ಥಿ ಜಗದೀಶ ಗುಡಗುಂಟಿ. ಅವರಿಗೆ ಗಾಳ ಹಾಕಿ, ಪಕ್ಷಕ್ಕೆ ಬರಮಾಡಿಕೊಂಡಿರುವ ಬಿಜೆಪಿ, ಕಾಂಗ್ರೆಸ್ ಸೋಲಿಸಲು ಜಗದೀಶ ಗುಡಗುಂಟಿ ಅವರನ್ನು ಮುಂದೆ ಬಿಟ್ಟಿದೆ.

ಆನಂದ ನ್ಯಾಮಗೌಡ 2018ರ ಉಪಚುನಾವಣೆಯಲ್ಲಿ ಗೆದ್ದ ನಂತರ ತಮ್ಮ ತಂದೆ ಸಿದ್ದು ನ್ಯಾಮಗೌಡ ಅವರ ಆಪ್ತರನ್ನು ಹಾಗೂ ಹಿರಿಯ ಮುಖಂಡರನ್ನು ಕಡೆಗಣನೆ ಮಾಡುತ್ತಿದ್ದಾರೆ ಎಂಬ ಆರೋಪಗಳು ಪ್ರಬಲವಾಗಿ ಕೇಳಿ ಬಂದಿದ್ದವು. ನಂತರ ಆನಂದ ನ್ಯಾಮಗೌಡ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆದಿದ್ದರ ಪರಿಣಾಮವಾಗಿ ಜಮಖಂಡಿಯಲ್ಲಿ ಕೈ ಮತ್ತಷ್ಟು ಪ್ರಬಲವಾಗಿದೆ.

ಬಿಜೆಪಿ ಪಕ್ಷದಲ್ಲಿ ಅಭ್ಯರ್ಥಿ ಬದಲಾವಣೆಯ ಬೇಡಿಕೆಯ ಕೂಗು ಹೆಚ್ಚು ಕೇಳಿಬಂದ ಹಿನ್ನೆಲೆಯಲ್ಲಿ ಜಮಖಂಡಿ ಮತಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಅವರಿಗೆ ಟಿಕೆಟ್ ತಪ್ಪಿದೆ. ಇದು ಅವರ ಬೆಂಬಲಿಗರಲ್ಲಿ ಅಸಮಾಧಾನ ಉಂಟು ಮಾಡಿದೆ. ಆದರೆ, ಹೊಸ ಮುಖದಿಂದ ಕಮಲ ಅರಳುತ್ತದೆ ಎಂಬ ಭಾವನೆ ಕಾರ್ಯಕರ್ತರಲ್ಲಿ ಮೂಡಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಹೀಗಾಗಿ ಜಗದೀಶ ಗುಡಗುಂಟಿ ಅವರಿಗೆ ಟಕೇಟ್ ದೊರೆಕಿದೆ. ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಹೊಸ ಹುಮ್ಮಸ್ಸಿನೊಂದಿಗೆ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ.

ಅಲ್ಲದೇ ಜಮಖಂಡಿ ವಿಧಾನಸಭಾ ಮತಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಚಾರಾರ್ಥವಾಗಿ ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ ಅವರು ಈಗಾಗಲೇ ಜಗದೀಶ ಗುಡಗಂಟಿ ಮರವಾಗಿ ರೋಡ್‌ ಶೋ ನಡೆಸಿದ್ದು, ಬಿಜೆಪಿಯಲ್ಲೂ ಸ್ಪರ್ಧೆಯ ಉತ್ಸಾಹಕ್ಕೆ ಮತ್ತಷ್ಟು ಮೆರಗು ಬಂದಿದೆ.

ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಪ್ರಾಬಲ್ಯ ಹೊಂದಿದೆ. ಪಂಚಮಸಾಲಿ ಸಮಾಜದ 25 ಸಾವಿರ, ಗಾಣಿಗ ಸಮಾಜದ 15 ಸಾವಿರ, ಬಣಜಿಗ ಸಮಾಜದ 5,500 ಮತದಾರರಿದ್ದಾರೆ. ಹಾಲುಮತ ಸಮುದಾಯ ಕೂಡ ಪ್ರಬಲವಾಗಿದೆ. ಇಲ್ಲಿ ಹಾಲುಮತ ಸಮುದಾಯದ 24 ಸಾವಿರ ಮತದಾರರಿದ್ದಾರೆ. ಇನ್ನುಳಿದಂತೆ ಪರಿಶಿಷ್ಟ ಜಾತಿ, ಪಂಗಡದ 35 ಸಾವಿರ ಮತದಾರರಿದ್ದಾರೆ. 28 ಸಾವಿರ ಅಲ್ಪಸಂಖ್ಯಾತರು, 10 ಸಾವಿರ ಜೈನ ಹಾಗೂ 5 ಸಾವಿರ ಬ್ರಾಹ್ಮಣ ಮತದಾರರಿದ್ದಾರೆ.

ಕಳೆದ ಬಾರಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದ ಬಿಜೆಪಿ ತನ್ನ ಸಂಘಟನಾ ಬಲದಿಂದ ಈ ಬಾರಿ ಕಾಂಗ್ರೆಸ್‌ಗೆ ಪೈಪೋಟಿ ನೀಡಲಿದೆ. ಆನಂದ ನ್ಯಾಮಗೌಡ ಮತ್ತು ಜಗದೀಶ ಗುಡಗುಂಟಿ ನಡುವೆ ನೇರ ಸ್ಪರ್ಧೆ ಇರಲಿದ್ದು, ಜಮಖಂಡಿ ಮತದಾರರು ಯಾರಿಗೆ ಆಶೀರ್ವಾದ ಮಾಡುತ್ತಾರೆ ಎಂಬುದು ಇನ್ನೂ ಗುಟ್ಟಾಗಿಯೇ ಇದೆ.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X