ಔರಾದ್‌ | ರಸ್ತೆ ಬದಿ ಮುಳ್ಳು ಕಂಟಿ : ಸಂಚಾರಕ್ಕೆ ಗೋಳು

Date:

Advertisements

ಔರಾದ್‌ ತಾಲೂಕಿನ ಖಾನಾಪುರ ಗ್ರಾಮದಿಂದ ಗಡಿಕುಶನೂರ ಗ್ರಾಮಕ್ಕೆ ಹೋಗುವ ರಸ್ತೆಯ ಎರಡು ಬದಿಗಳಲ್ಲಿ ಜಾಲಿ ಮುಳ್ಳಿನ ಕಂಟಿಗಳು ಅಪಘಾತಕ್ಕೆ ಆಹ್ವಾನಿಸುವಂತೆ ತಲೆಯೆತ್ತರಕ್ಕೆ ಬೆಳೆದು ನಿಂತಿವೆ.

ರಸ್ತೆ ಬದಿಯ ಎರಡು ಕಡೆಗಳಲ್ಲಿ ಜಾಲಿ ಮುಳ್ಳಿನ ಟೊಂಗೆಗಳು ರಸ್ತೆಗೆ ಚಾಚಿಕೊಂಡಿವೆ. ಇದರಿಂದ ವಾಹನ ಸವಾರರು, ಕೂಲಿಕಾರ್ಮಿಕರು ಹಾಗೂ ಸಾರ್ವಜನಿಕರು ನಿತ್ಯ ಸಂಚರಿಸಲು ತೊಂದರೆಯಾಗುತ್ತಿದೆ. ಅದರಲ್ಲೂ ರಾತ್ರಿ ವೇಳೆ ಸಂಚರಿಸಲು ಭಯವಾಗುತ್ತಿದೆ. ಎದುರಿಗೆ ಬರುವ ವಾಹನಗಳಿಗೆ ಬೈಕ್ ಸವಾರರು ಬೈಪಾಸ್ ಆಗಬೇಕಾದರೆ ಜಾಲಿ ಮುಳ್ಳು ಮೈಗೆ ಚುಚ್ಚುತ್ತಿವೆʼ ಎಂದು ಸ್ಥಳೀಯರು ದೂರಿದ್ದಾರೆ.

ʼಈ ರಸ್ತೆ ಮಧ್ಯ ಅಲ್ಲಲ್ಲಿ ಗುಂಡಿಗಳು ತೇಲಿದ್ದು ಮಳೆಗಾಲದಲ್ಲಿ ಓಡಾಡಲು ಸಮಸ್ಯೆಯಾಗುತ್ತಿದೆ. ರಸ್ತೆಯುದ್ದಕ್ಕೂ ಯಾವುದೇ ನಾಮ ಫಲಕ ಹಾಕದ ಕಾರಣ ಅಪರಿಚಿತ ವಾಹನ ಸವಾರರಿಗೆ ದಿಕ್ಕುದೋಚದಂತಾಗಿದೆ. ಖಾನಾಪೂರ ಕ್ರಾಸ್ ಬಳಿ ಎರಡು ಕಡೆ ನಾಮಪಲಕ ಅಳವಡಿಸಲು ಕ್ರಮ ಕೈಗೊಳ್ಳಬೇಕು ಖಾನಾಪೂರ-ಗಡಿಕುಶನೂರ ಗ್ರಾಮಗಳ ನಡುವೆ ಬ್ರಿಡ್ಜ್ ಕಂ ಬ್ಯಾರೇಜ್ ಸೇತುವೆ ಶಿಥಿಲಗೊಂಡು ಕಬ್ಬಿಣದ ಸರಳು ತೇಲಿವೆ. ಇದರಿಂದ ಪ್ರಯಾಣಿಕರು ಆತಂಕದಲ್ಲೇ ಸಂಚಾರ ಮಾಡುವಂತಾಗಿದೆʼ ಎಂದು ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಸರ್ಕಾರಿ ಸೌಲಭ್ಯದಿಂದ ವಂಚಿತರಾಗಿರುವ ವೃದ್ಧ ಮಹಿಳೆ: ಕಣ್ಣು ಹಾಯಿಸುವರೇ ಅಧಿಕಾರಿಗಳು?

ಕೂಡಲೇ ಸಂಬಂಧಪಟ್ಟ ಇಲಾಖಾಧಿಕಾರಿಗಳು ರಸ್ತೆ ಬದಿ ಬೆಳೆದ ಅನಗತ್ಯ ಜಾಲಿ ಮುಳ್ಳು ಕಂಟಿಗಳನ್ನು ತೆರವುಗೊಳಿಸಿ ರಸ್ತೆ ಗುಂಡಿ ಮುಚ್ಚಬೇಕು. ರಸ್ತೆಯಲ್ಲಿ ಸಂಚಾರಿ ನಿಯಮದ ನಾಮಫಲಕ ಅಳಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಮುಂದಾಗಬೇಕುʼ ಎಂದು ಖಾನಾಪುರ ನಿವಾಸಿ ಸಿದ್ದು ಸ್ವಾಮಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X