ಒಂದು ದೇಶ-ಒಂದು ಚುನಾವಣೆ | ಒಕ್ಕೂಟ ವ್ಯವಸ್ಥೆ ಬಗ್ಗೆ ಕೇಂದ್ರಕ್ಕೆ ಅರಿವಿಲ್ಲ: ಸಚಿವ ಮಹದೇವಪ್ಪ ಕಿಡಿ

Date:

Advertisements

ನಮ್ಮ ದೇಶದಲ್ಲಿರುವುದು ಒಕ್ಕೂಟ ವ್ಯವಸ್ಥೆ ಎಂಬ ಸಂಗತಿಯನ್ನು ಸಂಪೂರ್ಣವಾಗಿ ಮರೆತಿರುವ ಕೇಂದ್ರ ಸರ್ಕಾರವು ಒಂದು ದೇಶ-ಒಂದು ಚುನಾವಣೆ ಮಾಡಲು ಹೊರಟಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಚಿವ ಡಾ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, “ಆಡಳಿತಾತ್ಮಕವಾಗಿ ಎಲ್ಲ ವಿಧದಲ್ಲೂ ವೈಫಲ್ಯ ಹೊಂದಿರುವ ಕೇಂದ್ರ ಸರ್ಕಾರ, ಕಳೆದ ಹತ್ತು ವರ್ಷಗಳಿಂದಲೂ ಚುನಾವಣೆಗಳನ್ನು ಮಾಡುವುದರಲ್ಲಿ ಮತ್ತು ಕೋಮು ದ್ವೇಷದ ಮೂಲಕ ದೇಶದ ಆಂತರಿಕ ವ್ಯವಸ್ಥೆಯನ್ನು ಅಸ್ಥಿರಗೊಳಿಸುವುದರಲ್ಲಿ ತೋರಿಸುವ ಆಸಕ್ತಿಯನ್ನು, ಬೇರಾವ ಒಳ್ಳೆಯ ವಿಷಯದಲ್ಲಿ ತೋರಿಸಿಲ್ಲ” ಎಂದು ಟೀಕಿಸಿದ್ದಾರೆ.

“ನೆಲ ಜಲ ಮತ್ತು ಭಾಷೆಯ ವಿಷಯದಲ್ಲಿ ಸಾಕಷ್ಟು ವೈವಿಧ್ಯಮಯ ಸನ್ನಿವೇಶವನ್ನು ಹೊಂದಿರುವ ರಾಜ್ಯಗಳು ಭಾಷಾವಾರು ಪ್ರಾಂತ್ಯಗಳಾಗಿ ವಿಂಗಡನೆ ಆದ ಮೇಲೆ ಒಕ್ಕೂಟ ವ್ಯವಸ್ಥೆಯ ಭಾಗವಾಗಿ ತಮ್ಮದೇ ಆದ ಕೆಲವೊಂದು ಅಧಿಕಾರವನ್ನು ಪಡೆದಿವೆ. ಹೀಗಿರುವ ರಾಜ್ಯಗಳಿಗೆ ಇರುವಂತಹ ಚುನಾವಣಾ ವ್ಯಾಪ್ತಿಯನ್ನು ಬದಲಿಸುವಂತಹ ಕೆಲಸ ಮಾಡುತ್ತಿರುವ ಕೇಂದ್ರ ಸರ್ಕಾರ ರಾಜ್ಯದ ಅಸ್ತಿತ್ವವನ್ನು ವಿಪರೀತವಾಗಿ ಅವಮಾನಿಸುತ್ತಿದೆ” ಎಂದು ಹರಿಹಾಯ್ದಿದ್ದಾರೆ.

Advertisements

“ಚುನಾವಣಾ ವ್ಯವಸ್ಥೆಯಲ್ಲಿ ಅಕ್ರಮಗಳು ನಿಲ್ಲಬೇಕಾದರೆ, ಆಯಾ ರಾಜ್ಯಗಳೇ ಚುನಾವಣಾ ವ್ಯವಸ್ಥೆ ನಡೆಯಲು ಹಣಕಾಸನ್ನು ಒದಗಿಸಬೇಕು. ಆಗ ಮಾತ್ರ ಚುನಾವಣಾ ವ್ಯವಸ್ಥೆಯಲ್ಲಿ ಅಗತ್ಯ ಬದಲಾವಣೆ ತರಬಹುದು. ಈ ದಿಸೆಯಲ್ಲಿ ಕೇಂದ್ರ ಸರ್ಕಾರ ಯೋಚಿಸಬೇಕೇ ವಿನಃ ಒಂದು ದೇಶ-ಒಂದು ಚುನಾವಣೆ ಅಲ್ಲ” ಎಂದಿದ್ದಾರೆ.

“ಮುಖ್ಯವಾಗಿ ನೋಡುವುದಾದರೆ ಕಳೆದ ಬಾರಿ ಸೋಲುವ ಭಯದಿಂದ ಲೋಕಸಭೆ ಚುನಾವಣೆಯನ್ನೇ ಏಳು ಹಂತದಲ್ಲಿ ನಡೆಸಿದ ಇವರು, ಜಮ್ಮು ಮತ್ತು ಕಾಶ್ಮೀರ ಚುನಾವಣೆಯನ್ನು ಒಟ್ಟಾಗಿ ನಡೆಸಿದರೆ ಎಲ್ಲಿ ಅದರ ಮೇಲಿನ ನಿಯಂತ್ರಣ ಕೈತಪ್ಪುವುದೋ ಎಂದು ಹೆದರಿ ಪ್ರತ್ಯೇಕವಾಗಿ ಈ ರಾಜ್ಯಗಳ ಚುನಾವಣೆ ನಡೆಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಒಂದು ದೇಶ-ಒಂದು ಚುನಾವಣೆ ಎನ್ನುವುದು ಒಂದು ಹಾಸ್ಯಾಸ್ಪದ ಸಂಗತಿಯಾಗಿದ್ದು, ಸ್ಪಷ್ಟತೆ ಇಲ್ಲದ ಮತ್ತು ರಾಜ್ಯ ವಿರೋಧಿ ಆಗಿರುವ ಇವರ ಧೋರಣೆಯ ಬಗ್ಗೆ ದೇಶದ ವಿಪಕ್ಷಗಳು ಗಂಭೀರವಾಗಿ ಹೋರಾಟ ಮಾಡುವಂತಾಗಬೇಕು ಮತ್ತು ರಾಜ್ಯ ನಿಧಿ ಮೂಲಕ ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಎಲ್ಲರೂ ಒತ್ತಾಯಿಸಬೇಕು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X