ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಡಗಿರುವ ಜಾನಪದ ಕಲೆಗಳನ್ನು ಕಾರ್ಯಕ್ರಮಗಳಲ್ಲಿ ವ್ಯಕ್ತಪಡಿಸುವುದರಿಂದ ನಮ್ಮ ಸಂಸ್ಕೃತಿಯನ್ನು ಜೀವಂತವಾಗಿಡಲು ಸಹಕಾರಿಯಾಗುತ್ತದೆ ಎಂದು ಅಭ್ಯುದಯ ಇಂಟರ್‌ನ್ಯಾಶನಲ್ ಶಾಲೆಯ ನಿರ್ದೇಶಕ ರವಿ ಜಗಲಿ ಹೇಳಿದರು.
ಮುದ್ದೇಬಿಹಾಳ ತಾಲೂಕಿನ ಕೋಳೂರು ಅಭ್ಯುದಯ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ತಂಗಡಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ ನಡೆಯಿತು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಡಗಿರುವ ಜಾನಪದ ಕಲೆಗಳನ್ನು ಇಂತಹ ಕಾರ್ಯಕ್ರಮಗಳಲ್ಲಿ ವ್ಯಕ್ತಪಡಿಸುವ ಮೂಲಕ ನಮ್ಮ ಸಂಸ್ಕೃತಿಯನ್ನು ಜೀವಂತವಾಗಿಡಲು ಸಹಕಾರಿಯಾಗುತ್ತದೆ. ಸರ್ಕಾರ ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ಒದಗಿಸುವ ಕಾರ್ಯ ಮಾಡಬೇಕು ಎಂದು ರವಿ ಜಗಲಿ ತಿಳಿಸಿದರು.
ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಅವರಲ್ಲಿ ಹುದುಗಿರುವ ಕಲೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಪೂರಕವಾದ ವೇದಿಕೆ ಒದಗಿಸುತ್ತದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ.ಧರಿಕಾರ ಹೇಳಿದರು.
ಇದನ್ನು ಓದಿದ್ದೀರಾ? ವಿಜಯಪುರ | ಖಾಸಗಿ ಶಾಲಾ ಬಸ್ ಚಾಲಕರ ಲೈಸೆನ್ಸ್, ಅನುಭವ ಪರಿಶೀಲಿಸಲು ಕರವೇ ಒತ್ತಾಯ
ಬಿ.ಎಚ್.ಮುದ್ನೂರ, ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎಸ್.ತುರಡಗಿ, ಸಿ.ಆರ್.ಸಿ ಎಂ.ಡಿ.ಅಮರವಾಡಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯ ರಮೇಶ ಇಂಗಳಗಿ, ಅಭ್ಯುದಯ ಶಾಲೆಯ ಮುಖ್ಯಗುರು ಆರ್.ಎಂ.ಹರನಾಳ, ಸಂಗಮೇಶ ಹೂಗಾರ, ರವಿ ಗೌಡರ ಸೇರಿದಂತೆ ತಂಗಡಗಿ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಮುಖ್ಯಗುರುಗಳು ಉಪಸ್ಥಿತರಿದ್ದರು.