ಅತ್ಯಾಚಾರ ಆರೋಪಿಯೊಬ್ಬ ಜಾಮೀನು ಪಡೆದ ಜೈಲಿನಿಂದ ಹೊರಬಂದು ಸಂತ್ರಸ್ತೆಯನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದಿದೆ. ಅತ್ಯಾಚಾರ ಆರೋಪಿ ಮತ್ತು ಇನ್ನೋರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘‘ಪ್ರಮುಖ ಆರೋಪಿ ರಿಂಕು (20), ಇದೇ ವರ್ಷದ ಫೆಬ್ರವರಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಆತನನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದರು. ಇತ್ತೀಚೆಗೆ ಆತ ಜಾಮೀನು ಪಡೆದ ಹೊರಬಂದಿದ್ದ. ಆರೋಪಿ ತನ್ನ ಸ್ನೇಹಿತನೊಂದಿಗೆ ಜೊತೆಗೂಡಿ ಸೆ.18ರ ರಾತ್ರಿ ಕೈಲಾದೇವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಸಂಭಾಲ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ್ ಚಂದ್ರ ತಿಳಿಸಿದ್ದಾರೆ.
ಸಂತ್ರಸ್ತೆಯ ಕುಟುಂಬದವರು ನೀಡಿದ ದೂರಿನ ಪ್ರಕಾರ, ಅಪ್ರಾಪ್ತ ಬಾಲಕಿ ತನ್ನ ಸಹೋದರ ಮತ್ತು ತಾಯಿಯೊಂದಿಗೆ ದ್ವಿಚಕ್ರವಾಹನದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಆರೋಪಿಗಳು ಬೈಕ್‌ಅನ್ನು ರಸ್ತೆ ಮಧ್ಯೆದಲ್ಲಿ ಅಡ್ಡಗಟ್ಟಿದ್ದಾರೆ. ಬಾಲಕಿಯ ಮೇಲೆ ಗುಂಡು ಹಾರಿಸಿದ್ದಾರೆ.