ಬಿಬಿಎಂಪಿ | ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ ಕಾರ್ಯಕ್ಕೆ ಚಾಲನೆ

Date:

Advertisements

ಬಿಬಿಎಂಪಿ ವ್ಯಾಪ್ತಿಯಲ್ಲಿ ಪಶ್ಚಿಮ ವಲಯದ ಮತ್ತಿಕೆರೆ ಮತ್ತು ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದರು.

ನಗರದ ಪಶ್ಚಿಮ ವಲಯದ ಮತ್ತಿಕೆರೆ ಹಾಗೂ ಮಲ್ಲೇಶ್ವರಂ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅನ್ನು ಪ್ರಾಯೋಗಿಕವಾಗಿ ಅಳವಡಿಸಲಾಗುತ್ತಿದ್ದು, ಮೈಕ್ರೋ ಚಿಪ್ ತಂತ್ರಜ್ಞಾನದಿಂದ ನಾಯಿಯ ವಾಸಸ್ಥಳ, ಲಸಿಕೆ ನೀಡಿದ ದಿನಾಂಕ, ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ ದಿನಾಂಕ ಹಾಗೂ ಇನ್ನಿತರ ಅಂಶಗಳನ್ನು ಶಾಶ್ವತವಾಗಿ ಅದರಲ್ಲಿ ಶೇಖರೀಡಿಸಬಹುದಾಗಿರುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಮೈಕ್ರೋ ಚಿಪ್ ತಂತ್ರಜ್ಞಾನವನ್ನು ಈಗಾಗಲೇ ಹಲವಾರು ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳಿಗೆ ಅಳವಡಿಸಿಕೊಂಡಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ BIZ ORBIT ಎಂಬ ಸಂಸ್ಥೆಯ ಸಹಯೋಗದೊಂದಿಗೆ ಪ್ರಾಯೋಗಿಕವಾಗಿ ಬೀದಿ ನಾಯಿಗಳಿಗೆ ಅಳವಡಿಕೆ ಮಾಡಲಾಗುತ್ತಿದೆ.

Advertisements

ಅಕ್ಕಿಕಾಳು ಗಾತ್ರದ ಮೈಕ್ರೋ ಚಿಪ್ ಅಳವಡಿಕೆ

ಮೈಕ್ರೋಚಿಪ್ ಒಂದು ಅಕ್ಕಿಕಾಳು ಗಾತ್ರದ ಸಾಧನವಾಗಿದ್ದು, ಪ್ರಾಣಿಗಳಲ್ಲಿ ಶಾಶ್ವತ ಗುರುತಿನ ವಿಧಾನವಾಗಿರುತ್ತದೆ. ಇದನ್ನು ಪ್ರಾಣಿಗಳ ಚರ್ಮದ ಕೆಳಗೆ ಇಂಜೆಕ್ಷನ್ ಮೂಲಕ ಇರಿಸಲಾಗುವುದು. ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಬೀರುವುದಿಲ್ಲ ಮತ್ತು ಇದು ಪ್ರಾಣಿಗಳ ಜೀವನ ಪರ್ಯಂತ ಶಾಶ್ವತ ಗುರುತಾಗಿ ಬಳಸಬಹುದಾಗಿರುತ್ತದೆ. ಇದು ಪ್ರಪಂಚದಾದ್ಯಂತ ಬಳಸಲಾಗುವ ಯೂನಿಕ್ ಸಂಖ್ಯೆಯಾಗಿರುತ್ತದೆ.

ಈ ಸುದ್ದಿ ಓದಿದ್ದೀರಾ? ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಂದ ಮತ್ತೊಂದು ಅಸಹ್ಯಕರ ಹೇಳಿಕೆ: ವ್ಯಾಪಕ ಖಂಡನೆ

ಯಶಸ್ವಿಯಾದರೆ ಇರತೆ ವಲಯಗಳಲ್ಲೂ ಅಳವಡಿಕೆ

ಪ್ರಾಯೋಗಿಕ ಮೈಕ್ರೋ ಚಿಪ್ ಅಳವಡಿಸುವ ಕಾರ್ಯ ಯಶಸ್ವಿಯಾದರೆ, ಅದನ್ನು ಪಾಲಿಕೆಯ ಎಲ್ಲಾ ವಲಯಗಳಲ್ಲಿಯೂ ಬೀದಿ ನಾಯಿಗಳಿಗೆ ಅಳವಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪಾಲಿಕೆ ವತಿಯಿಂದ ಬೀದಿ ನಾಯಿಗಳಿಗೆ ಸಂಯೋಜಿತ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಿದ್ದು, ಮೈಕ್ರೋ ಚಿಪ್ ಅಳವಡಿಸುವ ತಂತ್ರಜ್ಞಾನದಿಂದ ಬೀದಿ ನಾಯಿಗಳಿಗೆ ಮತ್ತೆ-ಮತ್ತೆ ಲಿಸಿಕೆ ಹಾಕುವುದನ್ನು ತಡೆಯಬಹುದಾಗಿರುತ್ತದೆ.

ಪ್ರಸ್ತುತ ಬಣ್ಣ ಬಳಸಿ ಗುರುತಿಸಲಾಗುತ್ತಿದೆ

ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಲಸಿಕೆ ಹಾಕಿದ ಬೀದಿನಾಯಿಗಳಿಗೆ ಬಣ್ಣವನ್ನು ಬಳಸಿ ಗುರುತಿಸಲಾಗುತ್ತಿದ್ದು, ಒಂದು ವಾರ ಮಾತ್ರ ಬಣ್ಣದ ಗುರುತು ಪತ್ತೆಹಚ್ಚಬಹುದಾಗಿರುತ್ತದೆ. ಆದುದರಿಂದ ಬೀದಿನಾಯಿಗಳಿಗೆ ಪದೇ ಪದೇ ಲಸಿಕೆ ಹಾಕುವ ಸಾಧ್ಯತೆಯಿರುತ್ತದೆ. ಮೈಕ್ರೋ ಚಿಪ್ ತಂತ್ರಜ್ಞಾನದಿಂದ ಈ ನ್ಯೂನತೆಯನ್ನು ಸರಿಪಡಿಸಬಹುದಾಗಿರುತ್ತದೆ ಹಾಗು ನಾಯಿಗಳಲ್ಲಿ ಲಸಿಕೆ ಹಾಕಿರುವ ಮಾಹಿತಿಯನ್ನು ನಿಖರವಾಗಿ ತಿಳಿಯಬಹುದಾಗಿರುತ್ತದೆ.

ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅಳವಡಿಸುವ ಕಾರ್ಯದಿಂದ, ಬೀದಿ ನಾಯಿಗಳ ನಿಖರವಾದ ಮಾಹಿತಿಯನ್ನು ಪಡೆಯಬಹುದಾಗಿದೆ. ಅಲ್ಲದೆ ಬೀದಿ ನಾಯಿಗಳಿಗೆ ಮತ್ತೆ-ಮತ್ತೆ ಲಸಿಕೆ ಹಾಕುವುದನ್ನು ತಡೆಯಬಹುದಾಗಿರುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X