ಸಾಮಾಜಿಕ ಜಾಲತಾಣವನ್ನ ತನ್ನ ತಂತ್ರಕ್ಕೆ ತಕ್ಕಂತೆ ಬಳಸಿಕೊಂಡಿದ್ದ ಬಿಜೆಪಿ, ರಾಹುಲ್ ಗಾಂಧಿ ವರನ್ನು ಪಪ್ಪು ಮಾಡಿತ್ತು. 2014 ಮತ್ತು 2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯನ್ನ ಪಪ್ಪು ಎಂದೇ ಬಿಂಬಿಸಿ, ನಿರಾಯಾಸವಾಗಿ ಚುನಾವಣೆಗಳನ್ನು ಗೆದ್ದಿತ್ತು. ಆದರೆ, ಈಗ ದೇಶದಲ್ಲಿ ರಾಹುಲ್ ಗಾಂಧಿ ಅವರ ಪರ್ವ ಆರಂಭವಾಗಿದೆ. ಗೋಧಿ ಮೀಡಿಯಾಗಳಲ್ಲಿ ರಾಹುಲ್ ಗಾಂಧಿ ಅವರು ಕಾಣಸಿಗದಿದ್ದರೂ, ಇನ್ನಿತರ ಸಾಮಾಜಿಕ ಪ್ಲಾಟ್ ಫಾರಂಗಳಲ್ಲಿ ಅವರು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಹುಲ್‌ಗಿದ್ದ ಪಪ್ಪು ಎಂಬ ಹಣೆಪಟ್ಟಿ ಕಳಚಿಬಿದ್ದಿದೆ. ಅವರು ದೇಶದ ಬಲಿಷ್ಠ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ, ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಹುನ್ನಾರಗಳನ್ನು ಬಯಲು ಮಾಡುತ್ತಿದ್ದಾರೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ರಾಹುಲ್ ಗಾಂಧಿಯನ್ನ ಮುಗಿಸುವ ಸಂಚು..! | Rahul Gandhi
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: