ಆಮ್ ಆದ್ಮಿ ಪಕ್ಷದ ನಾಯಕಿ ಆತಿಶಿ ಮಾರ್ಲೇನಾ ದೆಹಲಿಯ 8ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ರಾಷ್ಟ್ರ ರಾಜಾಧಾನಿಯಲ್ಲಿ ಸಿಎಂ ಹುದ್ದೆ ಅಲಂಕರಿಸಿದ ಅತ್ಯಂತ ಕಿರಿಯ ವ್ಯಕ್ತಿ ಎನಿಸಿಕೊಂಡಿದ್ದಾರೆ.
ರಾಜಭವನದಲ್ಲಿ ಪ್ರಮಾಣ ವಚನ ಸಮಾರಂಭ ನಡೆದಿದ್ದು, ಐವರು ಶಾಸಕರು ಆತಿಶಿ ಜೊತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇದನ್ನು ಓದಿದ್ದೀರಾ? ದೆಹಲಿಯ ನೂತನ ಸಿಎಂ ಆತಿಶಿ ಮಾರ್ಲೆನಾ ಸಿಂಗ್ ಅವರ ಹಿಂದಿನ ಕುತೂಹಲಕಾರಿ ಕಥೆ
ಆತಿಶಿ ಜೊತೆ ಎಎಪಿ ನಾಯಕರಾದ ಸೌರಭ್ ಭಾರದ್ವಾಜ್, ಗೋಪಾಲ್ ರೈ, ಕೈಲಾಶ್ ಗೆಹ್ಲೋಟ್, ಇಮ್ರಾನ್ ಹುಸೇನ್, ಮುಕೇಶ್ ಅಹ್ಲಾವತ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬಿಜೆಪಿಯ ಸುಷ್ಮಾ ಸ್ವರಾಜ್ ಮತ್ತು ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ನಂತರ ಅತಿಶಿ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಿದ್ದಾರೆ. ಎಎಪಿ ನಾಯಕಿ ದೆಹಲಿಯ ಅತೀ ಕಿರಿಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನೂ ಪಡೆದಿದ್ದಾರೆ.
ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಅರವಿಂದ್ ಕೇಜ್ರಿವಾಲ್ ಅವರು ಜಾಮೀನು ಪಡೆದು ಹೊರ ಬಂದ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ಆ ಸ್ಥಾನವನ್ನು ಆತಿಶಿ ಅಲಂಕರಿಸಿದ್ದಾರೆ.
VIDEO | AAP leader Atishi (@AtishiAAP) takes oath as Delhi CM at LG House. pic.twitter.com/Y8Ty8gLquO
— Press Trust of India (@PTI_News) September 21, 2024
