ಬೀದರ | ಬಹಮನಿ ಕೋಟೆ ಮೇಲೆ ಲೋಹದ ಹಕ್ಕಿಗಳ ಚಿತ್ತಾರ : ಕಣ್ತುಂಬಿಕೊಂಡ ಜನ

Date:

Advertisements

ಬೀದರ್ ಭಾರತೀಯ ವಾಯುಪಡೆ‌ ತರಬೇತಿ ಕೇಂದ್ರಕ್ಕೆ ಸೇರಿದ ಒಂಬತ್ತು ಸೂರ್ಯಕಿರಣ ವಿಮಾನಗಳ ಏರೋಬ್ಯಾಟಿಕ್ ತಂಡದಿಂದ ಶನಿವಾರ ಬಹಮನಿ ಕೋಟೆ ಮೇಲೆ ಆಯೋಜಿಸಿದ ಏರ್ ಶೋ ನೋಡುಗರ ಕಣ್ಮನ ಸೆಳೆಯಿತು.

WhatsApp Image 2024 09 21 at 8.56.43 PM 1

ಸೂರ್ಯಕಿರಣ ವಿಮಾನಗಳ ಟೀಂ ಲೀಡರ್ ಗ್ರುಪ್ ಕ್ಯಾಪ್ಟನ್ ಗುರುಪ್ರಿತ್ ಸಿಂಗ್ ದಿಲ್ಲೋನ್ ನೇತೃತ್ವದಲ್ಲಿ ನಡೆದ ಏರ್ ಶೋ ಕಾರ್ಯಕ್ರಮದಲ್ಲಿ 9 ಸೂರ್ಯಕಿರಣ ವಿಮಾನಗಳು ವಿವಿಧ ರೀತಿಯಲ್ಲಿ ಆಕರ್ಷಕ ಪ್ರದರ್ಶನ ನೋಡುಗರನ್ನು ಮಂತ್ರಮುಗ್ದಗೊಳಿಸಿತು.

WhatsApp Image 2024 09 21 at 8.56.43 PM 1 1

ಬೀದರ್‌ ನಗರದ ಬಹಮನಿ ಕೋಟೆಯ ಮೇಲೆ ಲೋಹದ ಹಕ್ಕಿಗಳ ಚಿತ್ತಾರ ಕಂಡ ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಭ್ರಮಪಟ್ಟರು.

Advertisements

ಸೂರ್ಯಕಿರಣ ವಿಮಾನಗಳು ಆಕಾಶದಲ್ಲಿ ಮೇಲಿನಿಂದ ಕೆಳಗೆ. ಪರಸ್ಪರ ಮುಖಾಮುಖಿ ಕ್ರಾಸಿಂಗ್, ಬ್ಯಾರಲ್ ರೋಲ್ ಸೇರಿದಂತೆ ಕೇಸರಿ, ಬಿಳಿ, ಹಸಿರು ಬಣ್ಣ ಹಾಗೂ ವಿವಿಧ ವೈಮಾನಿಕ ಪ್ರದರ್ಶನ ನೋಡುಗರನ್ನು ಮೂಕವಿಸ್ಮಿತಗೊಳಿಸಿ ಆಕಾಶದಲ್ಲಿ ಚಿತ್ತಾರಗಳನ್ನು ಮೂಡಿಸಿದವು. ಬಾನಂಗಳದಲ್ಲಿ ವಿಮಾನಗಳು ಯಾವ ದಿಕ್ಕಿನಿಂದ ಹಾರುತ್ತಿವೆ ಎನ್ನುವುದನ್ನು ಜನರು ಕುತೂಹಲದಿಂದ ವೀಕ್ಷಿಸುತ್ತಿದ್ದರು.

WhatsApp Image 2024 09 21 at 8.56.43 PM 2

1996ರಲ್ಲಿ ಆರಂಭಿಸಲಾದ ಸೂರ್ಯಕಿರಣ ಏರೋಬ್ಯಾಟಿಕ್ ತಂಡದ ವಿಮಾನಗಳು ಇಲ್ಲಿಯವರೆಗೆ ಭಾರತ ಮಾತ್ರವಲ್ಲದೆ ಶ್ರೀಲಂಕಾ, ಸಿಂಗಾಪುರ್, ದುಬೈ ಸೇರಿದಂತೆ ಇತರೆ ದೇಶಗಳಲ್ಲಿ 600 ಕ್ಕಿಂತಲೂ ಹೆಚ್ಚಿನ ಪ್ರದರ್ಶನಗಳನ್ನು ನೀಡಿದೆ. 9 ವಿಮಾನಗಳ ಈ ಏರ್ ಕ್ರಾಪ್ಟ್ ತಂಡ ಹೊಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನಲ್ಲಿ ಯುವತಿಯ ಬರ್ಬರ ಹತ್ಯೆ: ದೇಹ ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ಕೊಲೆಗಾರ

ಏರ್ ಶೋ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷ ಮೋಹ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ವಾಯುಪಡೆ ತರಬೇತಿ ಕೇಂದ್ರದ ಕಮೊಡೋರ್ ಪರಾಗಲಾಲ್, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಕುಟುಂಬ ಸಮೇತವಾಗಿ ಆಗಮಿಸಿ ವೀಕ್ಷಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X