ಬೆಂಗಳೂರು | ಒಳಮೀಸಲಾತಿ ಜಾರಿ : ಒಳ ಜಾತಿಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಲು ಹಂದಿಜೋಗೀಸ್ ಸಂಘ ಆಗ್ರಹ

Date:

Advertisements

ಒಳಮೀಸಲಾತಿ ಹಂಚಿಕೆ ಮಾಡುವಾಗ ಹೆಚ್ಚು ಹಿಂದುಳಿದ ಪರಿಶಿಷ್ಟ ಜಾತಿಯ ಒಳ ಜಾತಿಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಬೇಕು ಎಂದು ಹೈಕೋರ್ಟ್ ವಕೀಲ ಹೆಚ್.ವಿ.ಮಂಜುನಾಥ್ ತಿಳಿಸಿದರು.

ಬೆಂಗಳೂರಿನ ಕಾನಿಷ್ಕ ಹೋಟೆಲ್ ನಲ್ಲಿ ಅಖಿಲ ಕರ್ನಾಟಕ ಹಂದಿಜೋಗಿಸ್ ಸಂಘ ದಿಂದ ಆಯೋಜಿಸಿದ್ದ ಒಳಮೀಸಲಾತಿ ಚರ್ಚೆಯ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಜಾತಿಗೆ ಪ್ರಾತಿನಿಧ್ಯದ ಕೊರತೆ ಇದ್ದಲ್ಲಿ ಆ ಸಮುದಾಯ ಹಿಂದುಳಿದಿದೆ ಎಂದರ್ಥ, ಪರಿಶಿಷ್ಟ ಜಾತಿಯ ಒಳಗೇ ಅತಿ ಹಿಂದುಳಿದ ಜಾತಿಗಳಿಗೆ ಒಳಮೀಸಲಾತಿ ಜಾರಿಯಾದಲ್ಲಿ ಅತಿ ಹಿಂದುಳಿದ ಪರಿಶಿಷ್ಟ ಜಾತಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಮೀಸಲಾತಿಯು ಪರಿಶಿಷ್ಟ ಜಾತಿಗಳಿಗೆ ಸಾಮಾಜಿಕವಾಗಿ ನ್ಯಾಯ ದೊರಕಿಸಬೇಕೆಂಬುದಾಗಿದ್ದು, ಪರಿಶಿಷ್ಟ ಜಾತಿಯಲ್ಲೇ ಅತಿ ಹಿಂದುಳಿದಿರುವ ಜಾತಿಗಳಿಗೆ ನ್ಯಾಯ ಒದಗಿಸಬೇಕಾಗಿರುವುದರಿಂದ ಒಳಮೀಸಲಾತಿ ಜಾರಿ ಅಗತ್ಯವಿದ್ದು, ರಾಜ್ಯ ಸರ್ಕಾರಗಳೇ ಒಳಮೀಸಲಾತಿ ಕಲ್ಪಿಸುವ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ಬಂದಿದ್ದು, ಒಳಮೀಸಲಾತಿಗೆ ಜಾರಿಗಿದ್ದ ಅಡ್ಡಿ ಆತಂಕಗಳು ದೂರವಾಗಿವೆ ಎಂದು ಹೇಳಿದರು.

Advertisements

ಒಳಮೀಸಲಾತಿ ಜಾರಿ ಸಂದರ್ಭದಲ್ಲಿ ಜಾರಿ ಮಾಡಲು ಪರಿಶಿಷ್ಟ ಜಾತಿಯ ಸಮೀಕ್ಷೆಗೆ ಸರ್ಕಾರ ಸೂಚಿಸಿದಲ್ಲಿ ಜಾತಿಯ ಜನಸಂಖ್ಯೆಯ ಆಧಾರದ ಮೇಲೆ ಒಳ ಮೀಸಲಾತಿಯನ್ನು ವರ್ಗೀಕರಣ ಮಾಡುವುದರಿಂದ ಹಂದಿಜೋಗಿ ಜನಾಂಗದವರು ತಮ್ಮ ಜಾತಿಯನ್ನು ಹಂದಿಜೋಗಿ ಎಂದು ಬರೆಸಿದಾಗ ಜಾತಿಯ ನಿಖರ ಸಂಖ್ಯೆ ಗೊತ್ತಾಗಲಿದ್ದು, ಒಳಮೀಸಲಾತಿ ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ನಮ್ಮ ಪಾಲಿನ ಒಳಮೀಸಲಾತಿ ಪಡೆಯಲು ನಾವೆ ಹೋರಾಟ ನಡೆಸಬೇಕು, ಅರಿವು ಮೂಡಿಸುವ ಅಗತ್ಯವಿದ್ದು, ಹಂದಿಜೋಗಿ ಜನಾಂಗವು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿ ತೀವ್ರ ಹಿಂದುಳಿದಿದೆ ಈ ಹಿನ್ನೆಲೆಯಲ್ಲಿ ಜನಾಂಗದ ಜನಸಂಖ್ಯೆ ಯ ಅಂಕಿ ಅಂಶಗಳ ಆಧಾರದ ಮೇಲೆ ಒಳಮೀಸಲಾತಿ ವರ್ಗೀಕರಣ ವಾಗುತ್ತದೆ ಎಂದು ಹೇಳಿದರು.

ಒಳಮೀಸಲಾತಿ ಜಾರಿಗೆ ನಡೆಯುವ ಗಣತಿ ಸಂದರ್ಭದಲ್ಲಿ ಹಂದಿಜೋಗಿ ಸಮಾಜದವರು ತಪ್ಪದೇ ಹಂದಿಜೋಗಿ ಎಂದು ಜಾತಿ ಕಾಲಂನಲ್ಲಿ ಬರೆಸಬೇಕೆಂದು ತಿಳಿಸಿದರು.

ಇತ್ತೀಚೆಗೆ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುವ ಹೆಚ್ಚಿದ್ದು, ಸರ್ಕಾರವು ಜಾತಿ ಪ್ರಮಾಣ ನೀಡುವವರಿಗೆ ಸರ್ಕಾರ ತರಬೇತಿ ನೀಡುವುದು ಅಗತ್ಯವಿದೆ, ಆಗ ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ತಡೆಗಟ್ಟಲು ಸಾಧ್ಯ ಎಂದು ಹೇಳಿದರು.

ಸಭೆಯಲ್ಲಿ ಅಖಿಲ ಕರ್ನಾಟಕ ಹಂದಿಜೋಗಿಸ್ ಸಂಘದ ಅಧ್ಯಕ್ಷ ರಾಜೇಂದ್ರಕುಮಾರ್, ಕಾರ್ಯದರ್ಶಿ ಮಂಡ್ಯ ರಾಜು, ಜನಾಂಗದ ಮುಖಂಡರಾದ ಎಂ.ವಿ.ಗೋವಿಂದರಾಜು, ಪಿಳ್ಳಣ್ಣ, ಯಲ್ಲಪ್ಪ, ಶಿಕ್ಷಕ ಯಲ್ಲಯ್ಯ, ಜನಾಂಗದ ಮುಖಂಡ ಎಂ.ವಿ.ಗೋವಿಂದರಾಜು, ಪಿಳ್ಳಣ್ಣ, ಯಲ್ಲಪ್ಪ, ಶಿಕ್ಷಕ ಯಲ್ಲಯ್ಯ ಇನ್ನಿತರರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X