ಎಸಿಎಫ್‌ ನೇಮಕಾತಿ; ಸಂದರ್ಶನ ಸಮಿತಿಗೆ ಕೆಪಿಎಸ್‌ಸಿ ನಕಾರ

Date:

Advertisements
  • ಸಂದರ್ಶನ ಸಮಿತಿ ರಚನೆಯಲ್ಲಿ ಬದಲಾವಣೆಯಿಲ್ಲ ಎಂದ ಕೆಪಿಎಸ್‌ಸಿ
  • ಕೆಪಿಎಸ್‌ಸಿ ಅಧಿಕಾರಿಗಳ ನಡುವೆ ಮುಸುಕಿನ ಗುದ್ದಾಟ

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್‌) ಖಾಲಿ ಹುದ್ದೆ ನೇಮಕಾತಿಗೆ ಸಂದರ್ಶನ ಸಮಿತಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷರು ಮತ್ತು ಸದಸ್ಯರು ಇರಬೇಕೆಂದು ಸರ್ಕಾರ ನಿರ್ದೇಶಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೆಪಿಎಸ್‌ಸಿ ಅಧಿಕಾರಿಗಳು, ‘ಏಕಾಏಕಿ ಬಂದಿರುವ ಆದೇಶ ಪಾಲನೆ ಮಾಡಲಾಗುವುದಿಲ್ಲ’ ಎಂದು ತಳ್ಳಿಹಾಕಿದ್ದಾರೆ. ಅಧಿಕಾರಿಗಳ ನಡೆ ಸಮಂಜಸವಲ್ಲವೆಂದು ಕರ್ನಾಟಕ ಸ್ಟೇಟ್ ಕಾಂಪಿಟೇಟಿವ್ ಎಕ್ಸಾಮಿನೇಷನ್ ಆಸ್ಪಿರೆಂಟ್ಸ್ ಅಸೋಸಿಯೇಷನ್ ಆಕ್ರೋಶ ವ್ಯಕ್ತಪಡಿಸಿದೆ.

ನಾಲ್ಕು ಜನರನ್ನೊಳಗೊಂಡ ಸಮಿತಿಯಲ್ಲಿ ಕೆಪಿಎಸ್‌ಸಿ ಅಧ್ಯಕ್ಷರು ಮತ್ತು ಸದಸ್ಯರು ಇರಬೇಕೆನ್ನುವುದು ರಾಜ್ಯ ಸರ್ಕಾರದ ನಿರ್ದೇಶನ. ಆದರೆ, ಸರ್ಕಾರ ಮುಂಚಿತವಾಗಿ ಮಾಹಿತಿ ನೀಡದೆ ಏಕಾಏಕಿ ವಿಷಯದ ಕುರಿತು ನಿರ್ಧರಿಸುವುದು ಗೊಂದಲಕ್ಕೀಡು ಮಾಡಿದೆ ಎಂದು ಅಧಿಕಾರಿಗಳು ನಿರ್ಲಕ್ಷ್ಯ ಸ್ವಭಾವ ವ್ಯಕ್ತಪಡಿಸಿದ್ದಾರೆ.

“ಸದ್ಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪೂರ್ವಭಾವಿ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಗಳು ನಡೆದಿರುವುದರಿಂದ ಈ ಹಂತದಲ್ಲಿ ಸಂದರ್ಶನ ಸಮಿತಿ ರಚನೆಯಲ್ಲಿ ಬದಲಾವಣೆ ಮಾಡುವುದಕ್ಕೆ ಸಾಧ್ಯವಿಲ್ಲ” ಎಂದು ಕೆಪಿಎಸ್‌ಸಿ ಸರ್ಕಾರದ ಆದೇಶ ತಳ್ಳಿಹಾಕಿದೆ.  

Advertisements

ಈ ಸುದ್ದಿ ಓದಿದ್ದೀರಾ?: ಬೋಧನಾ ಕೌಶಲ್ಯ ಕಾರ್ಯಗಾರ; ಕಣಜ ಯುವ ಸಂಶೋಧನಾ ಕೇಂದ್ರದಿಂದ ಅರ್ಜಿ ಆಹ್ವಾನ

ಈ ಹಿಂದೆ ಪಿಡಬ್ಲ್ಯೂಡಿಯ ಸಹಾಯಕ ಅಭಿಯಂತರ ಹುದ್ದೆಗೆ ಸಂದರ್ಶನ ಸಮಿತಿಯ ರಚನೆಯಲ್ಲಿ ಬದಲಾವಣೆ ತರಲಾಗಿತ್ತು. ಇದರಿಂದ ನೂರಾರು ಅಭ್ಯರ್ಥಿಗಳಿಗೆ ಪಾರದರ್ಶಕವಾಗಿ ಯಾವುದೇ ಸಮಸ್ಯೆಗಳಿಲ್ಲದೆ ಹುದ್ದೆ ಪಡೆಯಲು ಅನುಕೂಲವಾಗಿತ್ತು.  

ಇಂತಹ ಒಳ್ಳೆಯ ಬದಲಾವಣೆಯನ್ನು ಕೆಪಿಎಸ್‌ಸಿ ಅಧ್ಯಕ್ಷರು ಹಾಗೂ ಸದಸ್ಯರು ತಳ್ಳಿಹಾಕಿರುವುದು ಶೋಭೆಯಲ್ಲ ಎಂದು ಅಭ್ಯರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಎಸ್‌ಸಿಯ ಸದಸ್ಯರು, ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ನಡುವಿನ ಮುಸುಕಿನ ಗುದ್ದಾಟದಿಂದ ಸ್ಪರ್ಧಾಕಾಂಕ್ಷಿಗಳು ಈಗಾಗಲೇ ಸಾಕಷ್ಟು ಬೇಸತ್ತಿದ್ದಾರೆ ಎಂದು ಹೇಳಲಾಗಿದೆ.

ಕಾರ್ಯದರ್ಶಿಗಳು ಕೈಗೊಳ್ಳುವ ಪ್ರತಿಯೊಂದು ಕೆಲಸ ಸ್ಪರ್ಧಾರ್ಥಿಗಳಿಗೆ ಅನುಕೂಲವಾಗಿರುತ್ತದೆ ಹಾಗೂ ಪಾರದರ್ಶಕತೆ ಇರುತ್ತದೆ. ಆದರೆ, ಇದಕ್ಕೆ ವಿರುದ್ಧವಾಗಿ ಕೆಪಿಎಸ್‌ಸಿ ಸದಸ್ಯರು ಮತ್ತು ಅಧ್ಯಕ್ಷರು ಕಾರ್ಯದರ್ಶಿಗಳ ನಡೆಗೆ ಸುಖಾ ಸುಮ್ಮನೆ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸ್ಪರ್ಧಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.ಇವುಗಳನ್ನೆಲ್ಲ ತ್ವರಿತವಾಗಿ ಸರಿಪಡಿಸಬೇಕೆಂದು ಕರ್ನಾಟಕ ಸ್ಟೇಟ್ ಕಾಂಪಿಟೇಟಿವ್ ಎಕ್ಸಾಮಿನೇಷನ್ ಆಸ್ಪಿರೆಂಟ್ಸ್ ಅಸೋಸಿಯೇಷನ್ ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

Download Eedina App Android / iOS

X