ಎಚ್ಐವಿ ತಡೆಗೆ 2 ಡೋಸ್ ಲಸಿಕೆ ಅಭಿವೃದ್ಧಿ: ಎಂಐಟಿ ವಿಜ್ಞಾನಿಗಳಿಂದ ಸಂಶೋಧನೆ

Date:

Advertisements

ಎಚ್ಐವಿ ತಡೆಗಟ್ಟಲು ಅಮೆರಿಕದ ಮೆಸ್ಸಾಚ್ಯೂಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ವಿಜ್ಞಾನಿಗಳು 2 ಡೋಸ್ ಲಸಿಕೆ ಅಭಿವೃದ್ಧಿ ಪಡಿಸಿದ್ದು, ಇದು ರೋಗಿಗಳ ಪ್ರತಿಕಾಯಗಳನ್ನು ವೃದ್ಧಿಸುತ್ತದೆ ಎಂದು ಎಂಐಟಿ ಸಂಸ್ಥೆ ಹೇಳಿದೆ. ಎಚ್ಐವಿಗೆ ಲಸಿಕೆ ಅಭಿವೃದ್ಧಿಪಡಿಸುವುದಕ್ಕೆ ಸಂಬಂಧಿಸಿದಂತೆ ಸಾಕಷ್ಟು ವರ್ಷಗಳಿಂದ ಶ್ರಮಿಸುತ್ತಿರುವ ಎಂಐಟಿ ಇದೀಗ 2 ಡೋಸ್‌ನ ಲಸಿಕೆ ತಯಾರಿ ಮಾಡಿರುವ ಮಾಹಿತಿ ನೀಡಿದೆ. 1 ವಾರದ ಅಂತರದಲ್ಲಿ ಈ 2 ಡೋಸ್‌ಗಳನ್ನು ನೀಡಲಾಗುತ್ತದೆ.

ಮೊದಲ ಡೋಸ್‌ನಲ್ಲಿ ಶೇ.20ರಷ್ಟು ಲಸಿಕೆ ನೀಡಿದರೆ, 2ನೇ ಡೋಸ್‌ನಲ್ಲಿ ಶೇ.80ರಷ್ಟು ಲಸಿಕೆ ನೀಡಲಾಗುತ್ತದೆ. ಇದು ಸೋಂಕಿತನ ದೇಹದಲ್ಲಿ ರೋಗದ ವಿರುದ್ಧ ಹೋರಾಡಲು ಬೇಕಾದ ಪ್ರತಿಕಾಯಗಳನ್ನು ವೃದ್ಧಿಸುತ್ತದೆ ಎಂದು ಎಂಐಟಿಯ ತಜ್ಞರು ತಿಳಿಸಿದ್ದಾರೆ.

ಪ್ರಸ್ತುತ, ಈ ಲಸಿಕೆಯ ಮೊದಲ ಡೋಸ್ ಆವೃತ್ತಿಯನ್ನು ಕ್ಲಿನಿಕಲ್ ಪ್ರಯೋಗಗಳಲ್ಲಿ ಪರೀಕ್ಷಿಸಲಾಗುತ್ತಿದೆ. ಇದರ ನಡುವೆ ಸಂಶೋಧಕರು ಎರಡು ಡೋಸ್ ಆವೃತ್ತಿಯನ್ನು ಪರೀಕ್ಷಿಸಲು ಪ್ರಯೋಗಗಳನ್ನು ನಡೆಸುವುದಕ್ಕೆ ಕೆಲಸ ಮಾಡುತ್ತಿದ್ದಾರೆ. ಈ ವಿಧಾನವು ಇತರ ಲಸಿಕೆಗಳಿಗೆ ಹೆಚ್ಚು ಪರಿಣಾಮಕಾರಿಯಾಗಿರಲಿದೆ ಎಂದು ಯೋಜನೆಯ ಪ್ರಮುಖ ಸಂಶೋಧಕ ಪ್ರೊಫೆಸರ್ ಅರೂಪ್ ಚಕ್ರವರ್ತಿ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಡಿನೋಟಿಫಿಕೇಷನ್ ಹಗರಣ: ಲೋಕಾಯುಕ್ತ ತನಿಖೆ ತೆವಳುತ್ತಿರುವುದೇಕೆ?

ಮೊದಲ ಡೋಸ್ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸಕ್ರಿಯಗೊಳಿಸಿದರೆ, ಎರಡನೇ ಡೋಸ್‌ ಹೆಚ್ಚು ಪ್ರತಿರಕ್ಷಣಾ ವ್ಯವಸ್ಥೆಯ ಪ್ರತಿಕ್ರಿಯೆಯನ್ನು ಮತ್ತಷ್ಟು ಸಕ್ರಿಯಗೊಳಿಸುತ್ತದೆ. ಈ ಹೊಸ ವಿಧಾನವನ್ನು ಕಂಪ್ಯೂಟೇಶನಲ್ ಮಾಡೆಲಿಂಗ್ ಮೂಲಕ ಅಭಿವೃದ್ಧಿಪಡಿಸಲಾಗಿದೆ. ಇವುಗಳನ್ನು ಮೊದಲು ಇಲಿಗಳಲ್ಲಿ ಪರೀಕ್ಷಿಸಲಾಗಿದೆ.

ಪ್ರತಿ ವರ್ಷ ಸುಮಾರು 10 ಲಕ್ಷ ಮಂದಿ ಎಚ್ಐವಿ ಸೋಂಕಿಗೆ ತುತ್ತಾಗುತ್ತಿದ್ದಾರೆ. ಲಸಿಕೆ ಇಲ್ಲದಿರುವುದು ಸಹ ಇದಕ್ಕೆ ಪ್ರಮುಖ ಕಾರಣ. ಈಗ ಲಸಿಕೆ ಅಭಿವೃದ್ಧಿಪಡಿಸುವುದರಿಂದ ಸೋಂಕು ಹರಡುವುದನ್ನು ತಡೆಗಟ್ಟಬಹುದು ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ | ಮಧುಮೇಹಿಗಳ ಪೈಕಿ ಪ್ರತಿ 10ರಲ್ಲಿ 4 ಮಂದಿಗೆ ಕಾಯಿಲೆಯ ಅರಿವೇ ಇಲ್ಲ: ವರದಿ

ವಿಶ್ವದಲ್ಲಿ ಅತೀ ಹೆಚ್ಚು ಮಧುಮೇಹಿಗಳನ್ನು ಹೊಂದಿರುವ ದೇಶಗಳ ಪೈಕಿ ಭಾರತವು ಎರಡನೇ...

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ದಾವಣಗೆರೆ | ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಸ್ವಾರ್ಥ, ಉಳ್ಳವರ ಪರ ನೀತಿ; ಆಶಾ ಹೋರಾಟದಲ್ಲಿ ಎಸ್ ಯುಸಿಐ ನ ಡಾ. ಸುನಿಲ್ ಕುಮಾರ್

"ಆಶಾ ಕಾರ್ಯಕರ್ತೆಯರು ಎತ್ತಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದೆ, ಸರ್ಕಾರ ಕೂಡಲೇ ಈ ಬೇಡಿಕೆಗಳನ್ನು...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

Download Eedina App Android / iOS

X