ನಂದಿನಿ ಹೊರತುಪಡಿಸಿ ಉಳಿದ ತುಪ್ಪದ ಮಾದರಿಗಳ ಪರಿಶೀಲನೆಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

Date:

Advertisements

ನಂದಿನಿ ತುಪ್ಪ ಹೊರತುಪಡಿಸಿ, ರಾಜ್ಯದಲ್ಲಿ ಮಾರಾಟವಾಗುತ್ತಿರುವ ಉಳಿದ ತುಪ್ಪದ ಮಾದರಿಗಳನ್ನು ಸಂಗ್ರಹಿಸಿ ಅದರ ಗುಣಮಟ್ಟ ಕಾಪಾಡಲು ಪರಿಶೀಲನೆ ಮಾಡಬೇಕು. ಪ್ರಸಾದಗಳ ಮಾದರಿ ಪರಿಶೀಲನೆ ಅಲ್ಲ, ನೇರವಾಗಿ ತುಪ್ಪದ ಪರಿಶೀಲನೆ ಮಾಡಬೇಕು ಎಂದು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಳಸುತ್ತಿರುವ ತುಪ್ಪದ ಬಗ್ಗೆ ತಪಾಸಣೆಗೊಳಸಲು ನಮ್ಮ ಆಹಾರ ಸುರಕ್ಷತಾ ಆಯುಕ್ತರಿಗೆ ಹೇಳಿದ್ದೇನೆ. ಈಗಾಗಲೇ ಮಾದರಿ ಸಂಗ್ರಹಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ತಿರುಪತಿಯಲ್ಲಿ ಆದ ರೀತಿ ಕೊಬ್ಬಿನ ಅಂಶಗಳು ಇಲ್ಲಿ ಬಳಕೆಯಾಗುತ್ತಿರುವ ತುಪ್ಪದಲ್ಲಿ ಇದೆಯಾ ಎಂದು ನೋಡುತ್ತಿದ್ದೇವೆ. ತಮಿಳುನಾಡು ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಇಲ್ಲಿಗೆ ತುಪ್ಪ ಬರುತ್ತದೆ. ಎಲ್ಲ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲಿಸಲು ಹೇಳಿದ್ದೇನೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

Advertisements

ಪ್ರಸಾದದ ಪರಿಶೀಲನೆ ನಾವು ಮಾಡುತ್ತಿಲ್ಲ. ಬೇರೆ ಪದಾರ್ಥಗಳಲ್ಲಿ ಕಲಬೆರಕೆ ಆಗುವ ಸಾಧ್ಯತೆ ಕಡಿಮೆ. ಆದರೆ ಆಂಧ್ರ ಮುಖ್ಯಮಂತ್ರಿ ತುಪ್ಪದಲ್ಲಿ ಬೇರೆ ಬೇರೆ ಕೊಬ್ಬಿನಾಂಶ ಇತ್ತೆಂದು ಹೇಳಿರುವುದು ಆತಂಕಕಾರಿಯಾದ ವಿಚಾರ. ಒಬ್ಬ ಸಿಎಂ ಹೇಳಿದ ಮೇಲೆ ನಾವು ಅದನ್ನು ಗಂಭೀರವಾಗಿ ಪರಿಗಣಿಸಬೇಕು. ದೇವರ ಬಗ್ಗೆ ಶ್ರದ್ಧೆ ಇರೋರಿಗೆ ಈ ವಿಚಾರ ಬಹಳ ಆಘಾತಕಾರಿಯಾಗಿದೆ. ಹೀಗಾಗಿ ರಾಜ್ಯದಲ್ಲಿ ಪರಿಶೀಲನೆ ಮಾಡಿ ಎಂದು ಹೇಳಿದ್ದೇವೆ ಎಂದರು.

ವರದಿಯಲ್ಲಿ ಏನು ಬರುತ್ತೆ ಎಂದು ತಿಳಿದುಕೊಳ್ಳೋಣ. ಯಾಕೆಂದರೆ ಜನರಿಗೆ ಈ ವಿಚಾರದಲ್ಲಿ ಬಹಳ ಗೊಂದಲ ಶುರುವಾಗಿದೆ. ತಿರುಪತಿ ಲಡ್ಡು ವಿಚಾರದಲ್ಲಿ ಈ ರೀತಿ ಇದೆ ಎಂದು ಆದಾಗ ಯಾರನ್ನ ನಂಬಬೇಕು ಅನ್ನುವ ಪ್ರಶ್ನೆ ಎದುರಾಗಿದೆ. ನಾಳೆ ಪ್ರಸಾದವನ್ನು ಸ್ವೀಕರಿಸದೆ ಇರುವಂತ ಪರಿಸ್ಥಿತಿ ಹೋಗಬಹುದು. ಹಾಗಾಗಿ ನಮ್ಮ ಕಡೆಯಿಂದ ಪರಿಶೀಲನೆ ಮಾಡಿಸುತ್ತಿದ್ದೇವೆ. ಮೊದಲು ವರದಿ ಬರಲಿ ಬಳಿಕ ಮುಂದಿನ ಕ್ರಮ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X