ಅಪರಿಚಿತ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ.
ಆಂಧ್ರಪ್ರದೇಶದ ಚೀಕಲಬೈಲು ಗ್ರಾಮದ ಗುಣಶೇಖರ್ (28) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಗುಣಶೇಖರ್ ರಾಯಲ್ಪಾಡು ನಿಂದ ಆಂಧ್ರ ಪ್ರದೇಶಕ್ಕೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಶ್ರೀನಿವಾಸಪುರ ತಾಲೂಕಿನ ಹಕ್ಕಿ ಪಿಕ್ಕಿ ಕ್ರಾಸ್ ಬಳಿ ಡಿಕ್ಕಿ ಹೊಡೆದು ಪರಾರಿಯಾಗಿದೆ.
ಇದನ್ನು ಓದಿದ್ದೀರಾ? ಚಿಕ್ಕಬಳ್ಳಾಪುರ | ಭೀಕರ ಅಪಘಾತ; ಮೂವರು ಸಾವು, ನಾಲ್ವರಿಗೆ ಗಾಯ
ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನ ತಲೆಯು ದೇಹದಿಂದ ಬೆರ್ಪಟ್ಟಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
