ಭಾಲ್ಕಿ | ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ

Date:

Advertisements

ಪ್ರತಿಯೊಂದು ಮಗುವಿನಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಪ್ರತಿಭೆ ಅನಾವರಣಕ್ಕೆ ವೇದಿಕೆ ಒದಗಿಸಿಕೊಡುವುದೇ ಪ್ರತಿಭಾ ಕಾರಂಜಿ ಆಗಿದೆ ಎಂದು ಶಿಕ್ಷಣ ಸಂಯೋಜಕ ಮಲ್ಲಿಕಾರ್ಜುನ ಕನ್ನಾಳೆ ಹೇಳಿದರು.

ಭಾಲ್ಕಿ ತಾಲೂಕಿನ ಡೋಣಗಾಪುರ ರಾಚೋಟೇಶ್ವರ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದ್ದ 2024-25ನೇ ಸಾಲಿನ ಡೋಣಗಾಪುರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ʼವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಲ್ಲಿಯೂ ತೊಡಗಿಸಿಕೊಳ್ಳಬೇಕು. ಒಂದೇ ಪ್ರಯತ್ನದಿಂದ ಗುರಿ ತಲುಪಲು ಸಾಧ್ಯವಿಲ್ಲ. ನಿರಂತರ ಪ್ರಯತ್ನ, ತಾಳ್ಮೆ ಮೈಗೂಡಿಸಿಕೊಂಡರೆ ಸಾಧನೆ ಶಿಖರ ಮುಟ್ಟಬಹುದುʼ ಎಂದು ಸಲಹೆ ನೀಡಿದರು.

Advertisements

ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದತ್ತಾತ್ರಿ ಕಾಟಕರ ಮಾತನಾಡಿ, ʼಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಹೆಚಿಸುತ್ತವೆ. ಹೆಚ್ಚಿನ ವಿದ್ಯಾರ್ಥಿಗಳು ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಶಿಕ್ಷಕರು ಪ್ರೇರಣೆ ನೀಡಬೇಕುʼ ಎಂದರು.

WhatsApp Image 2024 09 23 at 7.44.11 AM

ಸಿಆರ್‌ಪಿ ಚಂದ್ರಕಾಂತ ತಳವಾಡೆ ಮಾತನಾಡಿ, ʼಸ್ಪರ್ಧೆಯಲ್ಲಿ ಗೆಲವು ಸಾಧಿಸಲೆಂದೇ ಸ್ಪರ್ಧಿಸಬಾರದು. ಸೋಲು-ಗೆಲುವು ಸರ್ವೇಸಾಮಾನ್ಯ. ಆದರೆ ಎಲ್ಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಅನಾವರಣಗೊಳಿಸುವುದು ಮುಖ್ಯವಾಗಿದೆʼ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಹಿಂದೂ-ಮುಸ್ಲಿಮರು ಶತ್ರುಗಳಲ್ಲ : ಅಕ್ಬರ್‌ ಅಲಿ

ಕಾರ್ಯಕ್ರಮದಲ್ಲಿ ಡೋಣೆಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೀರಶೆಟ್ಟಿ ಬಿರಾದಾರ, ಡೋಣಗಾಪುರ ಪಂಚಾಯತ್ ಅಧ್ಯಕ್ಷ ಸುರೇಶ ಮೋರೆ, ಪಿಕೆಪಿಎಸ್ ಅಧ್ಯಕ್ಷ ಶಾಂತವೀರ ಪಾಟೀಲ, ಶಿವರಾಜ ಪಾಟೀಲ, ಸಂಜಯ ಪುರಿ, ಶಿವರಾಜ ಘೋದೆ, ಕೃಷ್ಣ, ವಿಶ್ವನಾಥ, ಉತ್ತಮ ಸಿಂಧೆ, ಸತ್ಯವಾನ ಕಾಂಬಳೆ, ಜಗನಾಥ ನಾಟೆಕಾರ, ಸರಿತಕುಮಾರಿ, ಪದ್ಮಾವತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಚನ್ನಪ್ಪ ಚಿದ್ರೆ ನಿರೂಪಿಸಿದರು, ಗಂಗಾಧರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X