ರಾಜಸ್ಥಾನದ ಜೈಪುರದಲ್ಲಿ ಸೆಪ್ಟೆಂಬರ್ 22ರಂದು ನಡೆದ ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆಯಲ್ಲಿ 18 ವರ್ಷದ ರಿಯಾ ಸಿಂಘಾ ಅವರು ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.
ಸುಮಾರು 51 ಫೈನಲಿಸ್ಟ್‌ಗಳು ಈ ಸ್ಪರ್ಧೆಯಲ್ಲಿದ್ದು ಈ ಪೈಕಿ ರಿಯಾ ಪ್ರಶಸ್ತಿಯನ್ನು ಗೆದಿದ್ದು, ಮಿಸ್ ಯೂನಿವರ್ಸ್ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಮಿಸ್ ಯೂನಿವರ್ಸ್ ಇಂಡಿಯಾ 2024 ಸ್ಪರ್ಧೆಯಲ್ಲಿ ಪ್ರಾಂಜಲ್ ಪ್ರಿಯಾ ದ್ವಿತೀಯ ಸ್ಥಾನವನ್ನು ಪಡೆದರೆ, ಛವಿ ವರ್ಗ್ ಮೂರನೇ ಸ್ಥಾನವನ್ನು ಪಡೆದಿದ್ದಾರೆ. ನಂತರದ ಸ್ಥಾನವನ್ನು ಸುಶ್ಮಿತಾ ರಾಯ್, ರೂಪ್ಫುಝಾನೊ ವಿಸೊ ಅಲಂಕರಿಸಿದ್ದಾರೆ.
ಇದನ್ನು ಓದಿದ್ದೀರಾ? ಮಿಸ್ ಯೂನಿವರ್ಸ್ ಆಗಿ ಆಯ್ಕೆಯಾದ ಶೆನ್ನಿಸ್ ಪಲಾಸಿಯೋಸ್
18 ವರ್ಷದ ರಿಯಾ ಗುಜರಾತ್ ಮೂಲದವರಾಗಿದ್ದು, ಈಗ ಮೆಕ್ಸಿಕೋದಲ್ಲಿ ನಡೆಯಲಿರುವ ಮಿಸ್ ಯೂನಿವರ್ಸ್ 2024ರಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ರಿಯಾ, “ಇಂದು ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಪ್ರಶಸ್ತಿಯನ್ನು ಗೆದ್ದಿದ್ದೇನೆ. ನಾನು ತುಂಬಾ ಕೃತಜ್ಞಳಾಗಿದ್ದೇನೆ. ಈ ಮಟ್ಟಕ್ಕೆ ಬರಲು ನಾನು ತುಂಬಾ ಕೆಲಸ ಮಾಡಿದ್ದೇನೆ. ಈ ಕಿರೀಟಕ್ಕೆ ನಾನು ಸಾಕಷ್ಟು ಅರ್ಹಳೆಂದು ಅಂದುಕೊಂಡಿದ್ಧೇನೆ. ಈ ಹಿಂದಿನ ವಿಜೇತರಿಂದ ನಾನು ತುಂಬಾ ಸ್ಫೂರ್ತಿ ಪಡೆದಿದ್ದೇನೆ” ಎಂದು ಹೇಳಿದರು.
VIDEO | "I feel incredible and it has (always) been a dream. I think it will take me some time to process this but to say that I feel grateful would be an understatement," says Rhea Singha on being crowned Miss Universe India 2024.
— Press Trust of India (@PTI_News) September 22, 2024
(Full video available on PTI Videos -… pic.twitter.com/t4FsSoaXFh
