ಬೆಂಗಳೂರು | ಕೆರೆಯಲ್ಲಿ ಈಜಲು ಹೋದ ಪಾನಮತ್ತ ಯುವಕ ನೀರಿನಲ್ಲಿ ಮುಳುಗಿ ಸಾವು

Date:

Advertisements

ಮದ್ಯ ಸೇವಿಸಿ ಕೆರೆಯಲ್ಲಿ ಈಜಲು ಹೋಗಿ ಸುಮಾರು 22ರ ಹರೆಯದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಪೂರ್ವ ಬೆಂಗಳೂರು ಪ್ರದೇಶದಲ್ಲಿ ಭಾನುವಾರ ನಡೆದಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಮೃತರನ್ನು ನೇಪಾಳ ಮೂಲದ ಅನಿಲ್ ಎಂದು ಗುರುತಿಸಲಾಗಿದೆ. ನಗರದಲ್ಲಿ ಹೌಸ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಅನಿಲ್ ನೀರಿನಲ್ಲಿ ಮುಳುಗಿ ಹೋಗುವ ದೃಶ್ಯವನ್ನು ಆತನ ಸ್ನೇಹಿತರೊಬ್ಬರು ಫೋನ್‌ನಲ್ಲಿ ಸೆರೆಹಿಡಿದಿದ್ದಾರೆ ಎನ್ನಲಾಗಿದೆ. ಸಾಮಾಜಿಕ ಮಾಧ್ಯಮದ ರೀಲ್‌ಗಾಗಿ ಈ ವಿಡಿಯೋವನ್ನು ಮಾಡಲಾಗಿದ್ದು, ಆದರೆ ಈ ವೇಳೆ ಅನಿಲ್ ನೀರಿನಲ್ಲಿ ಮುಳುಗಿರುವುದು ಸೆರೆಯಾಗಿದೆ.

Advertisements

ಮನೆಗೆಲಸ ಮಾಡುವ ದಿನೇಶ್ ಮತ್ತು ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡುವ ಉಪೇಂದ್ರ ಎಂಬ ಇಬ್ಬರು ಗೆಳೆಯರೊಂದಿಗೆ ಅನಿಲ್ ಸಂಜೆ 4 ಗಂಟೆಗೆ ಪಾಣತ್ತೂರು ಕೆರೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಬಟ್ಟೆ ತೊಳೆಯಲು ಹೋಗಿದ್ದ ವ್ಯಕ್ತಿ ಭೀಮಾ ನದಿಯಲ್ಲಿ ಮುಳುಗಿ ಸಾವು

ಮೂವರೂ ನೇಪಾಳ ಮೂಲದವರಾಗಿದ್ದು, ಕೆಲಸ ಹುಡುಕಿಕೊಂಡು ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಮೂವರು ಮದ್ಯ ಸೇವನೆ ಮಾಡಿ ಕೆರೆಗೆ ಈಜಲು ಹೋಗಿದ್ದರು. ಅನಿಲ್ ಮತ್ತು ದಿನೇಶ್ ಈಜಿದರೆ, ಉಪೇಂದ್ರ ಕೆರೆ ದಡದಲ್ಲೇ ಕುಳಿತಿದ್ದರು ಎಂದು ವರದಿಯಾಗಿದೆ.

“ಈಜು ತಿಳಿದಿದ್ದರೂ ಕೂಡಾ ಮದ್ಯಪಾನದಿಂದಾಗಿ ಅನಿಲ್‌ಗೆ ಈಜಲು ಸಾಧ್ಯವಾಗಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಇನ್ನು ಈಗಾಗಲೇ ಇತ್ತೀಚೆಗೆ ನಡೆದ ಅಪಘಾತ ಒಂದರಲ್ಲಿ ಅನಿಲ್ ತಲೆಗೆ ಸಣ್ಣ ಗಾಯವಾಗಿತ್ತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X