ಆಸ್ಕರ್ 2025 | ಭಾರತವನ್ನು ಪ್ರತಿನಿಧಿಸಲಿದೆ ಕಿರಣ್ ರಾವ್ ನಿರ್ದೇಶನದ ‘ಲಾಪತಾ ಲೇಡೀಸ್’

Date:

Advertisements

2025ನೇ ಸಾಲಿನ ಆಸ್ಕರ್ ಪ್ರಶಸ್ತಿಗೆ ಭಾರತವನ್ನು ಪ್ರತಿನಿಧಿಸುವ ಸಿನಿಮಾವಾಗಿ ಕಿರಣ್ ರಾವ್ ಅವರ ನಿರ್ದೇಶನದ ‘ಲಾಪತಾ ಲೇಡೀಸ್’ ಅನ್ನು ಆಯ್ಕೆ ಮಾಡಲಾಗಿದೆ. ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾ (ಎಫ್‌ಎಫ್‌ಐ) ಆಸ್ಕರ್ 2025ಕ್ಕೆ ‘ಲಾಪತಾ ಲೇಡೀಸ್’ ಸಿನಿಮಾವನ್ನು ಆಯ್ಕೆ ಮಾಡಿದೆ.

ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಎಫ್‌ಎಫ್‌ಐ ಸದಸ್ಯರು ಲಾಪತಾ ಲೇಡೀಸ್ ಅನ್ನು ಅಕಾಡೆಮಿ ಪ್ರಶಸ್ತಿಗೆ ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ ಎಂದು ಘೋಷಿಸಿದ್ದಾರೆ.

ಇದನ್ನು ಓದಿದ್ದೀರಾ? ಕಾರಿನಲ್ಲಿ ಪತ್ತೆಯಾದ ಆಸ್ಕರ್ ಪ್ರಶಸ್ತಿ ವಿಜೇತ ಚಿತ್ರದ ನಟ ಲೀ ಸನ್ ಕ್ಯುನ್ ಶವ

Advertisements

ಈ ಸಿನಿಮಾವನ್ನು ಕಿರಣ್ ರಾವ್ ನಿರ್ದೇಶಿಸಿದ್ದು ಅಮೀರ್ ಖಾನ್ ನಿರ್ಮಿಸಿದ್ದಾರೆ. ಪ್ರತಿಭಾ ರಂತ, ಸ್ಪರ್ಶ ಶ್ರೀವಾಸ್ತವ ಮತ್ತು ನಿತಾಂಶಿ ಗೋಯೆಲ್ ಈ ಸಿನಿಮಾದಲ್ಲಿ ಪಾತ್ರಗಳಿಗೆ ಜೀವ ತುಂಬಿದ್ದಾರೆ.

ಒಟ್ಟು 29 ಸಿನಿಮಾಗಳು ಆಸ್ಕರ್ 2025ಕ್ಕೆ ಆಯ್ಕೆ ಮಾಡಲು ಪಟ್ಟಿಯಾಗಿತ್ತು. ರಣಬೀರ್ ಕಪೂರ್ ಅವರ ಅನಿಮಲ್, ಕಾರ್ತಿಕ್ ಆರ್ಯನ್ ಅವರ ಚಂದು ಚಾಂಪಿಯನ್, ಪ್ರಭಾಸ್ ಅವರ ಕಲ್ಕಿ 2898 ಎಡಿ, ರಾಷ್ಟ್ರ ಪ್ರಶಸ್ತಿ ಗಳಿಸಿದ ಮಲಯಾಳಂ ಚಿತ್ರ ಆಟಮ್, ರಾಜ್‌ಕುಮಾರ್ ರಾವ್ ಅವರ ಶ್ರೀಕಾಂತ್ ಮತ್ತು ವಿಕ್ಕಿ ಕೌಶಲ್ ಅವರ ಸ್ಯಾಮ್ ಬಹದ್ದೂರ್ ಮುಂತಾದ ಸಿನಿಮಾಗಳಲ್ಲಿ ಆಸ್ಕರ್‌ಗೆ ಲಾಪತಾ ಲೇಡೀಸ್ ಆಯ್ಕೆಗೊಂಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರದೇಶದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ಸಾಕ್ಷಿ ದೂರುದಾರನ ಬಂಧನ

ಧರ್ಮಸ್ಥಳ ಪ್ರದೇಶದಲ್ಲಿ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ ಎಂಬ...

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X