ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಈ ನಡುವೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಜೀನಕೇರ ತಾಂಡಾ ಬಳಿಯ ಜಮೀನಿನಲ್ಲಿ ಸೋಮವಾರ ನಡೆದಿದೆ.
ಮೃತಪಟ್ಟವರನ್ನು ನೇನು (18), ಚೇನು (22), ಕಿಶನ್ (30) ಮತ್ತು ಸುಮಿಬಾಯಿ (30) ಎಂದು ಗುರುತಿಸಲಾಗಿದೆ. ಸಿಡಿಲು ಬಡಿದ ಇನ್ನೂ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ದಿಢೀರ್ ಕುಸಿದ ಅಂಗನವಾಡಿ ಮೇಲ್ಛಾವಣಿಯ ಕಾಂಕ್ರೀಟ್: ನಾಲ್ಕು ಮಕ್ಕಳಿಗೆ ಗಂಭೀರ ಗಾಯ
ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.