ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿಯ ತೀರ್ಪನ್ನು ಹೈಕೋರ್ಟ್ ಮಂಗಳವಾರ ಪ್ರಕಟಿಸಲಿದೆ.
ಈಗಾಗಲೇ ಎರಡು ಕಡೆಯ ವಾದವನ್ನು ಆಲಿಸಿ ವಿಚಾರಣೆ ಮುಕ್ತಾಯಗೊಳಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಾಳೆ ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದೆ. ಸಿದ್ದರಾಮಯ್ಯ ಪರವಾಗಿ ಹಿರಿಯ ಸುಪ್ರೀಂ ಕೋರ್ಟ್ ವಕೀಲ ಅಭಿಷೇಕ್ ಮನು ಸಿಂಘ್ವಿ ಸೇರಿದಂತೆ ಹಲವು ಮಂದಿ ವಾದಿಸಿದ್ದರು.
