ದಾವಣಗೆರೆ | ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧ ನೀತಿ ಖಂಡಿಸಿ ಪ್ರತಿಭಟನೆ

Date:

Advertisements

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಪಿಎಂಸಿ ಮತ್ತು ಭೂ ಸುಧಾರಣೆ ಕಾಯ್ದೆ ಮತ್ತು ರೈತರ, ಕಾರ್ಮಿಕರ ಕಾಯ್ದೆಗಳ ತಿದ್ದುಪಡಿಗಳನ್ನು ವಿರೋಧಿಸಿ ಅಖಿಲ ಭಾರತ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಜಂಟಿ ಹೋರಾಟ ಸಮಿತಿ ದಾವಣಗೆರೆ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಿದ್ದುಪಡಿಗಳನ್ನು ಈ ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿತು.

ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಅಖಿಲ ಭಾರತ ಸಂಯುಕ್ತ ಕಿಸಾನ್ ಮೋರ್ಚ ಮತ್ತು ಜಂಟಿ ಹೋರಾಟ ಸಮಿತಿಯ ಕಾರ್ಯಕರ್ತರು, ಮುಖಂಡರು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ರೈತ ಹೋರಾಟಗಾರರು, ಎಪಿಎಂಸಿ ಮತ್ತು ಭೂ ಸುಧಾರಣಾ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಹಳೆಯ ನಿಯಮಗಳಿಗೆ ತಿಲಾಂಜಲಿ ಇಟ್ಟು ರೈತರ ಬದುಕನ್ನು ಅವರ ಸ್ವಾತಂತ್ರ್ಯವನ್ನು ಕಸಿಯುವ ಕೆಲಸವನ್ನು ಸರ್ಕಾರಗಳು ಮಾಡುತ್ತಿವೆ. ಈ ಕೂಡಲೇ ಇದನ್ನು ಹಿಂಪಡೆಯಬೇಕು. ಕಾರ್ಮಿಕರ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಬಿಲ್‌ಗಳನ್ನಾಗಿಸಿದ್ದು ಇವುಗಳು ಕಾರ್ಮಿಕರ ಶೋಷಣೆಗೆ ಕಾರಣವಾಗಿವೆ. ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುತ್ತವೆ. ಹಾಗಾಗಿ ಈ ಕೂಡಲೇ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

Advertisements

ಇದನ್ನು ಓದಿದ್ದೀರಾ? ನಾಗಮಂಗಲ ಗಲಭೆ ಪ್ರಕರಣ | ಬಂಧನಕ್ಕೆ ಹೆದರಿ ಗ್ರಾಮ ತೊರೆದಿದ್ದ ಯುವಕ ‘ಬ್ರೈನ್ ಸ್ಟ್ರೋಕ್‌’ನಿಂದ ಸಾವು ವದಂತಿ; ಪೊಲೀಸರ ಸ್ಪಷ್ಟನೆ

ಪ್ರತಿಭಟನೆಯಲ್ಲಿ ಜಿಲ್ಲಾ ಮುಖಂಡರುಗಳಾದ ಚಂದ್ರು ಅವರಗೆರೆ, ಉಮೇಶ್ ಆವರಗೆರೆ, ಲಕ್ಷ್ಮಣ್ ವಾಸು ಅವರಗೆರೆ, ಐರಣಿ ಚಂದ್ರು, ಸತೀಶ್ ಅರವಿಂದ್, ಶಿವಕುಮಾರ್, ರಫಿಕ್ಅಹ್ಮದ್ ಇನ್ನಿತರ ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ದಾವಣಗೆರೆ | ಕೆರೆ ನೀರು ಪೋಲು, ನೀರಾವರಿ ಇಲಾಖೆ ನಿರ್ಲಕ್ಷ್ಯ; ದುರಸ್ತಿಗೆ ರೈತಸಂಘದ ಮುಖಂಡರ ಆಗ್ರಹ

"ಜಗಳೂರು ತಾಲೂಕಿನ ಭರಮ ಸಮುದ್ರ ಕೆರೆಯಲ್ಲಿ ಟ್ಯೂಬ್ ಗಳಲ್ಲಿ ನೀರು ಪೋಲಾಗುತ್ತಿದೆ....

Download Eedina App Android / iOS

X