- ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಟರ್ಮಿನಲ್ 2 ಉದ್ಘಾಟಣೆಯಾಗಿತ್ತು
- ಕೇವಲ 30 ನಿಮಿಷ ಸುರಿದ ಮಳೆಗೆ ಟರ್ಮಿನಲ್‌ನಲ್ಲಿ ನೀರು ತುಂಬಿಕೊಂಡಿದೆ ಎಂದು ನೆಟ್ಟಿಗರ ಆಕ್ರೋಶ
ರಾಜ್ಯ ರಾಜಧಾನಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹5000 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಟರ್ಮಿನಲ್-2ನಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ. ಇದನ್ನು ಕಂಡ ನೆಟ್ಟಿಗರು ಅಪಹಾಸ್ಯ ಮಾಡುತ್ತಿದ್ದು, ಆಕ್ರೋಶವೂ ವ್ಯಕ್ತವಾಗಿದೆ.
ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಟರ್ಮಿನಲ್-2ಅನ್ನು ಉದ್ಘಾಟಣೆ ಮಾಡಿದ್ದರು.
ಕೇವಲ 30 ನಿಮಿಷಗಳ ಕಾಲ ಸುರಿದ ಮಳೆಗೆ ಟರ್ಮಿನಲ್-2 ಮುಖ್ಯದ್ವಾರದಲ್ಲಿ ಮಳೆ ನೀರು ಸೋರಿಕೆಯಾಗಿದೆ ಮತ್ತು ಟರ್ಮಿಲ್‌ನ ಒಂದು ಬದಿಗೆ ನೀರು ನಿಂತಿದೆ. ‘₹5,000 ಕೋಟಿ ಟರ್ಮಿನಲ್‌ನ ನೈಜ ಮೌಲ್ಯ ಈಗ ಕಾಣುತ್ತಿದೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗುತ್ತಿದೆ.
“ಇದು ಅಮೆಜಾನ್ ಮಳೆಕಾಡಿನ ವಿಡಿಯೋ ಅಲ್ಲ. ಕರ್ನಾಟಕದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ನ ವೀಡಿಯೊ. ಮೊದಲ ಮಳೆಗೆ ₹5000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ವಿಮಾನ ನಿಲ್ದಾಣದ ಟರ್ಮಿನಲ್ ನೀರಿನಲ್ಲಿ ಮುಳುಗಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಹೊಸ ಮೂಲಸೌಕರ್ಯ” ಎಂದು ಸುಪ್ರೀಯಾ ಎಂಬುವವರು ಟ್ವೀಟ್ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ‘ಬುದ್ಧ ಪೂರ್ಣಿಮಾ’ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ
ಹೊಸ ಟರ್ಮಿನಲ್‌ನ ಕರ್ಬ್‌ಸೈಡ್‌ನಲ್ಲಿ ಮಳೆ ನೀರು ಸೋರಿಕೆಯಾಗಿರುವುದನ್ನು ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (ಬಿಐಎಎಲ್) ಟರ್ಮಿನಲ್-2ನ ನಿರ್ವಾಹಕರು ಖಚಿತಪಡಿಸಿದ್ದಾರೆ.
“ಮೇ 2ರಂದು ಸಂಜೆ ಸುರಿದ ಮಳೆಯಿಂದ ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ನ ಕೆರ್ಬ್‌ಸೈಡ್‌ನಲ್ಲಿ ಮಳೆ ನೀರು ಸೋರಿಕೆಯಾಗಿದೆ. ಬೆಂಗಳೂರಿನ ವಿಮಾನ ನಿಲ್ದಾಣದ ಎರಡು ಟರ್ಮಿನಲ್‌ಗಳಲ್ಲಿ ಮೂಲಸೌಕರ್ಯ ಮತ್ತು ಸುರಕ್ಷತೆಯ ಅತ್ಯುನ್ನತ ಗುಣಮಟ್ಟವನ್ನು ಕಾಪಾಡಿಕೊಳ್ಳಲು ನಾವು ಬದ್ಧರಾಗಿದ್ದೇವೆ. ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಸೂಚಿಸಲಾಗಿದೆ” ಎಂದು ಬಿಐಎಎಲ್ ವಕ್ತಾರರು ತಿಳಿಸಿದ್ದಾರೆ.
40% commission affect
ಆ 5000 ಕೋಟಿನಲ್ಲಿ 40% ಕಳೀರಿ,